“ಭಾರತೀಯರು,ಚೀನೀಯರು ಎಸೆವ ತ್ಯಾಜ್ಯ ಲಾಸ್ ಏಂಜಲೀಸ್‌ಗೆ ಬರ್ತಿದೆ’
Team Udayavani, Nov 13, 2019, 7:17 PM IST
ನ್ಯೂಯಾರ್ಕ್: ಭಾರತ, ಚೀನ, ರಷ್ಯಾದಂತಹ ದೇಶಗಳು ಸಮುದ್ರಕ್ಕೆಸೆವ ತ್ಯಾಜ್ಯಗಳು ಲಾಸ್ ಏಂಜಲೀಸ್ ಕಡೆಗೆ ಬರುತ್ತಿವೆ. ಅಲ್ಲಿ ತ್ಯಾಜ್ಯ ನಿಯಂತ್ರಣಕ್ಕೆ ಅವರು ಏನನ್ನೂ ಮಾಡುತ್ತಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೂರಿದ್ದಾರೆ.
ಹವಾಮಾನ ಬದಲಾವಣೆ ಒಂದು ಸಂಕೀರ್ಣ ವಿಚಾರವಾಗಿದ್ದು, ನಾನು ಈ ಬಗ್ಗೆ ಚಿಂತಿತನಾಗಿದ್ದೇನೆ ಮತ್ತು ನಾನೂ ಹಲವು ವಿಧದಲ್ಲಿ ಓರ್ವ ಪರಿಸರವಾದಿಯಾಗಿದ್ದೇನೆ ಎಂದು ಹೇಳಿದ್ದಾರೆ.
ನ್ಯೂಯಾರ್ಕ್ ಅರ್ಥಶಾಸ್ತ್ರ ಕ್ಲಬ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಹವಾಮಾನದ ಬಗ್ಗೆ ಹೆಚ್ಚು ಚಿಂತಿತನಾಗಿದ್ದೇನೆ. ನಾನು ಅತ್ಯಂತ ಶುದ್ಧ ಗಾಳಿ-ನೀರು ಜಗತ್ತಿನಲ್ಲಿರಬೇಕೆಂದು ಬಯಸುತ್ತೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ಯಾರಿಸ್ ಹವಾಮಾನ ಒಪ್ಪಂದ ಅಮೆರಿಕ ಪಾಲಿಗೆ ದುರಂತವಾಗಿದೆ. ಬೇರೆಲ್ಲ ದೇಶಗಳ ಬಗ್ಗೆ ಅದೇನೂ ಮಾಡಿಲ್ಲ. ಭಾರತದಂತೆ ನಾವು ಕೂಡ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಅಚ್ಚರಿಯ ವಿಚಾರವೆಂದರೆ, ಈ ಮೊದಲು ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಎಂದೇ ಇಲ್ಲ ಎಂದು ಹೇಳುತ್ತಿದ್ದ ಟ್ರಂಪ್ ಇದೀಗ ಬೇರೆ ದೇಶಗಳನ್ನು ಇದಕ್ಕೆ ದೂಷಿಸುತ್ತಿದ್ದಾರೆ. ಜಗತ್ತಿನಲ್ಲೇ ಅತ್ಯಧಿಕ ಇಂಗಾಲ ಹೊರಸೂಸುವ ದೇಶಗಳಲ್ಲಿ ಅಮೆರಿಕ ಮುಂಚೂಣಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.