Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್
ಹಬ್ಬ ಹತ್ತಿರ ಬರುವಾಗ ಪಾಲಿಸಲಾಗದ ನಿಯಮ ಹೇರುವುದು ಸರ್ಕಾರದ ಹಿಂದೂ ವಿರೋಧಿ ನೀತಿ: ಬಿಜೆಪಿ ಶಾಸಕ
Team Udayavani, Sep 5, 2024, 8:30 PM IST
ವಿಜಯಪುರ: ಗಣೇಶೋತ್ಸವ ಪ್ರಸಾದಕ್ಕೆ ಎಫ್‌ಎಸ್‌ಎಸ್‌ಎಐ(FSSAI) ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ಪ್ರಸಾದ ಪಡೆಯಬೇಕೆಂಬ ನಿಯಮಾವಳಿ ಅವೈಜ್ಞಾನಿಕ ಹಾಗೂ ಹಿಂದೂ ಹಬ್ಬ, ಆಚರಣೆಗಳನ್ನು ಹತ್ತಿಕ್ಕುವ ಪ್ರಯತ್ನ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿಕಾರಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಶಾಸಕ ಯತ್ನಾಳ್ ರಾಜ್ಯದ ಜನರ ಮೇಲೆ ಅಷ್ಟೊಂದು ಕಾಳಜಿ ಇದ್ದರೆ ಇದೇ ನಿಯಮವನ್ನು ಹೋಟೆಲ್, ಡಾಬಾ ಹಾಗೂ ಹಲಾಲ್ ಮಾಂಸವನ್ನು ಮಾರಾಟ ಮಾಡುವ ಅಂಗಡಿ-ಮುಂಗಟ್ಟುಗಳಿಗೂ ಅನ್ವಯಿಸಬೇಕಿತ್ತು. ಇನ್ನೇನು ಹಬ್ಬಕ್ಕೆ ಎರಡು ದಿನ ಬಾಕಿ ಇರಬೇಕಾದರೆ ಪಾಲಿಸಲಾಗದ ನಿಯಮವನ್ನು ಹೇರುವುದು ಸರ್ಕಾರದ ಹಿಂದೂ ವಿರೋಧಿ ನೀತಿ ತೋರಿಸುತ್ತದೆ ಎಂದು ತಮ್ಮ
ಅನ್ಯಕೋಮಿನ ಹಬ್ಬಗಳಲ್ಲಿ ಬೀದಿ ಬೀದಿಯಲ್ಲಿ ಪ್ರಾಣಿ ಬಲಿ ನೀಡಿ, ಅದರಿಂದ ಮಾಂಸ ಮಾರಾಟ ಮಾಡುವವರಿಗೂ ಈ ನಿಯಮ ಅನ್ವಯ ಆಗುತ್ತಾ? ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಆಹಾರ ತಯಾರು ಮಾಡಬೇಕಾದರೆ ಎಫ್‌ಎಸ್‌ಎಸ್‌ಎಐ ಪರವಾನಗಿ ಪಡೆದವರಿಂದ ಸರ್ಕಾರ ಮಾಡಿಸುತ್ತಿದೆಯಾ?
ಬೀದಿ ಬೀದಿಗಳಲ್ಲಿ ಕಳಪೆ ಗುಣಮಟ್ಟದ ಉತ್ಪನ್ನಗಳನ್ನು ಉಪಯೋಗಿಸಿ ತಿಂಡಿ, ಊಟ ತಯಾರಿಸುವವರಿಗೂ ಈ ನಿಯಮ ಅನ್ವಯ ಆಗುತ್ತಾ? ಶುಚಿತ್ವದ ಪಾಲನೆ ಸರಿ, ಆದರೆ ಹಬ್ಬಕ್ಕೆ ಎರಡು ದಿನ ಇರಬೇಕಾದರೆ ಎಫ್‌ಎಸ್‌ಎಸ್‌ಎಐ ಅನುಮೋದಿತ ವ್ಯಕ್ತಿ, ಸಂಸ್ಥೆಗಳಿಂದ ಪ್ರಸಾದ ತಯಾರಿಸಬೇಕೆಂಬ ಫರ್ಮಾನು ಹೊರಡಿಸುವ ಆದೇಶ ಕೂಡಲೇ ಹಿಂಪಡೆಯಬೇಕು ಎಂದು ಶಾಸಕ ಯತ್ನಾಳ್ ಆಗ್ರಹಿಸಿದ್ದಾರೆ.
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್‌ಗಳಲ್ಲಿ ಪ್ರಸಾದವಾಗಿ ವಿತರಿಸಲಾಗುವ ಆಹಾರ ಪದಾರ್ಥಗಳ ಶುಚಿತ್ವ, ಗುಣಮಟ್ಟ ಮತ್ತು ಸುರಕ್ಷತೆಯ ಖಚಿತಪಡಿಸಿಕೊಳ್ಳಲು, ಎಫ್‌ಎಸ್‌ಎಸ್‌ಎಐ ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ಪ್ರಸಾದ ಸಿದ್ಧಪಡಿಸುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಆದೇಶಿಸಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.