Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ
ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡರ ನಿಯೋಗ, ಸೂಕ್ತ ಪರಿಹಾರ ಕಲ್ಪಿಸಲು ಜಿಲ್ಲಾಡಳಿತಕ್ಕೆ ಒತ್ತಾಯ
Team Udayavani, Oct 2, 2024, 9:30 PM IST
ಗಂಗಾವತಿ: ತಾಲೂಕಿನ ಕೇಸಕ್ಕಿ ಹಂಚನಾಳ, ಮರಕುಂಬಿ, ಗುಳದಾಳ, ಕಲ್ಗುಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಹಾನಿಗೆ ಒಳಗಾಗಿದ್ದು, ಈ ವೇಳೆ ಭತ್ತ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿ ಉಂಟಾಗಿ ನಷ್ಟಕ್ಕೆ ಒಳಗಾಗಿವೆ. ಈ ಗ್ರಾಮದಲ್ಲಿ ಗುಡಿಸಲು, ದನದ ಕೊಟ್ಟಿಗೆಗಳು (ಶೆಡ್ಡುಗಳು) ನೆಲಕ್ಕುರುಳಿದ್ದು ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ.
ಪರಿಹಾರಕ್ಕೆ ಆಗ್ರಹ:
ಕೇಸಕ್ಕಿ, ಹಂಚಿನಾಳು, ಮರಕುಂಬಿ ಮತ್ಕು ಕಲ್ಗುಡಿ ಗ್ರಾಮಗಳಲ್ಲಿ ಮಳೆ ಹಾನಿಗೆ ಒಳಗಾಗಿರುವ ರೈತರ ಬೆಳೆಗಳು ಮತ್ತು ಮನೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಬಿಜೆಪಿ ಮುಖಂಡರ ನಿಯೋಗ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮೌನೇಶ್ ದಡೇಸೂಗೂರು, ಹೇರೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಸನಗೌಡ ಮಾಲಿ ಪಾಟೀಲ್, ಉಮೇಶ್ ನಾಯಕ ಗ್ರಾಮದ ಹಿರಿಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.