ಕರಾವಳಿಯ ವಿವಿಧೆಡೆ ಉತ್ತಮ ಮಳೆ; ಅಪಾರ ಹಾನಿ , ಧರೆಗುರುಳಿದ ಮರ,ವಿದ್ಯುತ್ ಕಂಬಗಳು
Team Udayavani, May 1, 2020, 5:30 AM IST
ಕೋಡಿಂಬಾಡಿಯ ಆಶಾ ಕಾರ್ಯಕರ್ತೆಯ ಮನೆಯ ಛಾವಣಿ ಹಾನಿಗೀಡಾಗಿದೆ.
ಮಂಗಳೂರು/ಉಡುಪಿ: ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡದ ಪರಿಣಾಮ ಕರಾವಳಿಯ ಕೆಲವು ಭಾಗಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ, ಕೊಯ್ಯೂರು, ಗೇರುಕಟ್ಟೆ, ಕರಾಯ, ಕಲ್ಲೇರಿ, ಮಿತ್ತಬಾಗಿಲು, ದಿಡುಪೆ, ಉಪ್ಪಿನಂಗಡಿ ಪರಿಸರದಲ್ಲಿ ಸಂಜೆ ವೇಳೆ ಒಂದು ತಾಸಿಗೂ ಅಧಿಕ ಉತ್ತಮ ಮಳೆಯಾಗಿದೆ. ಚಾರ್ಮಾಡಿ, ನೆರಿಯ, ಮುಂಡಾಜೆ, ಕನ್ಯಾಡಿ ಮುಂತಾದ ಕಡೆಗಳಲ್ಲಿ ಗುಡುಗು, ಗಾಳಿ ಜೋರಾಗಿತ್ತು. ಬಂಟ್ವಾಳ, ಸುಳ್ಯದ ವಿವಿಧೆಡೆ ಹನಿ ಮಳೆಯಾಗಿದೆ.
ಮಂಗಳೂರು ನಗರದಲ್ಲಿ ಸಂಜೆ ವೇಳೆ ಮೋಡ ಕವಿದ ವಾತಾವರಣ ಇತ್ತು. ಕಾರ್ಕಳ ನಗರ, ಹಿರ್ಗಾನ, ರೆಂಜಾಳ, ಕುಕ್ಕುಂದೂರು ಪರಿಸರದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ.
2 ದಿನ ಯೆಲ್ಲೂ ಅಲರ್ಟ್
ಕರಾವಳಿ ಭಾಗದಲ್ಲಿ ಮೇ 2 ಮತ್ತು 3ರಂದು ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಸುಮಾರು 64.5 ಮಿ.ಮೀ.ನಿಂದ 115.5 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಸಿಡಿಲು ಬಡಿದು ಹಾನಿ
ವಿಟ್ಲ: ಕುದ್ದುಪದವು ನಿವಾಸಿ ಚನ್ನಪ್ಪ ನಾಯ್ಕ ಅವರ ಮನೆಯ ಸಮೀಪದ ತೆಂಗಿನ ಮರಕ್ಕೆ ಮತ್ತು ಮನೆಗೆ ಸಿಡಿಲು ಬಡಿದು ಹಾನಿ ಸಂಭವಿಸಿದೆ. ಮನೆಯ ವಿದ್ಯುತ್ ಸಂಪರ್ಕ ವ್ಯವಸ್ಥೆ , ಉಪಕರಣಗಳು ಸುಟ್ಟುಹೋಗಿವೆ.
ಬೆಳ್ತಂಗಡಿ: ಅಪಾರ ಹಾನಿ
ಬೆಳ್ತಂಗಡಿ: ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಜಿ.ಪಂ. ಮಾಜಿ ಸದಸ್ಯ ಶೈಲೇಶ್ ಕುರ್ತೋಡಿ ಅವರ ಹಟ್ಟಿಗೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿದೆ. ಪರಿಸರದ ತೋಟಗಳಲ್ಲಿ 80ಕ್ಕೂ ಅಧಿಕ ಅಡಿಕೆ ಗಿಡಗಳು ಗಾಳಿಗೆ ಬುಡಸಮೇತ ಧರೆಗುರುಳಿವೆ.
