Governer ಕೇಂದ್ರ ಸರ್ಕಾರದ ಕೈಗೊಂಬೆ, ನಾನು ರಾಜೀನಾಮೆ ನೀಡಲ್ಲ: ಸಿಎಂ ಸಿದ್ದರಾಮಯ್ಯ
ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನಿರ್ಣಯ ಚುನಾಯಿತ ಸರ್ಕಾರ ಅಭದ್ರಗೊಳಿಸುವ ಷಡ್ಯಂತ್ರ
Team Udayavani, Aug 17, 2024, 6:24 PM IST
ಬೆಂಗಳೂರು: ಮುಡಾ ಹಗರಣ ಸಂಬಂಧಿಸಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ಸಂವಿಧಾನಬಾಹಿರ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದೊಂದು ರಾಜಕೀಯ ಪಿತೂರಿ, ಈ ವಿಚಾರದಲ್ಲಿ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಅವರ ನಿರ್ಣಯ ಚುನಾಯಿತ ಸರ್ಕಾರ ಅಭದ್ರಗೊಳಿಸುವ ಷಡ್ಯಂತ್ರವಾಗಿದೆ. ನಮ್ಮ ಸರ್ಕಾರ ಅಭದ್ರಗೊಳಿಸುವ ದೊಡ್ಡ ಷಡ್ಯಂತ್ರದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಪಾಲುದಾರರು. ಉತ್ತರಾಖಂಡ, ಜಾರ್ಖಂಡ್, ದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ದೂರಿದರು.
ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ, ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು. ನನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟಿಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಯಶಸ್ಸು ಸಹಿಸಲಾಗುತ್ತಿಲ್ಲ:
ಕೇಂದ್ರ ಸರಕಾರವು ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಿಗೆ ಸಹಿಸಲಾಗುತ್ತಿಲ್ಲ . ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗೆ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ.
A grand conspiracy has been hatched to undermine our government. The BJP and JD(S) leaders in the state are all part of this scheme. Just as they did in Uttarakhand, Jharkhand, and Delhi, they are now attempting to execute their plans in Karnataka. We will not let this pass!… pic.twitter.com/uvzStrs98N
— Siddaramaiah (@siddaramaiah) August 17, 2024
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿಯವರ ವಿರುದ್ಧ ದೂರು ನೀಡಲಾಗಿದ್ದರೂ, ಈ ವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ನಲ್ಲಿಎಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆಗೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗಿಲ್ಲ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.