GKVK ಕೋವಿಡ್ ಆರೈಕೆ ಕೇಂದ್ರದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ಬೆವರಿಳಿಸಿದ ಡಿಸಿಎಂ
Team Udayavani, Jul 16, 2020, 9:23 PM IST
ಬೆಂಗಳೂರು: ಜಿಕೆವಿಕೆಯಲ್ಲಿ ಸ್ಥಾಪಿಸಲಾಗಿರುವ 712 ಹಾಸಿಗೆಗಳ ಕೋವಿಡ್ ಕೇರ್ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಅಲ್ಲಿನ ಅವ್ಯವಸ್ಥೆಗಳ ಕರ್ಮಕಾಂಡವನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗಡದುಕೊಂಡ ಪ್ರಸಂಗ ನಡೆಯಿತು.
ಗುರುವಾರ ಕೊವಿಡ್ ಕೇರ್ ಸೆಂಟರ್ ಗೆ ದಿಢೀರ್ ಭೇಟಿ ನೀಡಿದಾಗ ಸೋಂಕಿಗೆ ಹೆದರಿರುವ ವೈದ್ಯರು, ಕಂದಾಯ, ಬಿಬಿಎಂಪಿ ಅಧಿಕಾರಿಗಳ ತೀವ್ರ ನಿರ್ಲಕ್ಷ್ಯದಿಂದ ರೋಗಿಗಳು ನರಕ ಸದೃಶ್ಯ ಯಾತನೆ ಅನುಭವಿಸುತ್ತಿರುವುದನ್ನು ಕಣ್ಣಾರೆ ಕಂಡ ಅವರು, ಅಧಿಕಾರಿಗಳ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಚಿಕಿತ್ಸೆ, ಔಷಧೋಪಚಾರ, ಸ್ವತ್ಛತೆ, ಊಟದ ವ್ಯವಸ್ಥೆ, ಶೌಚಾಲಯದ ನೈರ್ಮಲ್ಯ, ಹಾಸಿಗೆಯ ಮೇಲಿನ ಬಟ್ಟೆ ಬದಲಿಸುವುದೂ ಸೇರಿದಂತೆ ಯಾವುದೇ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ಅಧಿಕಾರಿಗಳು ಮತ್ತು ವೈದ್ಯರ ಅಸಡ್ಡೆಯಿಂದ ರೋಗಿಗಳು ನರಳುವಂತೆ ಆಗಿದೆ. ಇದೆಲ್ಲವನ್ನೂ ಪ್ರತ್ಯಕ್ಷವಾಗಿ ಗಮನಿಸಿದ ಉಪ ಮುಖ್ಯಮಂತ್ರಿ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಅಳಲು ತೋಡಿಕೊಂಡ ಸೋಂಕಿತರು:
ಆರೈಕೆ ಕೇಂದ್ರದಲ್ಲೇ ಸೋಂಕಿತರ ಜತೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿ ಮುಂದೆ ತಮಗಾಗುತ್ತಿರುವ ತೊಂದರೆಗಳನ್ನು ರೋಗಿಗಳು ಎಳೆಎಳೆಯಾಗಿ ಬಿಡಿಸಿಟ್ಟರು. ವೈದ್ಯರು ಒಳಕ್ಕೇ ಬರುತ್ತಿಲ್ಲ. ನಮ್ಮ ಯಾವುದೇ ಸಮಸ್ಯೆಗೂ ಸ್ಪಂದಿಸುತ್ತಿಲ್ಲ. ಪ್ರಶ್ನೆಗಳಿಗೆ ಉತ್ತರ ಕೊಡುತ್ತಿಲ್ಲ. ನಮ್ಮನ್ನು ತೀರಾ ನಿರ್ಲಕ್ಷ್ಯ, ಅಸಡ್ಡೆಯಿಂದ ನೋಡಲಾಗುತ್ತಿದೆ ಎಂದು ಕಣ್ಣೀರು ಹಾಕಿದರು. ಇದೆಲ್ಲವನ್ನು ಕೇಳಿ ಆಘಾತಕ್ಕೊಳಗಾದ ಡಿಸಿಎಂ ಅಧಿಕಾರಿಗಳ ಮೇಲೆ ಕೆಂಡಾಮಂಡಲಗೊಂಡರು.
ಡಿಸಿಎಂ ಬಂದ ಮೇಲೆ ಬಂದ ವೈದ್ಯೆ:
ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ನಿಯೋಜನೆಗೊಂಡು ಜಿಕೆವಿಕೆ ಕೋವಿಡ್ ಕೇರ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಡಿಕಲ್ ನೋಡೆಲ್ ಅಧಿಕಾರಿ ಡಾ. ಸೌಮ್ಯಾ ಎಂಬುವವರು ಡಿಸಿಎಂ ಬಂದಾಗ ಅಲ್ಲಿರಲಿಲ್ಲ. ಸ್ವಲ್ಪಹೊತ್ತಿನ ನಂತರ ಬಂದ ಅವರನ್ನು ಡಿಸಿಎಂ ತೀವ್ರ ತರಾಟೆಗೆ ತೆಗೆದುಕೊಂಡರು. ಮುಖ್ಯ ವೈದ್ಯೆಯಾಗಿದ್ದರೂ ಇವರು ಕೇರ್ ಸೆಂಟರಿನ ಒಳಕ್ಕೇ ಹೋಗುತ್ತಿಲ್ಲವೆಂದು ಅಲ್ಲಿನ ರೋಗಿಗಳು ದೂರಿದರು. ಸಂಜೆ ಒಳಗಾಗಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ನಗರದ ಕೋವಿಡ್ ಉಸ್ತುವಾರಿ ಕೇಂದ್ರಗಳ ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಡಿಸಿಎಂ ಸೂಚನೆ ನೀಡಿದ್ದಾರೆ.
