Gangolli Election:ಗಂಗೊಳ್ಳಿ ಗ್ರಾ.ಪಂ. ಚುನಾವಣೆಯಲ್ಲಿ ಕೈ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ
ಬಿಜೆಪಿ ಸತತ ಮೂರು ದಶಕಗಳಿಂದ ಗಂಗೊಳ್ಳಿ ಗ್ರಾಮ ಪಂಚಾಯ್ತಿ ಆಡಳಿತ ಚುಕ್ಕಾಣಿ ಹಿಡಿದಿತ್ತು.
Team Udayavani, Dec 13, 2024, 6:10 PM IST
ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯ್ತಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಮೇಲುಗೈ ಸಾಧಿಸಿದೆ. ಮತ್ತೊಂದೆಡೆ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವ ಭಾರತೀಯ ಜನತಾ ಪಕ್ಷದ ಕನಸು ನುಚ್ಚು ನೂರಾಗಿದೆ.
ಸತತ ಮೂರು ದಶಕಗಳಿಂದ ಗಂಗೊಳ್ಳಿ ಗ್ರಾಮ ಪಂಚಾಯ್ತಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಚುನಾವಣೆಯಲ್ಲಿ ಈ ಬಾರಿ ಪರಾಜಯಗೊಂಡಿದ್ದಾರೆ.
ಡಿಸೆಂಬರ್ 8ರಂದು ಗಂಗೊಳ್ಳಿ ಗ್ರಾಮ ಪಂಚಾಯ್ತಿಯ 33 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ನಿಗದಿಯಂತೆ ಡಿ.11ರಂದು ಫಲಿತಾಂಶ ಪ್ರಕಟಗೊಳ್ಳಬೇಕಿತ್ತು. ಆದರೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದಿಂದ ಫಲಿತಾಂಶ ಎಣಿಕೆ ಮುಂದೂಡಿಕೆಯಾಗಿತ್ತು. ಡಿಸೆಂಬರ್ 12ರಂದು ತಡರಾತ್ರಿ ಫಲಿತಾಂಶ ಘೋಷಣೆಯಾಗಿದೆ.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಗಳು ನೇರವಾಗಿ ಪಕ್ಷದ ಚಿಹ್ನೆಯಡಿ ಸ್ಪರ್ಧಿಸದಿದ್ದರೂ ಕೂಡಾ, ಆಯಾ ಪಕ್ಷಗಳ ಬೆಂಬಲದೊಂದಿಗೆ ಅಖಾಡಕ್ಕಿಳಿಯುವುದು ರೂಢಿಯಾಗಿದೆ.
ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಮತ್ತು ಎಸ್ ಡಿಪಿಐ ನಡುವೆ ಮೈತ್ರಿ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗಂಗೊಳ್ಳಿ ಗ್ರಾ.ಪಂ. ಗದ್ದುಗೆ ಏರಲು ಬಹುಮತದ 17 ಸದಸ್ಯರ ಬೆಂಬಲದ ಅಗತ್ಯವಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 13 ಸ್ಥಾನಗಳಲ್ಲಿ ಹಾಗೂ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗಳು 6 ಸ್ಥಾನಗಳಲ್ಲಿ ಜಯಗಳಿಸಿದೆ. ಭಾರತೀಯ ಜನತಾ ಪಕ್ಷ ಬೆಂಬಲಿತ 12 ಅಭ್ಯರ್ಥಿಗಳು ಮತ್ತು ಇಬ್ಬರು ಪಕ್ಷೇತರರು ಜಯ ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್ ಜಾರಕಿಹೊಳಿ
Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ
BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
Micro Finance: ಮೀಟರ್ ಬಡ್ಡಿ ಕಿರುಕುಳ: ಊರೇ ತೊರೆದ 100ಕ್ಕೂ ಹೆಚ್ಚು ಕುಟುಂಬ
Rule of Safety: ಖಾಸಗಿ ಅಷ್ಟೇ ಅಲ್ಲ, ಸರಕಾರಿ ಶಾಲೆಗಳಿಗೂ ʼಅಗ್ನಿ ಸುರಕ್ಷೆʼ ಬಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.