War; ಗಾಜಾಪಟ್ಟಿ ಮಕ್ಕಳ ಸ್ಮಶಾನವಾಗುತ್ತಿದೆ…ತಕ್ಷಣವೇ ಕದನವಿರಾಮ ಘೋಷಿಸಿ: ವಿಶ್ವಸಂಸ್ಥೆ
ಔಷಧ, ಚಿಕಿತ್ಸೆಗಳಿಲ್ಲದೇ ಸಾವಿರಾರು ಮಂದಿ ಕಂಗಾಲಾಗಿದ್ದಾರೆ
Team Udayavani, Nov 8, 2023, 10:36 AM IST
ನ್ಯೂಯಾರ್ಕ್: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಮುಂದುವರಿದಿರುವುದಕ್ಕೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗ್ಯುಟೆರಸ್ ಕಳವಳ ವ್ಯಕ್ತಪಡಿಸಿದ್ದು, ಗಾಜಾಪಟ್ಟಿ ಮಕ್ಕಳ ಸ್ಮಶಾನವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ತಕ್ಷಣವೇ ಕದನವಿರಾಮ ಘೋಷಿಸಬೇಕೆಂದು ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Assam: ಅವಹೇಳನಕಾರಿ ಹೇಳಿಕೆ… ಅಸ್ಸಾಂನ ಕಾಂಗ್ರೆಸ್ ಶಾಸಕ ಅಫ್ತಾಬುದ್ದೀನ್ ಮೊಲ್ಲಾ ಬಂಧನ
ಗಾಜಾಪಟ್ಟಿಯಲ್ಲಿನ ಪರಿಸ್ಥಿತಿ ಕೇವಲ ಮಾನವ ಸಂಘರ್ಷವಲ್ಲ, ಆದರೆ ಇದೊಂದು ಮಾನವೀಯತೆಯ ನೆಲೆಯದ್ದಾಗಿದೆ. ಕದನ ವಿರಾಮ ವಿಚಾರದಲ್ಲಿ ಎರಡು ದೇಶಗಳು ಮಾತ್ರ ಭಾಗಿಯಾಗುವುದಲ್ಲ, ಅಂತಾರಾಷ್ಟ್ರೀಯ ಸಮುದಾಯ ಕೂಡಾ ಗಮನಹರಿಸಬೇಕು ಎಂದು ಗ್ಯುಟೆರಸ್ ತಿಳಿಸಿದ್ದಾರೆ.
ಗಾಜಾಪಟ್ಟಿಗೆ ಮಾನವೀಯತೆಯ ನೆರವಿನ ಅಗತ್ಯವಿದೆ. ಯುದ್ಧದಿಂದಾಗಿ ಸಾವಿರಾರು ಮಕ್ಕಳು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆ, ಔಷಧ, ಚಿಕಿತ್ಸೆಗಳಿಲ್ಲದೇ ಸಾವಿರಾರು ಮಂದಿ ಕಂಗಾಲಾಗಿದ್ದಾರೆ ಎಂದು ವರದಿ ವಿವರಿಸಿದೆ.
ಜೀವ ತೆತ್ತ ವಿಶ್ವಸಂಸ್ಥೆಯ ರಕ್ಷಣಾ ತಂಡ:
ಕಳೆದ ಒಂದು ತಿಂಗಳಿನಿಂದ ಮುಂದುವರಿದಿರುವ ಇಸ್ರೇಲ್, ಹಮಾಸ್ ನಡುವಿನ ಯುದ್ಧದಿಂದಾಗಿ ವಿಶ್ವಸಂಸ್ಥೆಯ ರಕ್ಷಣಾ ತಂಡ ಭಾರೀ ಬೆಲೆ ತೆತ್ತಿರುವುದಾಗಿ ವರದಿ ತಿಳಿಸಿದೆ.
ಯುದ್ಧದಲ್ಲಿ ವಿಶ್ವಸಂಸ್ಥೆಯ ರಕ್ಷಣಾ ತಂಡದ 89 ಸಿಬಂದಿಗಳು ತಮ್ಮ ಜೀವ ಕಳೆದುಕೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. ಇದು ತೀವ್ರ ಕಳವಳಕಾರಿ ವಿಷಯವಾಗಿದ್ದು, ಇಸ್ರೇಲ್ ಕೂಡಲೇ ಕದನ ವಿರಾಮ ಘೋಷಿಸಬೇಕೆಂದು ಗ್ಯುಟೆರಸ್ ಆಗ್ರಹಿಸಿದ್ದಾರೆ.
ಗಾಜಾಪಟ್ಟಿ ವಶಪಡಿಸಿಕೊಳ್ಳದಂತೆ ಅಮೆರಿಕ ಎಚ್ಚರಿಕೆ:
ಇಸ್ರೇಲ್ ಗಾಜಾಪಟ್ಟಿಯನ್ನು ಮರುವಶಪಡಿಸಿಕೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಅಮೆರಿಕ ಕಳವಳ ವ್ಯಕ್ತಪಡಿಸಿದೆ. ಆದರೆ ಇಸ್ರೇಲ್ ಸೇನಾಪಡೆ ಗಾಜಾಪಟ್ಟಿಯನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.