ಸರಕಾರಿ ನೌಕರರ ವರ್ಗಾವಣೆ ನೀತಿ: ಭ್ರಷ್ಟಾಚಾರಕ್ಕೆ ರಹದಾರಿ


Team Udayavani, Jul 10, 2021, 6:50 AM IST

ಸರಕಾರಿ ನೌಕರರ ವರ್ಗಾವಣೆ ನೀತಿ: ಭ್ರಷ್ಟಾಚಾರಕ್ಕೆ ರಹದಾರಿ

ಸರಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದ 2013ರ ಮಾರ್ಗಸೂಚಿಗಳ ಪ್ರಕಾರ ಸರಕಾರಿ ನೌಕರರ ವರ್ಗಾವಣೆಗಳಲ್ಲಿ ರಾಜಕೀಯ ಒತ್ತಡ ನಿಷಿದ್ಧ. ಆದರೆ 2021-22ನೇ ಸಾಲಿಗೆ ಸರಕಾರಿ ನೌಕರರ ವರ್ಗಾವಣೆ ಅಧಿಕಾರವನ್ನು ಸರಕಾರ ನೇರವಾಗಿ ಸಚಿವರ ಕೈಗೆ ಕೊಟ್ಟಿರುವುದು ವಿಪರ್ಯಾಸ.

ಸರಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಆಡಳಿತ ವ್ಯವಸ್ಥೆಯ ಬಹುಮುಖ್ಯ ಹಂತ. ಆಡಳಿತ ಯಂತ್ರದ ಪಾರದರ್ಶಕ ಕಾರ್ಯನಿರ್ವಹಣೆಗೆ ವರ್ಗಾವಣೆ ಪ್ರಕ್ರಿಯೆಯೂ ಅಷ್ಟೇ ಪಾರದರ್ಶಕ ಮತ್ತು ಹಸ್ತಕ್ಷೇಪಗಳಿಂದ ಮುಕ್ತವಾಗಿರಬೇಕು. ಅದರಲ್ಲೂ ಮುಖ್ಯವಾಗಿ ಅಧಿಕಾರಿ/ನೌಕರರ ವರ್ಗಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಇರಕೂಡದು. ಆದರೆ ಇದು ಎಲ್ಲ ಸರಕಾರಗಳಲ್ಲೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನಡೆದುಕೊಂಡು ಬಂದಿದೆ.

