Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
ಗೋಶಾಲೆಗೆ ಬರಬೇಕಿದ್ದ ಗೋವುಗಳೆಲ್ಲ ಕಸಾಯಿ ಖಾನೆಗೆ ಹೋಗುತ್ತಿವೆ ಇದರಿಂದ ಗೋಶಾಲೆಗಳು ಬರಿದು
Team Udayavani, Jan 6, 2025, 7:15 AM IST
ಬೀದರ್: ಬಿಜೆಪಿ ಸರ್ಕಾರದ ಅವ ಧಿಯಲ್ಲಿ ಭರ್ತಿಯಾಗಿದ್ದ ಗೋಶಾಲೆಗಳು ಕಾಂಗ್ರೆಸ್ ಸರ್ಕಾರದಲ್ಲಿ ಖಾಲಿಯಾಗಿರುವುದು ಹೇಗೆ? ಗೋ ಶಾಲೆಗಳನ್ನು ಮುಚ್ಚುವುದರ ಮೂಲಕ ಕಾಂಗ್ರೆಸ್ ಸರ್ಕಾರ ಗೋಹತ್ಯೆಗೆ ಪ್ರಚೋದನೆ ನೀಡುತ್ತಿದೆ ಎಂದು ಪಶು ಸಂಗೋಪನೆ ಇಲಾಖೆ ಮಾಜಿ ಸಚಿವ ಪ್ರಭು ಚವ್ಹಾಣ ಟೀಕಿಸಿದ್ದಾರೆ.
ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ 14 ಗೋಶಾಲೆಗಳಿಗೆ ಗೋವುಗಳು ಬರುತ್ತಿಲ್ಲ ಎಂದು ಸರ್ಕಾರ ಸಮಜಾಯಿಷಿ ನೀಡಿ ಈ ಗೋಶಾಲೆಗಳನ್ನು ಬಂದ್ ಮಾಡಲು ಹಾಗೂ ಇದರ ಅನುದಾನವನ್ನು ಇತರೆ ಗೋಶಾಲೆಗಳಿಗೆ ನೀಡಲು ಮುನ್ನುಡಿ ಬರೆದಿರುವುದು ಬೇಸರ ತಂದಿದೆ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಅಕ್ರಮ ಗೋವುಗಳ ಸಾಗಾಣಿಕೆ ಹೆಚ್ಚಳ:
ಬಿಜೆಪಿ ಸರ್ಕಾರದ ಅವಧಿಯಲ್ಲಿ ಗೋವುಗಳ ರಕ್ಷಣೆಗೆ ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ತಡೆಗಟ್ಟಲು ಗೋಹತ್ಯೆ ನಿಷೇಧ ಕಾನೂನು ಹಾಗೂ ಪ್ರಾಣಿ ಕಲ್ಯಾಣ ಮಂಡಳಿ, ಪಶು ಸಹಾಯವಾಣಿ, ಪುಣ್ಯಕೋಟಿ ದತ್ತು ಯೋಜನೆ ಅನುಷ್ಠಾನಕ್ಕೆ ತಂದು ಪ್ರಾಣಿಗಳ ರಕ್ಷಣೆಗೆ ಮುಂದಾಗಿತ್ತು. ಅಕ್ರಮ ಗೋವುಗಳ ಸಾಗಾಣಿಕೆ ಹೆಚ್ಚಾಗಿರುವುದರಿಂದ ಗೋಶಾಲೆಗೆ ಬರಬೇಕಾಗಿದ್ದ ಗೋವುಗಳೆಲ್ಲ ಕಸಾಯಿ ಖಾನೆಗೆ ಹೋಗುತ್ತಿವೆ ಇದರಿಂದಾಗಿ ಗೋಶಾಲೆಗಳು ಬರಿದಾಗುತ್ತಿವೆ. ಅಕ್ರಮ ಗೋವುಗಳ ಸಾಗಾಣಿಕೆಗೆ ತಡೆ ಒಡ್ಡಲು ನಿರ್ಮಾಣ ಮಾಡಿದ್ದ ಚೆಕ್ ಪೋಸ್ಟ್ಗಳನ್ನೆಲ್ಲ ಕಾಂಗ್ರೆಸ್ ಸರ್ಕಾರ ತೆರವುಗೊಳಿಸಿದೆ. ಇದರಿಂದಾಗಿ ಎಲ್ಲೆಂದರಲ್ಲಿ ಅಕ್ರಮ ಗೋವುಗಳ ಸಾಗಾಣಿಕೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ನೇತ್ರಾವತಿ ನದಿ ಸಾಕ್ಷಿ:
ನೇತ್ರಾವತಿ ನದಿಯ ಉಪನದಿಯಾದ ಮೃತ್ಯುಂಜಯ ನದಿಯಲ್ಲಿ 11 ಚೀಲಗಳಲ್ಲಿ ಚರ್ಮ ಸೇರಿದಂತೆ ತ್ಯಾಜ್ಯವನ್ನು ಎಸೆಯಲಾಗಿದೆ. ಇದು ರಾಜ್ಯದಲ್ಲಿ ಗೋ ಹತ್ಯೆ ಹೆಚ್ಚುತ್ತಿರುವುದರ ಸಂಕೇತವಾಗಿದೆ. ಇದಕ್ಕೆ ಪುಷ್ಟಿ ಎಂಬಂತೆ ಸರ್ಕಾರ ಸಹ ಗೋಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಾದಕ ವಸ್ತು ಸೇವನೆ ಆರೋಪ: ಯುವಕ ವಶಕ್ಕೆ
Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.