Gandhi Jayanthi:ರಾಷ್ಟ್ರಧ್ವಜ ಹಿಡಿದೇ ಸಿಎಂ ಸಿದ್ದರಾಮಯ್ಯ ಶೂ ಲೇಸ್ ಬಿಚ್ಚಿದ ಕಾರ್ಯಕರ್ತ!
ಗುಲಾಮಗಿರಿಯ ಸಂಕೇತ ಎಂದು ಟೀಕಿಸಿದ ಬಿ.ವೈ.ವಿಜಯೇಂದ್ರ, ಮುಖ್ಯಮಂತ್ರಿ ಬಟ್ಟೆಗೆ ಬೆಂಕಿ ತಗುಲುವುದು ತಪ್ಪಿಸಿದ ಸಿಬ್ಬಂದಿ- ವಿಡಿಯೋ ನೋಡಿ
Team Udayavani, Oct 2, 2024, 6:56 PM IST
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಬುಧವಾರ ಸಿಎಂ ಸಿದ್ದರಾಮಯ್ಯ (CM Siddaramaiah) ನಗರದ ಗಾಂಧಿ ಭವನದಲ್ಲಿ ಧ್ವಜಾರೋಹಣ ಹಾಗೂ ಗಾಂಧಿ ಪ್ರತಿಮೆಗೆ ಪುಷ್ಪಮಾಲೆ ಹಾಕುವ ಮುನ್ನ ಸಿಎಂ ಸಿದ್ದರಾಮಯ್ಯ ಶೂ ಬಿಚ್ಚಲು ಮುಂದಾಗಿದ್ದು, ಈ ವೇಳೆ ಕಾರ್ಯಕರ್ತರೊಬ್ಬರು ಸಿಎಂ ಅವರ ಕಾಲಿನ ಶೂ ಬಿಚ್ಚಲು ಸಹಾಯ ಮಾಡಿದ್ದು ಚರ್ಚೆಗೆ ಕಾರಣವಾಗಿದೆ.
ಧ್ವಜಾರೋಹಣ ವೇಳೆ ಆಗಿದ್ದೇನು?
ಧ್ವಜಾರೋಹಣಕ್ಕೆಂದು ಸಿಎಂ ಸಿದ್ದರಾಮಯ್ಯ ಶೂ ಬಿಚ್ಚಲು ಹೋದಾಗ ಅವರು ಬಗ್ಗಿ ಲೇಸ್ ಬಿಚ್ಚಲು ಸಾಧ್ಯವಾಗಿರಲಿಲ್ಲ. ಇದನ್ನು ಕಂಡ ಕಾರ್ಯಕರ್ತರೊಬ್ಬರು ಸಿದ್ದರಾಮಯ್ಯ ಶೂ ಲೇಸ್ ಬಿಚ್ಚಲು ಸಹಾಯ ಮಾಡಲು ಮುಂದಾದರು. ಆದರೆ ಕೈಯಲ್ಲಿ ಭಾರತ ಧ್ವಜ ಇರೋದನ್ನೇ ಆತ ಮರೆತ್ತಿದ್ದರು, ಇದನ್ನು ಮನಗಂಡು ಪಕ್ಕದಲ್ಲಿದ್ದ ವ್ಯಕ್ತಿ ಕೂಡಲೇ ಕಾರ್ಯಕರ್ತನ ಕೈಯಲ್ಲಿದ್ದ ರಾಷ್ಟಧ್ವಜವನ್ನು ಕಿತ್ತುಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಶೂ ಲೇಸ್ ಬಿಚ್ಚುವ ವೇಳೆ ಧ್ವಜ ಕಾಲಿಗೆ ತಾಗುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಕಾರ್ಯಕರ್ತ ಶೂ ಲೇಸ್ ಬಿಚ್ಚುವ ವೇಳೆ ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಶೂ ಲೇಸ್ ಬಿಚ್ಚಿರುವುದು ಸದ್ಯ ಭಾರೀ ಟೀಕೆಗೆ ಕಾರಣವಾಗಿದೆ.
