ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ಕೆ ಮಾತ್ರ ಮೊಬೈಲ್ ಬಳಕೆ: ಸಚಿವ ಸುರೇಶ್ ಕುಮಾರ್
Team Udayavani, Jan 27, 2020, 4:26 PM IST
ಕಲಬುರಗಿ: ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಬಗ್ಗೆ ಚಿಂತನೆ ಮಾಡಲಾಗುತ್ತಿದ್ದು, ಶಿಕ್ಷಕರು ಶೈಕ್ಷಣಿಕ ಕಾರ್ಯಗಳಿಗೆ ಮಾತ್ರ ತಮ್ಮ ಮೊಬೈಲ್ ಬಳಸಬೇಕೆಂದು ಸೂಚಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ನಗರದಲ್ಲಿ 101 ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಅವಧಿಯಲ್ಲಿ ಶೈಕ್ಷಣಿಕ ವಿಚಾರ ಹೊರತುಪಡಿಸಿ ಶಿಕ್ಷಕರು ಮೊಬೈಲ್ ಬಳಕೆ ಮಾಡಬಾರದು ಅಂತಾ ಬಿಇಒ, ಡಿಡಿಪಿಐ ಮೂಲಕ ಈಗಾಗಲೇ ಹೇಳುತ್ತಿದ್ದೇವೆ ಎಂದು ತಿಳಿಸಿದರು.
ಮೊಬೈಲ್ ಬಳಕೆಯಿಂದ, ಪಬ್ ಜೀ ಅಂತಹ ಗೇಮ್ ಗಳಿಂದ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಸಂಗ ನೋಡಿದ್ದೇವೆ. ರಾಜ್ಯದ ಹಲವು ತಾಲೂಕುಗಳಲ್ಲಿ ಪೋಷಕರು ಕೂಡ ಮಕ್ಕಳಿಗೆ ಹೋಮ್ ವರ್ಕ್ ಮಾಡಿಸುವ ವೇಳೆ ಮೊಬೈಲ್ ಬಳಕೆ ಮಾಡದಿರಲು ಪ್ರತಿಜ್ಞೆ ಮಾಡಿದ್ದಾರೆ. ಕೆಲವರು ಕೇಬಲ್ ಕಟ್ ಮಾಡಿಸಿದ್ದಾರೆ ಎಂದರು.
ಮೊಬೈಲ್ ಬಳಕೆ ಮಾಡಲೇ ಬಾರದು ಅನ್ನೋದು ತಪ್ಪು. ಮೊಬೈಲ್ ನಿಂದ ಸಾಕಷ್ಟು ಅನುಕೂಲ ಇದೆ. ಆದರೆ ಮಕ್ಕಳನ್ನು ಮೊಬೈಲ್ ನಿಂದ ದೂರು ಇರುವ ಹಾಗೆ ನೋಡಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.
ಬ್ಯಾಗ್ ಲೆಸ್ ಡೇ: ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರತಿ ತಿಂಗಳ ಎರಡು ಶನಿವಾರ ಬ್ಯಾಗ್ ಲೆಸ್ ಡೇ ಮಾಡುವ ಚಿಂತನೆ ಕೂಡ ನಡೆದಿದೆ ಎಂದು ಸಚಿವ ಸುರೇಶ್ ಕುಮಾರ್ ಇದೇ ವೇಳೆ ತಿಳಿಸಿದರು.
ತಿಂಗಳ ಎಲ್ಲ ಶನಿವಾರ ಅಥವಾ ಎರಡು ವಾರ ಮಾತ್ರವೇ ಮಾಡಬೇಕೆಂಬ ಚರ್ಚೆ ನಡೆಯುತ್ತಿದೆ. ಬ್ಯಾಗ್ ಲೆಸ್ ಡೇ ದಿನ ಶಾಲೆಯಲ್ಲಿ ಪಾಠ ಇರುವುದಿಲ್ಲ. ಬದಲಾಗಿ ಆಟದ ಜೊತೆಗೆ ಇತರೆ ಚಟುವಟಿಕೆಗಳು ಇರುತ್ತವೆ. ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಕರೇ ಪೋಷಕರಾಗಬೇಕು ಅಂತಾ ಹೇಳಿದರು.
ಹತ್ತನೇ ತರಗತಿ ಪರೀಕ್ಷೆಗೆ ಹೆಚ್ಚು ಒತ್ತು ಕೊಡುತ್ತಿದ್ದೇವೆ. ಅದೇ ರೀತಿ 7ನೇ ತರಗತಿಗೂ ಹೆಚ್ಚು ಒತ್ತು ಕೊಡಲಾಗುತ್ತಿದೆ. 7ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ಅಂತಾ ಮಾಡಲು ತೀರ್ಮಾನ ಮಾಡಲಾಗುತ್ತಿದೆ. ಆದರೆ ಯಾರನ್ನು ಫೇಲ್ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.
ಪರೀಕ್ಷಾ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಕಲಬುರಗಿಯನ್ನು ಎರಡು ಶೈಕ್ಷಣಿಕ ಜಿಲ್ಲೆಗಳಾಗಿ ವಿಂಗಡಿಸುವ ಯೋಚನೆ ಇದೆ. ಈ ಬಗ್ಗೆ ಮುಂದಿನ ವರ್ಷ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.