ಜ್ಞಾನಪೀಠ ಪ್ರಶಸ್ತಿ ವಿಜೇತ ನಾಟಕಕಾರ ಗಿರೀಶ್ ಕಾರ್ನಾಡ್ ಇನ್ನಿಲ್ಲ


Team Udayavani, Jun 10, 2019, 9:29 AM IST

karnad

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ ಗಿರೀಶ್ ಕಾರ್ನಾಡ್ (81) ಅವರು ಸೋಮವಾರ ವಿಧಿವಶರಾಗಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಗಿರೀಶ್ ಕಾರ್ನಾಡ್ ಅವರು ಸೋಮವಾರ ಮುಂಜಾನೆ ಬೆಂಗಳೂರಿನ ಲಾವೆಲ್ಲಾ ರಸ್ತೆಯ ನಿವಾಸದಲ್ಲಿ ಮೃತಪಟ್ಟಿದ್ದಾರೆ.

ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ಇಂದು ಮಧ್ಯಾಹ್ನದ ನಂತರ ಬೈಯಪ್ಪನಹಳ್ಳಿಯ ವಿದ್ಯುತ್ ಚಿತಾಗಾರದಲ್ಲಿ ಗಿರೀಶ್ ಕಾರ್ನಾಡ್ ಅವರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

ರಘುನಾಥ್ ಮತ್ತು ಕೃಷ್ಣಾಬಾಯಿ ದಂಪತಿಗಳ ಮಗನಾಗಿ 1938ರ ಮೇ 19 ರಂದು ಮಹಾರಾಷ್ಟ್ರದ ಮಾಥೆರನ್ ನಲ್ಲಿ ಗಿರೀಶ್ ಕಾರ್ನಾಡ್ ಅವರು ಜನಿಸುತ್ತಾರೆ. ನಂತರ ಉತ್ತರ ಕನ್ನಡದ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು ಧಾರವಾಡದಲ್ಲಿ ಪ್ರೌಢ ಶಿಕ್ಷಣ ಪಡೆದರು. ನಂತರ ಆಕ್ಸ್ ಫರ್ಡ್ ವಿಶ್ವ ವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಪಡೆದರು.

ಕನ್ನಡ ಸಾಹಿತ್ಯ ಮತ್ತು ನಾಟಕ ಕ್ಷೇತ್ರಕ್ಕೆ ಮೇರು ಕೊಡುಗೆ ನೀಡಿದ ಗಿರೀಶ್ ಕಾರ್ನಾಡ್ ಅವರ ಹಯವದನ, ಯಯಾತಿ, ತುಘಲಕ್, ಅಗ್ನಿ ಮತ್ತು ಮಳೆ ನಾಟಕಗಳು ಪ್ರಸಿದ್ಧವಾದವು.

ಪ್ರಭುದ್ದ ನಟರಾಗಿದ್ದ ಅವರು ಅನೇಕ ಕನ್ನಡ,  ಹಿಂದಿ ಚಿತ್ರಗಳಲ್ಲೂ ನಟಿಸಿದ್ದರು. ‘ಸಂಸ್ಕಾರ’, ‘ನಾಗಮಂಡಲ’, ‘ತಬ್ಬಲಿಯು ನೀನಾದೆ ಮಗನೆ’, ‘ಒಂದಾನೊಂದು ಕಾಲದಲ್ಲಿ’, ‘ಚೆಲುವಿ’, ‘ಕಾನೂರು ಹೆಗ್ಗಡತಿ’ ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಿಂದಿ ಚಿತ್ರಗಳಾದ ‘ನಿಶಾಂತ್’, ‘ಮಂಥನ್’, ‘ಪುಕಾರ್’, ಇತ್ತೀಚಿನ ‘ಏಕ್ ಥಾ ಟೈಗರ್’, ‘ಟೈಗರ್ ಜಿಂದಾ ಹೈ’ ಮುಂತಾದ ಚಿತ್ರಗಳಲ್ಲಿ ತನ್ನ ಪ್ರಭುದ್ದ ನಟನೆಯಿಂದ ಮನೆಮಾತಾಗಿದ್ದರು.

ಗಿರೀಶ್ ಕಾರ್ನಾಡರು ತಮ್ಮ ಸಾಹಿತ್ಯ ಕೃಷಿ ಮತ್ತು ಚಲನ ಚಿತ್ರಗಳಿಗಾಗಿ ಪದ್ಮಶ್ರೀ, ಪದ್ಮಭೂಷಣ, ಜ್ಞಾನಪೀಠ ಪ್ರಶಸ್ತಿ, ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಚಿತ್ರ ನಟನೆ ಮತ್ತು ನಿರ್ದೇಶನಕ್ಕಾಗಿ ರಾಷ್ಟ್ರ ಪ್ರಶಸ್ತಿ, ಫಿಲಂ ಫೇರ್ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರೆ.

ಟಾಪ್ ನ್ಯೂಸ್

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.