ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸರಕಾರದ ಬೇಜವಾಬ್ದಾರಿ ಕಾರಣ: ಸಿದ್ದರಾಮಯ್ಯ ಟೀಕೆ
Team Udayavani, Feb 27, 2022, 8:05 AM IST
ಉಳ್ಳಾಲ ಉರೂಸ್ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರು: ಉಕ್ರೇನ್‌ಮೇಲೆ ರಷ್ಯಾ ಯುದ್ಧ ಸಾರುವ ವಿಚಾರ 15 ದಿನಗಳ ಹಿಂದೆಯೇ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ತಿಳಿದಿದ್ದರೂ ಅಲ್ಲಿರುವ ವಿದ್ಯಾರ್ಥಿಗಳನ್ನು ಕರೆತರಲು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇದ್ದದ್ದು ಸರಕಾರಗಳ ಬೇಜವಾಬ್ದಾರಿತನ ಎಂದು ವಿಧಾನಸಭಾ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಶನಿವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಅಲ್ಲಿದ್ದಾರೆ ಎಂಬುದು ಸರಕಾರಗಳಿಗೆ ಗೊತ್ತಿತ್ತು. ಅವರೀಗ ಉಕ್ರೇನ್‌ನ ವಿವಿ ಧೆೆಡೆ ಸಿಲುಕಿದ್ದಾರೆ. ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು ವಿದ್ಯಾರ್ಥಿಗಳಿಗೆ ತಾಯ್ನಾಡಿಗೆ ಮರಳಿ ಬರಲು ಸಮಸ್ಯೆಯಾಗಿದೆ ಎಂದರು.
ಗಲಭೆಗೆ ಈಶ್ವರಪ್ಪ ಕಾರಣ
ಶಿವಮೊಗ್ಗದಲ್ಲಿ ಹರ್ಷ ಸಾವಿನ ಬಳಿಕ ನಡೆದ ಗಲಭೆಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಆರೋಪಿಸಿದ ಸಿದ್ದರಾಮಯ್ಯ ಅವರು ಹರ್ಷ ಮನೆಗೆ ಕಾಂಗ್ರೆಸ್ ಪಕ್ಷದಿಂದ ಯಾರೂ ಹೋಗಿಲ್ಲ ಅನ್ನುವುದು ನಿಜ. ಅದು ವೈಯಕ್ತಿಕ ದ್ವೇಷದಿಂದ ನಡೆದಿರುವ ಕೊಲೆಯಾಗಿದ್ದು, ಅದಕ್ಕೆ ರಾಜಕೀಯ ಬಣ್ಣ ಕಟ್ಟಲಾಗಿದೆ. ಹರ್ಷ ಸಾವಿಗೂ ಹಿಜಾಬ್‌ಗೂ ಸಂಬಂಧವಿಲ್ಲ ಎಂದರು.
ಬೆಳ್ತಂಗಡಿಯಲ್ಲಿ ನಡೆದ ಹತ್ಯೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಬಜರಂಗ ದಳದವರು ಮಾಡಿರುವ ಹತ್ಯೆ ಇದು. ಶಿವಮೊಗ್ಗ, ಬೆಳ್ತಂಗಡಿ ಎರಡೂ ಕಡೆಗೆ ಹತ್ಯೆಯನ್ನು ಖಂಡಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.