1Crore Deal: 300 ಕೋಟಿ ರೂ. ಮೌಲ್ಯದ ಆಸ್ತಿ ಲಪಟಾಯಿಸಲು ಮಾವನನ್ನೇ ಕೊಲ್ಲಿಸಿದ ಸೊಸೆ!
ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಾರು, ಚಿನ್ನಾಭರಣ, ಮೊಬೈಲ್ ಫೋನ್ ವಶಕ್ಕೆ
Team Udayavani, Jun 12, 2024, 4:02 PM IST
ನಾಗ್ಪುರ್: ಹಿಟ್ & ರನ್ ಘಟನೆಯಲ್ಲಿ ಕೊನೆಯುಸಿರೆಳೆದಿದ್ದ 82 ವರ್ಷದ ಹಿರಿಯ ವ್ಯಕ್ತಿಯೊಬ್ಬರ ಸಾವಿನ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಮಹತ್ವದ ಸುಳಿವು ಸಿಗುವ ಮೂಲಕ ಇದೊಂದು ವ್ಯವಸ್ಥಿತ ಕೊಲೆ ಎಂಬುದು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
300 ಕೋಟಿ ರೂ. ಮೌಲ್ಯದ ಆಸ್ತಿಗಾಗಿ ಹತ್ಯೆ:
ಕುಟುಂಬದ 300 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಲಪಟಾಯಿಸುವ ನಿಟ್ಟಿನಲ್ಲಿ ಸೊಸೆಯೇ ಮಾವನನ್ನು ಕೊಲೆ ಮಾಡಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ್ ನಲ್ಲಿ ನಡೆದಿದೆ.
ಇದನ್ನೂ ಓದಿ:ಘೋಷಣೆ ಕೂಗಿದ ಕಾರ್ಯಕರ್ತರನ್ನು ಚೂರಿ ಇರಿದು ಹತ್ಯೆಗೆ ಯತ್ನ; ವಿ.ಹಿಂ.ಪ. ಬಜರಂಗದಳ ಖಂಡನೆ
ನಗರ ಯೋಜನಾ ಇಲಾಖೆಯ ಸಹಾಯಕ ನಿರ್ದೇಶಕಿಯಾಗಿರುವ ಅರ್ಚನಾ ಮನೀಶ್ ಪುಟ್ಟೇವಾರ್ ಎಂಬಾಕೆಯನ್ನು ಕಳೆದ ವಾರ ಬಂಧಿಸಲಾಗಿತ್ತು. ಪುರುಷೋತ್ತಮ್ ಪುಟ್ಟೇವಾರ್ ಅವರಿಗೆ ಕಾರನ್ನು ಡಿಕ್ಕಿ ಹೊಡೆಸಿ ಕೊಲ್ಲಿಸಲಾಗಿತ್ತು.
ಪೊಲೀಸರು ಪಿಟಿಐಗೆ ತಿಳಿಸಿರುವ ಮಾಹಿತಿ ಪ್ರಕಾರ, ಅರ್ಚನಾ ಪುಟ್ಟೇವಾರ್, ಮಾವನನ್ನು ಕೊಲೆಗೈಯಲು ಬಾಡಿಗೆ ಹಂತಕರನ್ನು ಕರೆಯಿಸಿ, ಒಂದು ಕೋಟಿ ರೂಪಾಯಿ ಹಣ ಪಾವತಿಸಿದ್ದಳು. ಈಗಾಗಲೇ ಬಳಸಿರುವ ಕಾರನ್ನು ಖರೀದಿಸಿ, ಮಾವನ ಹತ್ಯೆಗೆ ಸ್ಕೆಚ್ ಹಾಕಿದ್ದರು ಎಂದು ವರದಿ ತಿಳಿಸಿದೆ.
ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಎಲ್ಲಾ ರೀತಿಯ ಸನ್ನಿವೇಶ ಸೃಷ್ಟಿಸಿದ್ದರು. ತನ್ನ ಪತಿಯ ಕಾರು ಚಾಲಕ ಬಾಗ್ಡೇ ಹಾಗೂ ಇತರ ಇಬ್ಬರು ಆರೋಪಿಗಳಾದ ನೀರಜ್ ನಿಮ್ಜೇ, ಸಚಿನ್ ಧಾರ್ಮಿಕ್ ಜತೆಗೂಡಿ ಸಂಚು ರೂಪಿಸಲಾಗಿತ್ತು ಎಂದು ಪೊಲೀಸರ ವಿಚಾರಣೆಯಲ್ಲಿ ಬಹಿರಂಗವಾಗಿದೆ.
ಅಂದು ಏನಾಗಿತ್ತು?
ಪುರುಷೋತ್ತಮ್ ಪುಟ್ಟೇವಾರ್ ಅವರು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಪತ್ನಿ ಶಕುಂತಲಾ ಅವರ ಆರೋಗ್ಯ ವಿಚಾರಿಸಲು ತೆರಳಿದ್ದರು. ಆಸ್ಪತ್ರೆಯಿಂದ ಮನೆಗೆ ಮರಳುತ್ತಿದ್ದ ಪುರುಷೋತ್ತಮ್ ಅವರಿಗೆ ಬಾಡಿಗೆ ಕಾರಿನ ಮೂಲಕ ಡಿಕ್ಕಿ ಹೊಡೆಯಲಾಗಿತ್ತು. ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ನಂತರ ತನಿಖೆಯಲ್ಲಿ ಸತ್ಯ ಬಯಲಿಗೆ ಬಂದಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಾರು, ಚಿನ್ನಾಭರಣ, ಮೊಬೈಲ್ ಫೋನ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ಆರೋಪಿಗಳ ವಿರುದ್ಧ ಕೊಲೆ ಮತ್ತು ಮೋಟಾರು ವಾಹನ ಕಾಯ್ದೆಯಡಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.