#WATCH | Bengaluru: A Congress worker, with the Tiranga in his hands, removed shoes from the feet of Karnataka CM Siddaramaiah earlier today as he arrived to pay tribute to Mahatma Gandhi on his birth anniversary. A man present at the spot, removed the flag from the worker’s… pic.twitter.com/rjT1AJTXsp
— ANI (@ANI) October 2, 2024
ರಾಷ್ಟ್ರಧ್ವಜ ಹಿಡಿದು ಶೂ ಬಿಚ್ಚಿದ ಘಟನೆಗೆ ಬಿಜೆಪಿ ಟೀಕೆ:
ಕಾರ್ಯಕರ್ತರೊಬ್ಬರು ಸಿದ್ದರಾಮಯ್ಯ ಶೂ ಲೇಸ್ ಬಿಚ್ಚುವಾಗ ರಾಷ್ಟ್ರಧ್ವಜ ಕೈ ಯಲ್ಲಿ ಹಿಡಿದಿರುವುದನ್ನು ವಿಪಕ್ಷ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತನ್ನ ಎಕ್ಸ್ ಖಾತೆಯಲ್ಲಿ ಟೀಕಿಸಿದ್ದಾರೆ. “ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್’ಗೆ ಯಾವಾಗಲೂ ಕಾಲ ಕಸ. ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ ಮುಖ್ಯಮಂತ್ರಿಗಳು ಅದನ್ನು ಆಕ್ಷೇಪಿಸದೆ ಉತ್ತೇಜಿಸುವ ಮಾದರಿಯಲ್ಲಿ ಉಡಾಫೆ ಪ್ರದರ್ಶಿಸಿರುವುದು ರಾಷ್ಟ್ರ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ”. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವು ಭಾರತೀಯರ ಕ್ಷಮೆ ಕೇಳಲಿ ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಸಿಎಂ ಬಟ್ಟೆಗೆ ಬೆಂಕಿ ತಗುಲುವುದು ತಪ್ಪಿಸಿದ ಸಿಬ್ಬಂದಿ
ವಿಧಾನಸೌಧದ ಮುಂಭಾಗ 200ನೇ ಕಿತ್ತೂರು ವಿಜಯೋತ್ಸವ ಆಚರಣೆಯ ಕಾರ್ಯಕ್ರಮ ವೇಳೆ ವಿಜಯಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ವಿಜಯಜ್ಯೋತಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಗ್ರೀನ್ ಫ್ಲ್ಯಾಗ್ ತೆಗೆದುಕೊಳ್ಳಲು ಮುಂದಾದ ವೇಳೆ ಸಿಎಂ ಅವರು ಧರಿಸಿದ್ದ ಬಟ್ಟೆಗೆ ಬೆಂಕಿಯ ಬಿಸಿ ತಾಕಿತ್ತು, ಕೂಡಲೇ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಎಚ್ಚೆತ್ತು ಸಿದ್ದರಾಮಯ್ಯರನ್ನು ಬೆಂಕಿಯಿಂದ ದೂರ ಸರಿಸಿದರು. ಆ ಬಳಿಕ ಸಿಎಂ ಯಾತ್ರೆಗೆ ಚಾಲನೆ ನೀಡಿದ್ದು, ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡಿದ ಬಳಿಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಜಾಗ ಬಿಡಲು ಸಿಎಂ ಮುಂದಾದ ಘಟನೆಯು ಈ ವೇಳೆ ನಡೆಯಿತು.
Bengaluru: CM Siddaramaiah’s shirt caught fire while lighting the torch for Kittur Chenamma Jyothi Program, injury averted through quick reaction by security staff. pic.twitter.com/nly9PwIm29
— Janta Journal (@JantaJournal) October 2, 2024
ವಿಜಯಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಕ್ಟೋಬರ್ 23, 24, 25 ರಂದು ಕಿತ್ತೂರು ಚೆನ್ನಮ್ಮನ ಉತ್ಸವ ನಡೆಯಲಿದೆ. ಅದರ ಅಂಗವಾಗಿ ವಿಜಯಜ್ಯೋತಿ ಯಾತ್ರೆ ನಡೆಯುತ್ತಿದೆ, ವಿಜಯಜ್ಯೋತಿ ಯಾತ್ರೆ ಇಂದಿನಿಂದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಿತ್ತೂರು ತಲುಪಲಿದೆ. 23 ರಂದು ಕಿತ್ತೂರಿನಲ್ಲಿ ವಿಜಯೋತ್ಸವ ಆಚರಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.