Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಭೇಟಿಯಾಗಿ ಹೊಸ ವರ್ಷದ ಶುಭ ಕೋರಿದ ಸಿದ್ದರಾಮಯ್ಯ

Team Udayavani, Jan 9, 2025, 7:30 AM IST

Gove-CM-Meet

ಬೆಂಗಳೂರು: ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಮೇಲೆ ನಡೆದ ಪೊಲೀಸ್‌ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಮಧ್ಯಪ್ರವೇಶಿಸಿದ್ದು, ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ.

ಪತ್ರ ಬರೆದು 8 ದಿನ ಕಳೆದರೂ ಮುಖ್ಯಮಂತ್ರಿಗಳ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಮಧ್ಯೆ ಸಿದ್ದರಾಮಯ್ಯ ಬುಧವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಹೊಸ ವರ್ಷದ ಶುಭ ಕೋರಿದ್ದಾರೆ. ಈ ವೇಳೆ ರವಿ ಪ್ರಕರಣದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.

ಸಿಎಂಗೆ ರಾಜ್ಯಪಾಲರ ಪತ್ರ
ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಮೇಲೆ ನಡೆದ ಪೊಲೀಸ್‌ ದೌರ್ಜನ್ಯ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ 2024ರ ಡಿ. 31ರಂದೇ ಪತ್ರ ಬರೆದಿದ್ದ ರಾಜ್ಯಪಾಲರು, ಪ್ರಕರಣವನ್ನು ವೈಯಕ್ತಿಕವಾಗಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದರು. ಇತ್ತೀಚೆಗೆ ಬೆಳಗಾವಿ ಅಧಿವೇಶನದ ಕೊನೆಯಲ್ಲಿ ನಡೆದ ಘಟನೆ ಬಗ್ಗೆ ಮೇಲ್ಮನೆ ಸದಸ್ಯ ಸಿ.ಟಿ. ರವಿ ಅವರ ನಿಯೋಗ ನನ್ನನ್ನು ಭೇಟಿ ಮಾಡಿದ್ದು, ಮನವಿ ಪತ್ರ ಹಾಗೂ ಹಲವು ದಾಖಲೆಗಳನ್ನು ನೀಡಿದ್ದಾರೆ ಎಂದಿದ್ದಾರೆ.

ಬೆಳಗಾವಿ ನಗರ ಆಯುಕ್ತರು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಅವರ ಸಹೋದ್ಯೋಗಿಗಳು ಸಿ.ಟಿ. ರವಿ ಅವರನ್ನು ಅಪಹರಣ ಮಾಡಿ, ಕಬ್ಬಿನ ಗದ್ದೆ, ಮೈದಾನ, ಖಾನಾಪುರ, ಕಿತ್ತೂರು, ಲೋಕಪುರ, ಸಂಕೇಶ್ವರ ಸೇರಿದಂತೆ ರಾತ್ರಿಯಿಡಿ 400 ಕಿ.ಮೀ. ಅಪಾಯಕಾರಿ ಸ್ಥಳಗಳಲ್ಲಿ ಸುತ್ತಾಡಿಸಿದ್ದಾರೆ. ಪೊಲೀಸರ ವಶದಲ್ಲಿ ಇರುವಾಗಲೇ ರಕ್ತ ಬರುವಂತೆ ಗಾಯವಾಗಿದೆ. ಭಯಂಕರ ಹಿಂಸೆ ಕೊಟ್ಟಿದ್ದಾರೆ. ದೈಹಿಕ ಮತ್ತು ಮಾನಸಿಕವಾಗಿ ಹಿಂಸಿಸಿ ಪೊಲೀಸ್‌ ದೌರ್ಜನ್ಯ ಎಸಗಿದ್ದಾಗಿ ರವಿ ಆರೋಪಿಸಿದ್ದಾರೆ.

ಈ ಬಗ್ಗೆ ಖಾನಾಪುರ ಪೊಲೀಸರಿಗೆ ದೂರು ಕೊಟ್ಟರೂ ದಾಖಲಿಸಿಕೊಂಡಿಲ್ಲ ಹಾಗೂ ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೂಕ್ತ ರೀತಿಯಿಂದ ಸ್ಪಂದಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ. ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ನನಗೆ ಮನವಿ ಮಡಿದ್ದಾರೆ. ಅಲ್ಲದೆ ಅವರ ಜೀವಕ್ಕೆ ಹೆಚ್ಚುವರಿ ಭದ್ರತೆ ನೀಡಬೇಕೆಂದೂ ಕೋರಿದ್ದಾರೆ.