ಹಾಗೆಯೇ, ಜಿಕೆವಿಕೆ ಕೋವಿಡ್ ಕೇಂದ್ರದ ವ್ಯವಸ್ಥಾಪಕ ಅಧಿಕಾರಿ ಆಗಿರುವ ತಹಸೀಲ್ದಾರ್ ಡಾ. ಗಣೇಶ್ , ಇಡೀ ಕೇಂದ್ರದ ಸಂಪೂರ್ಣ ಉಸ್ತುವಾರಿಯೂ ಆಗಿರುವ ಬಿಬಿಎಂಪಿ ಜಂಟಿ ಆಯುಕ್ತ ಅಶೋಕ್ ಅವರಿಗೂ ಎಚ್ಚರಿಕೆ ನೀಡಿದರು.
ಇದೇ ಕ್ಯಾಂಪಸ್ಸಿನ ತೋಟಗಾರಿಕಾ ಮಹಾವಿದ್ಯಾಲಯದಲ್ಲಿನ ಮತ್ತೂಂದು ಆರೈಕೆ ಕೇಂದ್ರ ಉತ್ತಮವಾಗಿದ್ದು, ಅಲ್ಲಿನ ವ್ಯವಸ್ಥೆ ಬಗ್ಗೆ ಡಿಸಿಎಂ ತೃಪ್ತಿ ವ್ಯಕ್ತಪಡಿಸಿದರು. ವೈದ್ಯರು, ನರ್ಷ್ ಗಳು, ಸ್ವತ್ಛತಾ ಸಿಬ್ಬಂದಿ, ಊಟ, ಔಷಧಿ, ಚಿಕಿತ್ಸೆ ಯಾವುದರ ಬಗ್ಗೆಯೂ ಅಲ್ಲಿ ದೂರುಗಳು ಬರಲಿಲ್ಲ. ಅಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರನ್ನು ಡಿಸಿಎಂ ಅಶ್ವತ್ಥ ನಾರಾಯಣ್ ಶ್ಲಾಘಿಸಿದರು.
ಜ್ಞಾನಭಾರತಿಯಲ್ಲಿ ಆರೈಕೆ ಕೇಂದ್ರ:
ಇದಕ್ಕೂ ಮುನ್ನ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್, ಬೆಂಗಳೂರು ವಿವಿಯ ಜ್ಞಾನಭಾರತಿ ಕ್ಯಾಂಪಸ್ಸಿನಲ್ಲಿ ಸ್ಥಾಪನೆ ಮಾಡಲಾಗಿರುವ ನೂತನ ಕೋವಿಡ್ ಕೇರ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗುರುವಾರದಿಂದಲೇ ರೋಗಿಗಳನ್ನು ಶಿಫ್ಟ್ ಮಾಡಲಾಗುತ್ತಿದೆ. ಇಲ್ಲಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದ್ದು, ಈ ಭಾಗದಲ್ಲಿ ಪಾಸೀಟೀವ್ ಬಂದವರನ್ನು ಇಲ್ಲಿ ದಾಖಲು ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ:
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡದ, ಪರಿಸ್ಥಿತಿ ದುರ್ಲಾಭ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಸರಕಾರ ಮುಂದಾಗಿದೆ. ಈಗಾಗಲೇ ವಿಕ್ರಂ ಆಸ್ಪತ್ರೆ, ಜಯನಗರದ ಅಪೋಲೋ ಆಸ್ಪತ್ರೆಗೆ ನೊಟೀಸ್ ನೀಡಲಾಗಿದೆ. ಇನ್ನು ಕೆಲ ಆಸ್ಪತ್ರೆಗಳು ರೋಗಿಗಳಿಂದ ದುಬಾರಿ ಶುಲ್ಕ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಜತೆಗೆ ಸರಕಾರಕ್ಕೆ ನೀಡಬೇಕಾದ ಶೇ.50ರಷ್ಟು ಬೇಡ್’ಗಳನ್ನು ನೀಡದೇ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಲು ಸರಕಾರ ಸ್ಪಷ್ಟ ನಿರ್ಧಾರ ಕೈಗೊಂಡಿದೆ. ಇಂಥ ಆಸ್ಪತ್ರೆಗಳ ಮಾನ್ಯತೆ ರದ್ದು ಮಾಡುವುದರ ಜತೆಗೆ, ಕ್ರಿಮಿನಲ್ ಕೇಸ್ ಕೂಡ ದಾಖಲಿಸಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.