Governmnet Grant; 10 ಕಂಬಳಕ್ಕೆ ಮಾತ್ರ 5 ಲ. ರೂ.: ಶಾಸಕ ಅಶೋಕ ಕುಮಾರ್ ರೈ
Team Udayavani, Jul 23, 2024, 6:36 AM IST
ಬೆಂಗಳೂರು: ಕಂಬಳ ಅನುದಾನ ಕುರಿತು ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಪ್ರವಾಸೋದ್ಯಮ ಹಾಗೂ ಕಾನೂನು-ಸಂಸದೀಯ ವ್ಯವಹಾರ ಸಚಿವ ಎಚ್.ಕೆ. ಪಾಟೀಲ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ 25 ಕಂಬಳಗಳಿಗೆ ಈ ಹಿಂದೆ ತಲಾ 5 ಲಕ್ಷ ರೂ. ನೀಡಲಾಗುತ್ತಿತ್ತು. ಈ ಬಾರಿ 10ಕ್ಕೆ ತಲಾ 5 ಲಕ್ಷ ರೂ. ಅನುದಾನ ನೀಡಲಾಗುವುದು. ಉಳಿದವುಗಳಿಗೆ ಅನುದಾನ ವಿಸ್ತರಿಸುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.
ನಕ್ಷೆ ಮಂಜೂರು ಸಮಸ್ಯೆ: ಸ್ಪೀಕರ್ ಕಚೇರಿಯಲ್ಲಿ ಸಭೆ
ಗ್ರಾಮೀಣ ಪ್ರದೇಶದಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತಿತ ಜಮೀನುಗಳ ಏಕವಿನ್ಯಾಸ ನಕ್ಷೆಗಳಿಗೆ ಈ ಹಿಂದಿನಂತೆ ಗ್ರಾಮ ಪಂಚಾಯತ್‌ಗಳಲ್ಲಿ ಅನುಮೋದನೆ ನೀಡಿ, 9 ಮತ್ತು 11 ಎ ನೀಡಲು ಅವಕಾಶ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಪೀಕರ್ ಯು.ಟಿ. ಖಾದರ್‌ಕಚೇರಿಯಲ್ಲಿ ಬುಧವಾರ ಬೆಳಗ್ಗೆ ಸಭೆ ಆಯೋಜಿಸಲಾಗಿದೆ. ಶಾಸಕ ಅಶೋಕ ರೈ ಅವರ ಗಮನ ಸೆಳೆಯುವ ಸೂಚನೆ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಕಂದಾಯ, ಗ್ರಾಮೀಣಾಭಿವೃದ್ಧಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಕರಾವಳಿ ಭಾಗದ ಎಲ್ಲ ಶಾಸಕರ ಜತೆ ಸಭೆ ಆಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.