ಸರಕಾರದ ಆಪತ್ಕಾಲ ಯೋಜನೆ ಸಿದ್ಧ; ಮೂಲಸೌಕರ್ಯ ಒದಗಿಸಲು ನಡೆದಿದೆ ಸಿದ್ಧತೆ
Team Udayavani, Apr 11, 2020, 6:15 AM IST
ಬೆಂಗಳೂರು: ಒಂದು ವೇಳೆ ಈ ತಿಂಗಳಾಂತ್ಯಕ್ಕೆ ರಾಜ್ಯದಲ್ಲಿ ಸೋಂಕುಪೀಡಿತರ ಸಂಖ್ಯೆ 10 ಸಾವಿರ ಮೀರಿದರೆ…
ಇಂಥದ್ದೊಂದು ಸಂಭವನೀಯ ಅಂದಾಜನ್ನು ಮುಂದಿಟ್ಟುಕೊಂಡು ರಾಜ್ಯ ಸರಕಾರ ಕೋವಿಡ್ 19 ವಿರುದ್ಧ ಸಮರಕ್ಕೆ ಸಿದ್ಧವಾಗುತ್ತಿದೆ. ಅದರ ನಿಯಂತ್ರಣಕ್ಕಾಗಿ ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್‌ಗಳು ಮತ್ತು ಇತರ ಮೂಲ ಸೌಕರ್ಯಗಳನ್ನು ಪೂರೈಸುವುದಕ್ಕೂ ರಾಜ್ಯ ಸರಕಾರ ಸಿದ್ಧವಾಗುತ್ತಿದೆ.
ಈ ಬಗ್ಗೆ ಸ್ವತಃ ರಾಜ್ಯ ಸರಕಾರ ಹೈಕೋರ್ಟ್‌ಗೆ ಲಿಖೀತ ಹೇಳಿಕೆ ಮೂಲಕ ತಿಳಿಸಿದೆ. ಒಂದೊಮ್ಮೆ ರಾಜ್ಯದಲ್ಲಿ ಎಪ್ರಿಲ್ ಅಂತ್ಯದ ವೇಳೆಗೆ ಸೋಂಕು ಪೀಡಿತರ ಸಂಖ್ಯೆ 10 ಸಾವಿರ ತಲುಪಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವುದಕ್ಕೆ ಸಿದ್ಧತೆ ಮತ್ತು ಸಾಮರ್ಥ್ಯ ಹೊಂದುವ ಯೋಜನೆ ತನ್ನಲ್ಲಿದೆ ಎಂಬುದನ್ನು ಈ ಮೂಲಕ ಅರುಹಿದೆ.
ಸರಕಾರ ಹೇಳಿದ್ದೇನು?
ರಾಜ್ಯ ಸರಕಾರ ಸಿದ್ಧಪಡಿಸಿರುವ “ಆಪತ್ಕಾಲದ ಸಂಭವನೀಯ ಯೋಜನೆ’ (ಕಂಟಿಂಜೆನ್ಸಿ ಪ್ಲಾನ್) ಪ್ರಕಾರ ಸದ್ಯದ ಕೋವಿಡ್ ಕೇಸ್ ಲೋಡ್‌ಗೆ ಅನುಗುಣವಾಗಿ ಎನ್-95 ಮಾಸ್ಕ್, ಮಾಸ್ಕ್, ಪಿಪಿಇ ಕಿಟ್‌ಗಳು, ಸ್ಯಾನಿಟೈಸರ್‌ಗಳು ಸಾಕಷ್ಟು ಪ್ರಮಾಣದಲ್ಲಿವೆ. ಜತೆಗೆ ಈ ವಸ್ತುಗಳ ಪೂರೈಕೆಗೆ ವ್ಯವಸ್ಥೆ ಮಾಡಿ ಕೊಳ್ಳಲಾಗಿದೆ. ಎಪ್ರಿಲ್ ಅಂತ್ಯಕ್ಕೆ 10 ಸಾವಿರ ಕೋವಿಡ್ 19 ಪ್ರಕರಣಗಳ ಅಂದಾಜು ಹಾಕಿ ಕೊಂಡು, ಅದಕ್ಕೆ ಅನುಗುಣವಾಗಿ ಸುರಕ್ಷಾ ವಸ್ತುಗಳು ಮತ್ತು ಮೂಲ ಸೌಕರ್ಯ ಒದಗಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಸ್ಯಾನಿ ಟೈಸರ್ ಉತ್ಪಾದನೆಯನ್ನು ದಿನಕ್ಕೆ 50 ಸಾವಿರ ಲೀ.ಗೂ ಅಧಿಕ ಹೆಚ್ಚಿಸಲಾಗಿದೆ ಎಂದು ಸರಕಾರ ಹೇಳಿದೆ.
ರಾಜ್ಯದಲ್ಲಿ ಕೋವಿಡ್ 19 ವ್ಯಾಪಕವಾಗಿ “ಹೆಚ್ಚಳವಾದರೆ…’ ಎಂಬ ಸಂಭಾವ್ಯತೆ ಅಂದಾಜಿಸಿ ಆರೋಗ್ಯ ಇಲಾಖೆ ಮುಂಜಾಗ್ರತೆ ಕ್ರಮವಾಗಿ ಸಿದ್ಧತೆ ಮಾಡಿ ಕೊಳ್ಳುತ್ತಿದೆ. ಮಾಸಾಂತ್ಯಕ್ಕೆ ಪೀಡಿತರ ಸಂಖ್ಯೆ 10 ಸಾವಿರ ತಲುಪಬಹುದು ಎಂಬ ಬಗ್ಗೆ ಆರೋಗ್ಯ ಇಲಾಖೆ ಯಾವುದೇ ಹೇಳಿಕೆ ನೀಡಿಲ್ಲ. ಜನರು ಆತಂಕಕ್ಕೆ ಒಳಗಾಗಬೇಕಿಲ್ಲ.
– ಪಂಕಜ್‌ಕುಮಾರ್ ಪಾಂಡೆ, ಆರೋಗ್ಯ ಇಲಾಖೆ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.