Gadag: ಆರ್‌ಸಿ ಬ್ರಿಗೇಡ್ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್ ಸಮಾವೇಶ: ಈಶ್ವರಪ್ಪ
ಬಿಜೆಪಿಯಲ್ಲಿ ಈಗ ಹಿಂದುತ್ವದ ತತ್ವ ಸಿದ್ಧಾಂತಗಳಿಲ್ಲ, ಸ್ವಜನ ಪಕ್ಷಪಾತವೇ ಹೆಚ್ಚಾಗಿದೆ: ಮಾಜಿ ಡಿಸಿಎಂ
Team Udayavani, Oct 8, 2024, 6:35 PM IST
ಗದಗ: ‘ರಾಯಣ್ಣ, ಚೆನ್ನಮ್ಮ ಬ್ರಿಗೇಡ್ಗೆ (ಆರ್‌ಸಿಬಿ) ಯಾವ ಹೆಸರಿಡಬೇಕು ಎಂಬ ಬಗ್ಗೆ ಚರ್ಚೆಯಾಗಿದೆ. ಇದೇ ತಿಂಗಳು 20ರಂದು ಬೃಹತ್ ಸಮಾವೇಶ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಂಘಟನೆಗೆ ಸಾಕಷ್ಟು ದೂರವಾಣಿ ಕರೆಗಳು ಬರುತ್ತಿದೆ. ಹೀಗಾಗಿ ಸಾಧು ಸಂತರ ಮಾರ್ಗದರ್ಶನದಲ್ಲಿ ಯಾವ ಹೆಸರಿಡಬೇಕು. ಯಾವ ರೂಪದಲ್ಲಿ ಸಂಘಟನೆ ತೆಗೆದುಕೊಂಡು ಹೋಗಬೇಕೆನ್ನುವುದು ಗೊತ್ತಾಗಲಿದೆ ಬಳಿಕ ಮುಂದಿನ ಚಟುವಟಿಕೆ ಆರಂಭ ಮಾಡುತ್ತೇವೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬರುತ್ತಾರೆ. ಹಾಗಂತ ಇದು ಈಶ್ವರಪ್ಪ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವ ಅಲ್ಲ, ಇದು ಸಾಧು ಸಂತರ ನೇತೃತ್ವದಲ್ಲಿ ನಡೆಯುತ್ತದೆ. ಇದಕ್ಕೆ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಕೂಡ ಬೆಂಬಲ ನೀಡಲಿದ್ದಾರೆ. ಆದರೆ ಹಿಂದುಳಿದವರಿಗೆ, ದಲಿತರಿಗೆ ಹಿಂದೂ ಸಮಾಜದಲ್ಲಿ ಯಾವ ಬೆಂಬಲವೂ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹೊಂದಾಣಿಕೆ ರಾಜಕಾರಣ ಮುಕ್ತಾಯವಾಗಲಿ:
ಇದೇ ವೇಳೆ ಬಿಜೆಪಿಯಲ್ಲಿ ಹಿಂದುತ್ವದ ತತ್ವ ಸಿದ್ಧಾಂತಗಳು ಈಗ ಇಲ್ಲ. ಈಗ ಹಿಂದುತ್ವ ಬಿಟ್ಟ ಬಿಜೆಪಿಯಲ್ಲಿ ಸ್ವಜನ ಪಕ್ಷಪಾತವೇ ಹೆಚ್ಚಾಗಿದೆ. ಇದಕ್ಕೆ ಸರಿಯಾಗಿ ತಡೆಯೊಡ್ಡಬೇಕಾಗಿದೆ. ಹಿಂದುತ್ವಕ್ಕೆ ಸರಿಯಾದ ಬೆಲೆ ಸಿಗಬೇಕು ಹಾಗೂ ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತವಾಗಬೇಕು. ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಪಕ್ಷದ ಭಿಕ್ಷೆಯಿಂದ ಶಾಸಕರಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಅದಕ್ಕೆ ಈ ವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಉತ್ತರ ನೀಡಿಲ್ಲ. ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು 10 ಸಾವಿರ ಮತಗಳಿಂದ ಗೆದ್ದರು. ಏನು ಹೊಂದಾಣಿಕೆಯಾಗಿತ್ತು ಎನ್ನುವುದು ಡಿ.ಕೆ. ಶಿವಕುಮಾರ್ ಬಹಿರಂಗ ಪಡಿಸಲಿ. ಈ ಹೊಂದಾಣಿಕೆ ರಾಜಕಾರಣ ಮುಕ್ತಾಯವಾಗಬೇಕು. ಈ ವಿಚಾರಗಳೆಲ್ಲ ಬಿಜೆಪಿಯಲ್ಲಿ ಚರ್ಚೆಯಾಗಬೇಕು, ಇವಾಗ ಆಗುತ್ತಿವೆ ಎಂದರು.