ಉಜಿರೆ ಪೇಟೆ ಸಮೀಪ ಪಕ್ಕದ ಕಲ್ಲೆಯಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಗಣೇಶ್ ನಾಯ್ಕ… ಅವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಂಪರ್ಕ ಸುಟ್ಟುಹೋಗಿದೆ. ನಡ ಗ್ರಾಮದ ನಡ ಬೈಲು ಶ್ರೀಧರ ಆಚಾರ್ಯ ಅವರ ಮನೆ ಮೇಲೆ ಮರ ಬಿದ್ದಿದೆ. ಮೇಲಂತಬೆಟ್ಟು ಇಳಂತಿಲ, ಕಣಿಯೂರು ಪರಿಸರ ಸೇರಿದಂತೆ ಒಟ್ಟು 15ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಉಪ್ಪಿನಂಗಡಿಯಲ್ಲೂ ಹಾನಿ
ಉಪ್ಪಿನಂಗಡಿ: ಲಕ್ಷ್ಮೀವೆಂಕಟರಮಣ ದೇವಾಲಯದ ಕಲ್ಯಾಣ ಮಂಟಪ, ಗಣಪತಿ ಮಠ, ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ನೌಕರರ ವಸತಿ ಗೃಹ, ಪಾಕಶಾಲೆ, ಜಗದೀಶ್ ಶೆಟ್ಟಿ ಅವರ ಕಟ್ಟಡ ಸಹಿತ ಪರಿಸರದ ಹಲವು ಕಟ್ಟಡಗಳು ಹಾನಿಗೀಡಾಗಿವೆ.
ನೆಕ್ಕಿಲಾಡಿಯ ಆದರ್ಶ ನಗರದ ಆಸ್ಯಮ್ಮ ಅವರ ಮನೆ ಸಂಪೂರ್ಣ ಹಾನಿಗಿಡಾಗಿದೆ. ಇದೇ ಪರಿಸರದ 3 ಮನೆಗಳು ಭಾಗಶಃ ಹಾನಿಗೀಡಾಗಿವೆ. ಇಳಂತಿಲದಲ್ಲಿ ಮರಗಳು ಉರುಳಿ ಬಿದ್ದಿದ್ದು, 6 ವಿದ್ಯುತ್ ಕಂಬಗಳು ತುಂಡಾಗಿವೆ. ಒಂದು ವಿದ್ಯುತ್ ಪರಿವರ್ತಕ ಸಂಪೂರ್ಣ ಹಾನಿಗೀಡಾಗಿದೆ. ಇದೇ ಗ್ರಾಮದ ಬನ್ನೆಂಗಳದಲ್ಲಿ ವಿಜಯ ರಾಮಕೃಷ್ಣ ಅವರ ಮನೆಗೆ ಸಿಡಿಲು ಬಡಿದು ಮನೆ ಹಾನಿಗೀಡಾಗಿದೆ. ನೂಜದಲ್ಲಿ ರೂಪಾ ಅವರ ಮನೆಗೂ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೋಡಿಂಬಾಡಿ: ಹೊಸ ಮನೆಗೆ ಹಾನಿ
ಪುತ್ತೂರು: ಭಾರೀ ಗಾಳಿ-ಮಳೆಯಿಂದ ತಾಲೂಕಿನ ಕೋಡಿಂಬಾಡಿ ಗ್ರಾಮದ ಮೊನಡ್ಕ ಸುರೇಶ್ ಶೆಟ್ಟಿ ಅವರ ಮನೆ ಸಿಮೆಂಟ್ ಶೀಟಿನ ಛಾವಣಿ ಹಾನಿಗೀಡಾಗಿದೆ. ಕೆಲ ತಿಂಗಳ ಹಿಂದೆಯಷ್ಟೆ ಮನೆ ನಿರ್ಮಿಸಲಾಗಿತ್ತು.
ಸುರೇಶ್ ಶೆಟ್ಟಿ, ಪತ್ನಿ ಆಶಾ ಕಾರ್ಯಕರ್ತೆ ಪವಿತ್ರಾ, ಒಂದು ವರ್ಷ ಹಾಗೂ ಐದು ವರ್ಷದ ಮಕ್ಕಳು ಈ ಸಂದರ್ಭ ಮನೆ ಯಲ್ಲಿದ್ದರೂ ಅಪಾಯದ ಸೂಚನೆ ಸಿಕ್ಕಿದ ಕೂಡಲೇ ಹೊರಗೆ ಓಡಿ ಹೋಗಿ ಅಪಾಯದಿಂದ ಪಾರಾಗಿದ್ದಾರೆ. 1 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.