Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ
Team Udayavani, Jul 4, 2024, 11:25 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ರ ಬಜೆಟ್‌ನಲ್ಲಿ ಉಲ್ಲೇಖೀಸಿದ್ದ “ನಾವು-ಮನುಜರು’ ಕಾರ್ಯಕ್ರಮದ ರೂಪರೇಖೆಗಳನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಪ್ರಕಟಿಸಿದೆ. ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ವಾರಕ್ಕೆ 2 ಗಂಟೆಗಳ ಕಾಲ ನಾವು-ಮನುಜರು ಕಾರ್ಯಕ್ರಮ ನಡೆಯಲಿದೆ.
ಶಾಲಾ ವೇಳಾಪಟ್ಟಿಯಲ್ಲಿನ ಮೌಲ್ಯ ಶಿಕ್ಷಣ ಮತ್ತು ಸಾಮಾಜಿಕ ಉಪಯುಕ್ತ ಉತ್ಪಾದನೆ ಕಾರ್ಯಕ್ಕೆ ಮೀಸಲಾಗಿರುವ ಅವಧಿಯನ್ನು ಹೊಂದಿಕೆ ಮಾಡಿಕೊಂಡು ಕಡ್ಡಾಯವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಆಯುಕ್ತರು ಸೂಚನೆ ನೀಡಿದ್ದಾರೆ.
ವಾರಕ್ಕೆ 120 ನಿಮಿಷ ಅಂದರೆ ಮೂರು ಅವಧಿಯಲ್ಲಿ (40 ನಿಮಿಷ) ವಿಚಾರ ವಿಮರ್ಶೆ ಮತ್ತು ಸಂವಾದವನ್ನು ಒಳಗೊಂಡ ಕಾರ್ಯಕ್ರಮನನ್ನು ಆಯೋಜಿಸಬೇಕು. ವಿದ್ಯಾ ಕೇಂದ್ರಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ಕೇಂದ್ರವನ್ನಾಗಿಸುವುದು ಕಾರ್ಯಕ್ರಮದ ಉದ್ದೇಶ.
ಕಾರ್ಯಕ್ರಮದಲ್ಲಿ ಏನಿರಲಿದೆ
ಸ್ಥಳೀಯ ಆಚರಣೆಗಳ ಹಿನ್ನೆಲೆ, ಮಹತ್ವದ ಬಗ್ಗೆ ಚರ್ಚೆ, ರಾಷ್ಟ್ರೀಯ ಹಬ್ಬಗಳ ಮಹತ್ವದ ಬಗ್ಗೆ ಸಂವಾದ, ಸಮಾಜ ಸುಧಾರಕರ ಬಗ್ಗೆ ಚಿಂತನೆಗಳ ಬಗ್ಗೆ ಚರ್ಚೆ, ಸ್ಥಳೀಯ ಪ್ರಸಿದ್ಧ ತಾಣಗಳು, ಕುಲಕಸುಬು, ಗುಡಿ ಕೈಗಾರಿಕೆಗೆಳಿಗೆ ಭೇಟಿ, ಮಹತ್ವದ ಚರ್ಚೆ, ವಿಭಕ್ತ ಮತ್ತು ಅವಿಭಕ್ತ ಕುಟುಂಬಗಳ ಬಗ್ಗೆ ಚರ್ಚೆ, ಕುಟುಂಬದ ಸಾಂಪ್ರದಾಯಿಕ ಮತ್ತು ಸಾಮಾಜಿಕ ಮೌಲ್ಯಗಳ ಬಗ್ಗೆ ಚರ್ಚೆ, ಅಸಮಾನತೆ ನಿರ್ಮೂಲನೆ, ಸಾಂವಿಧಾನಿಕ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭಾತೃತ್ವ ಕುರಿತು ಸಂವಾದ, ಪರಿಸರ ಪ್ರಜ್ಞೆ, ಮೂಢನಂಬಿಕೆ ನಿರ್ಮೂಲನೆ, ಅಡುಗೆ ಮನೆ ಮತ್ತು ನಿತ್ಯ ಜೀವನದಲ್ಲಿ ವಿಜ್ಞಾನ, ಸ್ಥಳೀಯ ಮೌಡ್ಯಗಳ ನಿವಾರಣೆ, ಮನೆ ಮದ್ದುಗಳ ಪರಿಚಯಿಸುವಿಕೆ, ಪ್ರಶ್ನೆ ಕೇಳುವ ಮನೋಭಾವ, ಡಿಜಿಟಲ್ ಸಾಧನಗಳ ಸದ್ಬಳಕೆ, ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆ, ಸಹಪಂಕ್ತಿ ಭೋಜನದ ಮಹತ್ವ ಮುಂತಾದ ವಿಷಯಗಳಿಗೆ ಒತ್ತು ನೀಡಿ ಕಾರ್ಯಕ್ರಮ ಆಯೋಜಿಸಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.