Gangavathi: ನಗರಸಭೆಯಲ್ಲಿ ಬಹುಮತವಿದ್ದರೂ “ಕೈ”ಯಿಂದ ತಪ್ಪಿದ ಅಧಿಕಾರ, ಬಿಜೆಪಿಗೆ ಅದೃಷ್ಟ
ಚುನಾವಣೆಯಲ್ಲಿ ಬಿಜೆಪಿಯ ಮೌಲಸಾಬ, ಪಾರ್ವತಮ್ಮ ದೊಡ್ಮನಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆ, ಕಾಂಗ್ರೆಸ್‌ಗೆ ಮುಖಭಂಗ
Team Udayavani, Aug 26, 2024, 5:18 PM IST
ಗಂಗಾವತಿ: ನಗರಸಭೆಯ ಆಡಳಿತವನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಕೊಂಡು ಯಶಸ್ವಿಯಾಗಿದ್ದರೆ, ನಗರಸಭೆಯಲ್ಲಿ ಬಹುಮತವಿದ್ದರೂ ಕಾಂಗ್ರೆಸ್ ಸದಸ್ಯರ ವಿಶ್ವಾಸ ಕಳೆದುಕೊಂಡು ಅಧಿಕಾರ ಉಳಿಸಿಕೊಳ್ಳುವಲ್ಲಿ ವಿಫಲವಾಗಿ ತೀವ್ರ ಮುಖಭಂಗ ಅನುಭವಿಸಿದೆ.
ಕೊನೆಯ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿಜೆಪಿಯ ಬನ್ನಿಗಿಡದ ಕ್ಯಾಂಪಿನ ಮೌಲಸಾಬ, ಉಪಾಧ್ಯಕ್ಷರಾಗಿ ಶರಣಬಸವೇಶ್ವರ ಕ್ಯಾಂಪಿನ ಪಾರ್ವತಮ್ಮ ದೊಡ್ಮನಿಯವರು ಚುನಾಯಿತರಾಗಿದ್ದಾರೆ. ಇವರು ಶಾಸಕ ಗಾಲಿ ಜನಾರ್ದನರೆಡ್ಡಿ ಅವರ ಮತ ಸೇರಿ 26 ಮತಗಳ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಗದ್ವಾಲ ಕಾಶಿಂಸಾಬ ,ಉಪಾಧ್ಯಕ್ಷ ಸ್ಥಾನಕ್ಕೆ ಹುಲಿಗೆಮ್ಮ ಕಿರಿಕಿರಿ ಸ್ಪರ್ಧಿಸಿ 09 ಮತ ಪಡೆದು ಪರಾಭವಗೊಂಡರು. ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ,ಸಹಾಯಕ ಚುನಾವಣೆ ಅಧಿಕಾರಿಯಾಗಿ ಪೌರಾಯುಕ್ತ ವಿರೂಪಾಕ್ಷಪ್ಪ ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶಾಸಕ ಗಾಲಿ ಜನಾರ್ದನರೆಡ್ಡಿ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಸಂಸದ ಶಿವರಾಮಗೌಡ ಸೇರಿ ಬಿಜೆಪಿ ಮುಖಂಡರು ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.