Health Tips: ಆ್ಯಸಿಡಿಟಿ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ…ಕೆಲವು ಸುಲಭ ಪರಿಹಾರದ ಸಲಹೆ
Team Udayavani, Mar 1, 2023, 6:26 PM IST
ಸರಳ ಮತ್ತು ಆರೋಗ್ಯಕರ ಜೀವನಶೈಲಿಯು ನಿಮ್ಮನ್ನು ಮತ್ತು ನಿಮ್ಮ ಹೊಟ್ಟೆಯನ್ನು ಆರೋಗ್ಯಕರವಾಗಿ ಇರಿಸುತ್ತದೆ. ನಿಮ್ಮ ದಿನನಿತ್ಯದ ಬದುಕಲ್ಲಿ ಸಣ್ಣ ಸಣ್ಣ ಬದಲಾವಣೆಯನ್ನು ಮಾಡಿಕೊಳ್ಳುವ ಮೂಲಕ ನೀವು ಜೀವನಪರ್ಯಂತ ಆರೊಗ್ಯಕರವಾಗಿ ಇರಬಹುದು. ಆಮ್ಲದ ಹುಳಿ-ಹುಳಿ ಇಲ್ಲದ ಸಹಜ ಸುಂದರ ಜೀವನ ನಿಮ್ಮದಾಗಿಸಿಕೊಳ್ಳಿ!
- ತಂಪು ಪಾನೀಯ ಮತು ಕೆಫೀನ್‌ಯುಕ್ತ ಪಾನೀಯಗಳನ್ನು ಸೇವಿಸಬೇಡಿ.
- ಪ್ರತಿದಿನ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಪ್ರತಿದಿನ 10-12 ಗ್ಲಾಸ್‌ನಷ್ಟು ನೀರನ್ನು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದರಿಂದ ವಾಯು ಮತ್ತು ಆಸಿಡಿಟಿಯಂತಹ ರೋಗ ಲಕ್ಷಣಗಳು ನಿಯಂತ್ರಣಕ್ಕೆ ಬರುತ್ತವೆ.
- ನೀವು ಅಸಿಡಿಟಿಯಿಂದ ಬಳಲುತ್ತಿದ್ದರೆ ಎಳನೀರು ಕುಡಿಯಿರಿ ಅದು ಅಸಿಡಿಟಿಯನ್ನು ಶಮನಗೊಳಿಸಿ, ಜೀರ್ಣಾಂಗವ್ಯೂಹವನ್ನು ಶಾಂತಗೊಳಿಸುತ್ತದೆ.
- ರಾತ್ರಿಯ ಊಟವನ್ನು ನೀವು ನಿದ್ದೆ ಹೋಗುವುದಕ್ಕೆ 2 ರಿಂದ 3 ಗಂಟೆ ಮೊದಲು ಮುಗಿಸಿಬಿಡಿ.
- ಎರಡು ಊಟಗಳ ನಡುವೆ ದೀರ್ಘ ಅಂತರವಿರುವುದು ಅಸಿಡಿಟಿ ಕಾಣಿಸಿಕೊಳ್ಳಲು ಇರುವ ಮತ್ತೊಂದು ಕಾರಣ. ಮಧ್ಯೆ ಮಧ್ಯೆ ಸಣ್ಣ ಸಣ್ಣ ಪ್ರಮಾಣದಲ್ಲಿ ನಿಯುತವಾಗಿ ಊಟ ಸೇವಿಸಿ.
- ಉಪ್ಪಿನಕಾಯಿ, ಮಸಾಲೆ ಚಟ್ನಿ, ವಿನೇಗರ್ ಇತ್ಯಾದಿಗಳನ್ನು ಸೇವಿಸಬೇಡಿ
- ಯೋಗ ಅಥವಾ ಇತರ ಒತ್ತಡ- ನಿವಾರಕ ಚಟುವಟಿಕೆಗಳು ಅಸಿಡಿಟಿಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲು ಬಹಳ ಸಹಕಾರಿ ಆಗಬಹುದು.
- ಕರಿದ ಪದಾರ್ಥ, ಕೊಬ್ಬುಯುಕ್ತ ಆಹಾರ, ಹಾಳುಮೂಳು ಆಹಾರ ಮತ್ತು ಚಾಕೊಲೇಟ್‌ಗಳನ್ನು ಸೇವಿಸಬಾರದು.
- ಕಾರ್ಬೋಹೈಡ್ರೇಟ್ ಸಮೃದ್ಧವಾಗಿರುವ ಆಹಾರವನ್ನು ಹೆಚ್ಚು ಸೇವಿಸಿ – ಉದಾ: ಅನ್ನ – ಇಂತಹ ಆಹಾರಗಳಲ್ಲಿ ಆಮ್ಲವು ಬಹಳ ಕಡಿಮೆ ಪ್ರಮಾಣದಲ್ಲಿ ಉತ್ಪತ್ತಿ ಆಗುತ್ತದೆ.
- ಮನೆಯಲ್ಲೆ ತಯಾರಿಸಿದ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸಿ ಮತ್ತು ಹೊರಗಡೆ ಆಹಾರ ಸೇವಿಸುವುದನ್ನು ತಪ್ಪಿಸಿಕೊಳ್ಳಿ.
- ಸಿಗರೇಟು, ಆಲ್ಕೋಹಾಲ್ ಮತ್ತು ಗ್ಯಾಸ್ ತುಂಬಿಸಿರುವ ಪಾನೀಯಗಳನ್ನು ದೂರ ಇಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.