ಅನಿವಾಸಿ ಕನ್ನಡಿಗರಿಗೆ ಉಚಿತ ಕ್ವಾರಂಟೈನ್ ವ್ಯವಸ್ಥೆ: ಪ್ರಹ್ಲಾದ್ ಜೋಷಿ ಭರವಸೆ
ಕನ್ನಡಿಗಾಸ್ ಹೆಲ್ಪ್ ಲೈನ್' ಸೇವೆಯ ಬಗ್ಗೆ ಪ್ರಧಾನಿ ಮೋದಿಯವರ ಗಮನಕ್ಕೂ ತರುವೆ
Team Udayavani, May 8, 2020, 9:49 PM IST
ಬೆಂಗಳೂರು: ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಅನಿವಾಸಿ ಭಾರತೀಯರನ್ನು ವಾಪಾಸು ತಾಯ್ನಾಡಿಗೆ ಕರೆತರುವ ಕಾರ್ಯಕ್ಕೆ ಭಾರತ ಸರ್ಕಾರ ಚಾಲನೆ ನೀಡಿದ್ದು,ಆರ್ಥಿಕ ಸಂಕಷ್ಟದಲ್ಲಿರುವ ಅನಿವಾಸಿಗಳಿಗೆ ಉಚಿತ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಭರವಸೆ ನೀಡಿದರು.
ದುಬೈನ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡದೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಮೇ 12ಕ್ಕೆ ನಿಗದಿಯಾಗಿದ್ದ ದುಬೈ – ಮಂಗಳೂರು ವಿಮಾನ ಸಂಚಾರ ಸಮಯ ಮರುನಿಗದಿಗೊಂಡು 14 ರಂದು ಸಂಜೆಗೆ ಹೊರಡಲಿರುವುದು.
ಭಾರತಕ್ಕೆ ವಾಪಾಸು ಬರಲಿರುವ ಅನಿವಾಸಿ ಕನ್ನಡಿಗರ ಪೈಕಿ ಹಲವಾರು ಜನ ಉದ್ಯೋಗ ಕಳೆದುಕೊಂಡವರು ಹಾಗೂ ವಿಸಿಟ್ ವಿಸಾದಲ್ಲಿ ಹೋಗಿ ಕೆಲಸ ಸಿಗದೇ ವಾಪಾಸಾಗುತ್ತಿರುವವರೂ ಇದ್ದಾರೆ, ಇವರಿಗೆ ಟಿಕೆಟ್ ಖರೀದಿಸಲೇ ಹಣದ ಕೊರತೆ ಇದ್ದು ಕ್ವಾರಂಟೈನ್ ಗೆ ಹಣನೀಡಲು ಸಂಪೂರ್ಣ ಅಶಕ್ತರಾದ ಕಾರಣ ಅಂತಹ ಕನ್ನಡಿಗರಿಗೆ ಉಚಿತವಾಗಿ ಕ್ವಾರಂಟೈನ್ ನೀಡಬೇಕೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿಯವರಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ದುಬೈ ಅನಿವಾಸಿ ಕನ್ನಡಿಗರ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ ಒತ್ತಾಯಿಸಿದಾಗ, ಸಚಿವ ಪ್ರಹ್ಲಾದ್ ಜೋಷಿ ಖಂಡಿತವಾಗಿಯೂ ಈ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಇದೀಗ ಮಂಗಳೂರಿಗೆ ಒಂದು ವಿಮಾನ ನಿಗದಿಯಾಗಿದೆ, ಅದೇ ರೀತಿ ಇನ್ನು ಎರಡು ವಿಮಾನಗಳು ಬೆಂಗಳೂರು ಮತ್ತು ಮಂಗಳೂರಿಗೆ ಕೂಡಲೇ ಹೊರಡಲು ನಿಗದಿಪಡಿಸಬೇಕು, ಕೇರಳದವರಿಗೆ ದಿನನಿತ್ಯ ಎರಡು ವಿಮಾನದ ವ್ಯವಸ್ಥೆಯಿದೆ, ಕನ್ನಡಿಗರರಿಗೆ ಕನಿಷ್ಠ ವಾರಕ್ಕೆ ಎರಡು ವಿಮಾನದ ವ್ಯವಸ್ಥೆ ಮಾಡುವಂತೆ ಮಾಡಿರುವ ಮನವಿಗೆ ಈ ಕುರಿತು ಸಂಬಂಧಪಟ್ಟ ಇಲಾಖೆಯಲ್ಲಿ ಮಾತನಾಡಿ ಕನ್ನಡಿಗರಿಗೂ ಈ ವಿಷಯದಲ್ಲಿ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ ಎಂದರು.
ಕನ್ನಡಿಗಾಸ್ ಹೆಲ್ಪ್ ಲೈನ್, ಹಲವಾರು ಕನ್ನಡಿಗರು ಸಣ್ಣ ಪುಟ್ಟ ದಂಡಕಟ್ಟಬೇಕಾದ ಸಮಸ್ಯೆಯಲ್ಲಿ ಸಿಲುಕಿದ್ದಾರೆ, ಅದನ್ನು ಕಟ್ಟದೇ ಪ್ರಯಾಣಿಸಲು ಅನುಮತಿ ಸಿಗದು, ಇದನ್ನು ಕೇಂದ್ರ ವಿದೇಶಾಂಗ ಇಲಾಖೆಯ ಮೂಲಕ ಯುಎಈ ಸರ್ಕಾರದ ಗಮನಕ್ಕೆ ತಂದು ಅವರ ದಂಡವನ್ನು ಮನ್ನಮಾಡಲು ಮನವಿ ಮಾಡಿದರೆ ಖಂಡಿತಾಗಿಯೂ ಇಲ್ಲಿನ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಮನವಿಮಾಡಿದಾಗ ಕೂಡಲೇ ಅಂತಹ ಸಂಕಷ್ಟದಲ್ಲಿರುವ ಕನ್ನಡಿಗರ ಮಾಹಿತಿ ಮತ್ತು ಸಂಪೂರ್ಣ ವಿವರಗಳೊಂದಿಗೆ ನನಗೆ ಇ ಮೈಲ್ ಮೂಲಕ ಕಳುಹಿಸಿ, ತಕ್ಷಣವೇ ಅದನ್ನು ವಿದೇಶಾಂಗ ಸಚಿವರ ಗಮನಕ್ಕೆ ತರುವುದಾಗಿ ಪ್ರಹ್ಲಾದ್ ಜೋಷಿ ಭರವಸೆ ನೀಡಿದರು.
ಇದೇ ವೇಳೆ, ಕನ್ನಡಿಗಾಸ್ ಹೆಲ್ಪ್ ಲೈನ್ ಯುಎಈಯಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗಾಗಿ ಮಾಡುತ್ತಿರುವ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೂ ತರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.