Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
ಆನ್‌ಲೈನ್‌ನಲ್ಲಿ ಅಪರಾಧ ದಾಖಲು ವ್ಯವಸ್ಥೆ: ಅರಣ್ಯ ಸಚಿವ ಈಶ್ವರ ಖಂಡ್ರೆ
Team Udayavani, Jan 8, 2025, 3:50 AM IST
ಬೆಂಗಳೂರು: ಅರಣ್ಯ ಒತ್ತುವರಿ, ಅಕ್ರಮವಾಗಿ ಮರಗಳ ಕಡಿತಲೆ, ಅತಿಕ್ರಮ ಪ್ರವೇಶ ಸೇರಿದಂತೆ ಯಾವುದೇ ರೀತಿಯ ಅರಣ್ಯ ಅಪರಾಧಗಳ ದಾಖಲೀಕರಣ ಮತ್ತು ನಿರ್ವಹಣೆಗೆ ಅರಣ್ಯ ಇಲಾಖೆ “ಗರುಡಾಕ್ಷಿ’ ಆನ್‌ಲೈನ್ ವ್ಯವಸ್ಥೆ ಪರಿಚಯಿಸಿದ್ದು, ಮುಂದಿನ ದಿನಗಳಲ್ಲಿ ಭಡ್ತಿ ನೀಡುವಾಗ ಈ ಆನ್‌ಲೈನ್ ವೇದಿಕೆಯಲ್ಲಿ ಸಿಬಂದಿಯ ಸಕ್ರಿಯತೆಯನ್ನೂ ಮಾನದಂಡವಾಗಿ ಪರಿಗಣಿಸಲು ಇಲಾಖೆ ಚಿಂತನೆ ನಡೆಸಿದೆ.
ಅರಣ್ಯ ಇಲಾಖೆಯು ವೈಲ್ಡ್‌ಲೈಫ್ ಟ್ರಸ್ಟ್ ಆಫ್ ಇಂಡಿಯಾ (ಡಬ್ಲ್ಯುಟಿಐ) ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್/ ಡಿಜಿಟಲ್ ಎಫ್ಐಆರ್ ವ್ಯವಸ್ಥೆಗೆ ಮಂಗಳವಾರ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಅನಂತರ ಈ ವಿಷಯ ತಿಳಿಸಿದ ಅವರು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು ಖಾತ್ರಿಪಡಿಸಲು ಆನ್‌ಲೈನ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರ, ಬೆಂಗಳೂರು ಅರಣ್ಯ ಸಂಚಾರಿ ದಳ, ಭದ್ರಾವತಿ, ಶಿರಸಿ ವಿಭಾಗ ಮತ್ತು ಮಲೈಮಹದೇಶ್ವರ ವನ್ಯಜೀವಿ ವಿಭಾಗಗಳಲ್ಲಿ ಜಾರಿಗೊಳಿಸಲಾಗುತ್ತದೆ. ಹಂತ-ಹಂತವಾಗಿ ಉಳಿದೆಡೆ ವಿಸ್ತರಿಸಲಾಗುವುದು ಎಂದರು.
ಸಾಮಾನ್ಯರಿಗೂ ಅವಕಾಶ?
ಪ್ರಸ್ತುತ ಆರ್‌ಎಫ್ಒ ಮತ್ತು ಅದಕ್ಕಿಂತ ಮೇಲಿನ ಹಂತದಲ್ಲಿರುವ ಅರಣ್ಯ ಇಲಾಖೆ ಸಿಬಂದಿಗೆ ದೂರು ದಾಖಲಿಸಲು ಈ ವೇದಿಕೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಯಾವ ವಲಯದಲ್ಲಿ ಹೆಚ್ಚು ಆನ್‌ಲೈನ್ ಎಫ್ಐಆರ್ ದಾಖಲಿಸಿ, ನಿಗದಿತ ಕಾಲಮಿತಿಯೊಳಗೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುತ್ತಾರೋ ಆ ವಲಯದ ಆರ್‌ಎಫ್ಒಗಳಿಗೆ ಭಡ್ತಿ ನೀಡುವಾಗ, ಇದನ್ನು ದಕ್ಷತೆಯ ಮಾನದಂಡವಾಗಿ ಪರಿಗಣಿಸುವ ಚಿಂತನೆ ಇದೆ ಎಂದ ಸಚಿವರು, ಬರುವ ದಿನಗಳಲ್ಲಿ ಸಾಮಾನ್ಯರಿಗೂ ಆನ್‌ಲೈನ್ ಮೂಲಕವೇ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.