2021-22ನೇ ಸಾಲಿಗೆ ಬಿ ಮತ್ತು ಸಿ ಗ್ರೂಪ್‌ ನೌಕರರು ಮತ್ತು ಅಧಿಕಾರಿ ಗಳಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ಸಾರ್ವತ್ರಿಕ ವರ್ಗಾ ವಣೆ ಮಾಡಲು ಆಯಾ ಇಲಾಖೆಯ ಸಚಿವರಿಗೆ ಅಧಿಕಾರ ನೀಡಿ ಸರಕಾರ ಮಾರ್ಗ ಸೂಚಿಗಳನ್ನು ಹೊರಡಿಸಿರುವುದು ಸಾಕಷ್ಟು ಜಿಜ್ಞಾಸೆಗಳನ್ನು ಹುಟ್ಟು ಹಾಕಿದೆ. ಜುಲೈ 22ರೊಳಗೆ ವರ್ಗಾವಣೆ ಪೂರ್ಣಗೊಳಿಸಬೇಕು ಎಂದು ಸೀಮಿತ ಕಾಲಾವಧಿ ನೀಡಿರುವುದು ವರ್ಗಾವಣೆ ಪ್ರಕ್ರಿಯೆ ತ್ವರಿತವಾಗಲು ಒತ್ತಡಗಳು, ಲಾಬಿಗಳು ನಡೆಯುವುದನ್ನು ಅಲ್ಲಗಳೆಯುವಂತಿಲ್ಲ. ಪಾರ ದರ್ಶ ಕತೆ ನೀರಿಕ್ಷಿಸುವುದು ಕಷ್ಟ, ಭ್ರಷ್ಟಾಚಾರ, ಸ್ವಜನಪಕ್ಷಪಾತ ನಡೆದರೆ ಅಚ್ಚರಿ ಪಡುವಂತಿಲ್ಲ. “ಸರಕಾರಿ ನೌಕರನು ವರ್ಗಾವಣೆಯನ್ನು ಹಕ್ಕೆಂದು ಪ್ರತಿಪಾದಿಸುವಂತಿಲ್ಲ. ವರ್ಗಾವಣೆಗಳ ಬಗ್ಗೆ ರಾಜಕೀಯ ಒತ್ತಡವನ್ನು ತರು ವುದು ನಿಷೇಧಿಸಲಾಗಿದೆ. ಯಾವುದೇ ಸರಕಾರಿ ನೌಕರನು ತನ್ನನ್ನು ಯಾವುದೇ ನಿರ್ದಿಷ್ಟ ಹುದ್ದೆಗೆ ವರ್ಗಾಯಿಸಲು ಒತ್ತಡ ತಂದಲ್ಲಿ ಅಂತಹ ನೌಕರನನ್ನು ಕೋರಿದ ಸ್ಥಳಕ್ಕೆ ವರ್ಗಾವಣೆಗೊಳ್ಳದಂತೆ ನೋಡಿಕೊಳ್ಳತಕ್ಕದ್ದು ಎಂದು ಸರಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ 2013ರಲ್ಲಿ ಹೊರಡಿಸಲಾದ ಹೊಸ ಮಾರ್ಗಸೂಚಿಗಳಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಸರಕಾರಿ ನೌಕರರ ವರ್ಗಾವಣೆ ಕುರಿತಂತೆ ಹಾರನಹಳ್ಳಿ ರಾಮಸ್ವಾಮಿ ಅಧ್ಯಕ್ಷತೆಯ ಆಡಳಿತ ಸುಧಾರಣ ಆಯೋಗ 2001ರಲ್ಲಿ ನೀಡಿದ್ದ ವರದಿ ಯಲ್ಲಿ ಮಾಡಲಾಗಿದ್ದ ಶಿಫಾರಸುಗಳಿಗೆ ಅನ್ವಯವಾಗಿ ವರ್ಗಾವಣೆಗೆ ವಿಸ್ತೃತ ಮಾರ್ಗಸೂಚಿಗಳನ್ನು ಹೊರಡಿಸಲಾಗಿತ್ತು. ಅದರಂತೆ ಪ್ರತೀ ವರ್ಷ ಮಾಡ ಬೇಕಾದ ವರ್ಗಾವಣೆಗಳಿಗೆ ಸೂಚನೆಗಳನ್ನು ನೀಡುತ್ತ ಬರಲಾಗಿದೆ. ಆದರೆ ಸರಕಾರಿ ನೌಕರರನ್ನು ಒಂದೇ ಸ್ಥಳದಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಒಂದು ನಿರ್ದಿಷ್ಟ ಅವಧಿಗೆ ಮುಂದುವರಿಸಿರುವುದರಿಂದ ಅವರು ಇಲಾಖಾ ಚಟುವಟಿಕೆಗಳ ಬಗ್ಗೆ ವಾಸ್ತವಿಕ ಮತ್ತು ಸಮಂಜಸ ಜ್ಞಾನ ಪಡೆದು ಇಲಾ ಖೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಉದ್ದೇಶಿತ ಫ‌ಲಿ ತಾಂಶಗಳನ್ನು ಪೂರೈಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸುವುದು ಆವಶ್ಯಕವೆಂದು ಕಂಡು ಬಂದ ಹಿನ್ನೆಲೆಯಲ್ಲಿ ಹಾಗೂ ಆಡಳಿತ ಸುಧಾರಣ ಆಯೋಗದ ಶಿಫಾರಸಿನಂತೆ ಆಡಳಿತದಲ್ಲಿ ಹೆಚ್ಚಿನ ಹೊಣೆಗಾರಿಕೆ ಮತ್ತು ಪಾರದರ್ಶಕತೆ ತರುವುದು ಅಗತ್ಯವಾಗಿದೆ ಎಂದು ಮನಗಂಡ ಹಿನ್ನೆಲೆಯಲ್ಲಿ 2013ರಲ್ಲಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಯಿತು.

ಸರಕಾರಿ ನೌಕರರ ವರ್ಗಾವಣೆ ಅಧಿಕಾರವನ್ನು ಸಚಿವರಿಗೆ ನೀಡಿರುವ ಹಿಂದೆ ಸರಕಾರದ ಉದ್ದೇಶವೇನಿದೆ ಎನ್ನುವುದು ಸ್ಪಷ್ಟವಾಗಿಲ್ಲ. ಕೊರೊನಾ ಕಾರಣಕ್ಕೆ ಕಳೆದ ವರ್ಷವೂ ನಿಯಮಿತವಾಗಿ ವರ್ಗಾವಣೆ ನಡೆದಿಲ್ಲ. ಈಗ ವರ್ಗಾವಣೆಗೆ ಅವಕಾಶ ಕೊಟ್ಟು ಅದರ ಅಧಿಕಾರವನ್ನು ಸಚಿವರಿಗೆ ಕೊಟ್ಟಿರು ವುದರಿಂದ ವರ್ಗಾವಣೆ ಪ್ರಕ್ರಿಯೆಯನ್ನು ನಿಯಂತ್ರಿಸುವುದು ಅಷ್ಟೊಂದು ಸುಲಭವಲ್ಲ. ಮುಂದೆ ಆಗುವ ಎಲ್ಲ ಎಡರುತೊಡರುಗಳಿಗೆ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.