ಕುಟುಂಬ ರಾಜಕಾರಣದಿಂದ ಬಿಜೆಪಿಗೆ ಹಾನಿ:
ಅಮಿತ್ ಷಾ, ನಡ್ಡಾ ಮೋದಿಯವರು ನನ್ನನ್ನು ರಾಜ್ಯಾಧ್ಯಕ್ಷ ಮಾಡಿದ್ದಾರೆ. ಯಾರು ನಮ್ಮನ್ನು ಹೇಳುವವರು, ಕೇಳೋರು ಇಲ್ಲ ಎನ್ನುವ ದಾಟಿ ವಿರುದ್ಧ ಆರ್ಎಸ್ಎಸ್ ಸಭೆಯಲ್ಲಿ ಅವರನ್ನು ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಬೆಳೆದು ಬಂದಿದೆ. ಈವಾಗ ಒಂದು ಕುಟುಂಬದ ಕೈಗೆ ಸಿಕ್ಕಿರುವುದರಿಂದ ಶಾಸಕರ ಸಂಖ್ಯೆ ಕಡಿಮೆಯಾಗಿದೆ. ಇಡೀ ರಾಜ್ಯದ ಪ್ರಮುಖ ನಾಯಕರು ನೊಂದಿದ್ದಾರೆ. ಕುಟುಂಬ ರಾಜಕಾರಣ ಸರಿಯಿಲ್ಲ, ಹೊಂದಾಣಿಕೆ ರಾಜಕಾರಣಕ್ಕೆ ಪರಿಹಾರ ಕಂಡು ಹಿಡಿಯಬೇಕು, ಇದು ನಮ್ಮ ಪ್ರಯತ್ನ ಎಂದು ಈಶ್ವರಪ್ಪ ಹೇಳಿದರು.
ಇನ್ನು ಬಿಜೆಪಿಯಲ್ಲಿ ಅನ್ಯಾಯವಾಗಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ‘ಅನೇಕರಿಗೆ ಅನ್ಯಾಯವಾಗಿದೆ ಎಂದು ಸುಮ್ಮನೆ ಕುಳಿತುಕೊಂಡಿದ್ದಾರೆ. ಅನ್ಯಾಯ ಆಗಿದಕ್ಕೆ ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ದೇ. ಅದು ಕೇಂದ್ರ ನಾಯಕರಿಗೆ ಗೊತ್ತಾಗಲಿ ಎಂದು. ಸಿಟಿ ರವಿ, ಪ್ರತಾಪ್ ಸಿಂಹ, ಅನಂತ ಕುಮಾರ್ ಹೆಗಡೆ ಇವರಿಗೆ ಅನ್ಯಾಯವಾಗಿದೆ. ಇವರೆಲ್ಲರೂ ಹಿಂದುತ್ವದ ಬಗ್ಗೆ ಮಾತನಾಡಿದ್ದೇ ತಪ್ಪಾ? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Contracter Case: ಸಚಿನ್ ಪಾಂಚಾಳ್ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ
ಪೊಲೀಸ್ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ
Bandh; ರೈತರಿಂದ ಪಂಜಾಬ್ ಬಂದ್ ನಡೆಸಿ ಹೋರಾಟ: ಜನಜೀವನ ಅಸ್ತವ್ಯಸ್ತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.