ಕುಕ್ಕೆ, ಧರ್ಮಸ್ಥಳಕ್ಕೆ ರಾಜ್ಯಪಾಲರ ಭೇಟಿ
Team Udayavani, Feb 14, 2023, 5:50 AM IST
ಧರ್ಮಸ್ಥಳ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಂಗಳ ವಾರ ಮತ್ತು ಬುಧವಾರ ಕರಾ ವಳಿಯ ತೀರ್ಥಕ್ಷೇತ್ರಗಳ ದರ್ಶನ ಮಾಡುವರು.
ಮಂಗಳವಾರ ಪೂರ್ವಾಹ್ನ 8ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 1 ಗಂಟೆಗೆ ಮೂಡಿ ಗೆರೆ ಅತಿಥಿ ಗೃಹಕ್ಕೆ ಬರುವರು.
ಅಪರಾಹ್ನ 3.30ಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಬಂದು ದೇವರ ದರ್ಶನದ ಬಳಿಕ ಸಂಜೆ 5ಕ್ಕೆ ಧರ್ಮಸ್ಥಳ ತಲುಪುವರು. ರಾತ್ರಿ ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವರು. ಬುಧವಾರ ಬೆಳಗ್ಗೆ ದೇವರ ದರ್ಶನದ ಬಳಿಕ ಅಮೃತ ವರ್ಷಿಣಿ ಸಭಾಭವನದಲ್ಲಿ ನವಜೀವನ ಸಮಾವೇಶದಲ್ಲಿ ಭಾಗವಹಿಸುವರು. ಅಪರಾಹ್ನ 3 ಗಂಟೆಗೆ ಧರ್ಮಸ್ಥಳದಿಂದ ಹೊರಟು ರಾತ್ರಿ ಕುದುರೆಮುಖದಲ್ಲಿ ಅರಣ್ಯ ಇಲಾಖೆಯ ಅತಿಥಿ ಗೃಹದಲ್ಲಿ ತಂಗುವರು ಎಂದು ಪ್ರಕಟನೆ ತಿಳಿಸಿದೆ.
ಇದನ್ನೂ ಓದಿ: ನಾಗರಹೊಳೆ ಪಕ್ಷಿ ಸಮೀಕ್ಷೆಯಲ್ಲಿ 290 ಕ್ಕೂ ಹೆಚ್ಚು ಪಕ್ಷಿ ಪ್ರಬೇಧಗಳ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.