India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
Team Udayavani, Oct 24, 2024, 3:41 PM IST
ನವದೆಹಲಿ: ಕಳೆದ ಕೆಲವು ದಿನಗಳಿಂದ ಹಲವಾರು ವಿಮಾನಗಳಿಗೆ ಸುಳ್ಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ಗುರುವಾರ (ಅ.24)ವೂ ಇಂಡಿಗೋ, ಏರ್ ಇಂಡಿಯಾ, ವಿಸ್ತಾರಾ ಸೇರಿದಂತೆ ಕನಿಷ್ಠ 85 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿರುವುದಾಗಿ ವರದಿ ತಿಳಿಸಿದ್ದು, ಕಳೆದ 10 ದಿನಗಳಲ್ಲಿ 250ಕ್ಕೂ ಅಧಿಕ ಇಂತಹ ಬೆದರಿಕೆ ಕರೆಗಳು ಬಂದಿರುವುದಾಗಿ ಮೂಲಗಳು ತಿಳಿಸಿವೆ.
ಕಳೆದ ಮೂರ್ನಾಲ್ಕು ದಿನಗಳಲ್ಲಿ 170ಕ್ಕೂ ಅಧಿಕ ವಿಮಾನಗಳು ಬಾಂಬ್ ಬೆದರಿಕೆಯ ಕರೆ ಸ್ವೀಕರಿಸಿದ್ದವು. ಆದರೆ ಈ ಬಗ್ಗೆ ಶೋಧ ಕಾರ್ಯ ಹಾಗೂ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು ಇದೊಂದು ನಕಲಿ ಬೆದರಿಕೆ ಪ್ರಕರಣ ಎಂದು ತಿಳಿಸಿದ್ದಾರೆ.
ಹೀಗೆ ಅಸಲಿ, ನಕಲಿ ಸುದ್ದಿಯೊಳಗೆ ನೂರಾರು ಪ್ರಯಾಣಿಕರಿಗೆ ಭದ್ರತೆ ನೀಡುವ ತಲೆನೋವು ಒಂದು ಕಡೆಯಾದರೆ, ವಿಮಾನ ಪ್ರಯಾಣಿಕರಿಗೆ ಪ್ರಯಾಣದ ವ್ಯವಸ್ಥೆ ಕಲ್ಪಿಸುವುದು ಮತ್ತೊಂದು ಇಕ್ಕಟ್ಟಿನ ಸ್ಥಿತಿಯಾಗಿದೆ ಎಂದು ತಿಳಿಸಿದೆ.
ಇತ್ತೀಚೆಗೆ ನಕಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೊಂದು ಕಡಿವಾಣ ಹಾಕಬೇಕೆಂದು ಮುಂದಾಗಿರುವ ಕೇಂದ್ರ ಸರ್ಕಾರ, ಯಾರು ನಕಲಿ ಕರೆ ಮಾಡುವ ಕೃತ್ಯದಲ್ಲಿ ಶಾಮೀಲಾಗುತ್ತಾರೋ ಅವರಿಗೆ No fly ಲಿಸ್ಟ್ ಗೆ ಸೇರ್ಪಡೆಗೊಳಿಸುವ ಪ್ರಸ್ತಾಪ ಮುಂದಿಟ್ಟಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.