ರವಿ ಮತ್ತಿತರರು ನೀಡಿರುವ ದೂರು ಹಾಗೂ ಅದಕ್ಕೆ ಪೂರಕವಾಗಿ ಕೊಟ್ಟಿರುವ ದಾಖಲೆಗಳನ್ನು ಪರಿಶೀಲಿಸಿದಾಗ ಪ್ರಕರಣವು ಬಹಳ ಗಂಭೀರವಾಗಿದೆ. ಹೀಗಾಗಿ ನಿಮ್ಮ ಮಧ್ಯಸ್ಥಿಕೆಯ ಆವಶ್ಯಕತೆ ಕಾಣುತ್ತಿದೆ ಎಂದಿದ್ದಾರಲ್ಲದೆ, ಇದು ಚುನಾಯಿತ ಪ್ರತಿನಿಧಿಯೊಬ್ಬರಿಗೆ ಸಂಬಂಧಿಸಿದ ವಿಷಯವಾಗಿದ್ದು, ವೈಯಕ್ತಿಕವಾಗಿ ಇದರತ್ತ ಗಮನ ಹರಿಸಿ, ಸೂಕ್ತ ಕ್ರಮ ಕೈಗೊಳ್ಳಿ ಎಂದೂ ರಾಜ್ಯಪಾಲರು ಸಲಹೆಯಿತ್ತಿದ್ದಾರೆ.

ರಾಜ್ಯಪಾಲರ ಭೇಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ರಾಜಭವನದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌  ಅವರನ್ನು ಭೇಟಿ ಮಾಡಿ ಹೊಸ ವರ್ಷದ ಶುಭ ಕೋರಿದರು.
ಜ. 1ರಂದು ಐಎಎಸ್‌, ಐಪಿಎಸ್‌, ಐಎಫ್ಎಸ್‌ ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಶುಭಾಶಯ ಸ್ವೀಕರಿಸಿದ್ದ ಸಿಎಂ, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆಡಳಿತಯಂತ್ರ ಚುರುಕುಗೊಳಿಸಿದ್ದರು. ಹೀಗಾಗಿ ರಾಜ್ಯಪಾಲರ ಭೇಟಿ ಸಾಧ್ಯವಾಗಿರಲಿಲ್ಲ. ಮರುದಿನ ರಾಜ್ಯಪಾಲರು ತಮ್ಮ ಮೊಮ್ಮಗನ ವಿವಾಹ ಮಹೋತ್ಸವದ ಹಿನ್ನೆಲೆಯಲ್ಲಿ ತವರಿಗೆ ತೆರಳಿದ್ದರು. ಮಂಗಳವಾರ ರಾತ್ರಿಯಷ್ಟೇ ಮರಳಿದ್ದರಿಂದ ಬುಧವಾರ ಮಧ್ಯಾಹ್ನವೇ ರಾಜ್ಯಪಾಲರನ್ನು ಸಿಎಂ ಭೇಟಿ ಮಾಡಿದರು.

ಸಿ.ಟಿ. ರವಿ ಪ್ರಕರಣದ ಚರ್ಚೆ ಇಲ್ಲ
ಇತ್ತೀಚೆಗಷ್ಟೇ ಸಿ.ಟಿ. ರವಿ ವಿರುದ್ಧ ಪೊಲೀಸರು ನಡೆಸಿದ ದೌರ್ಜನ್ಯದ ಕುರಿತು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದ ರಾಜ್ಯಪಾಲರು, ಸೂಕ್ತ ಕ್ರಮ ವಹಿಸುವಂತೆ ಸಲಹೆ ನೀಡಿದ್ದರು. ರಾಜ್ಯಪಾಲರು ಪತ್ರ ಬರೆದು ಎಂಟು ದಿನವಾದರೂ ಅದಕ್ಕೆ ಸಿಎಂ ಅವರಿಂದ ಯಾವುದೇ ಉತ್ತರ ರವಾನೆಯಾಗಿರಲಿಲ್ಲ. ಹೊಸ ವರ್ಷದ ಶುಭ ಕೋರುವ ನೆಪದಲ್ಲಿ ಗವರ್ನರ್‌ ಭೇಟಿ ವೇಳೆ ಈ ವಿಚಾರ ಚರ್ಚಿಸಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಈ ಬಗ್ಗೆ ಯಾವ ಚರ್ಚೆಯೂ ನಡೆದಿಲ್ಲ ಎಂದು ಮೂಲಗಳು ಹೇಳಿವೆ.

ರಾಜ್ಯಪಾಲರ ಪತ್ರದಲ್ಲಿ ಏನಿದೆ?
– ಪೊಲೀಸರಿಂದ ದೈಹಿಕ ಮತ್ತು ಮಾನಸಿಕ ಹಿಂಸೆ ಎಂದು ರವಿ ಆರೋಪ

– ಈ ಬಗ್ಗೆ ದೂರೂ ನೀಡಿದರೂ ಪ್ರಕರಣ ದಾಖಲಿಸದ ಪೊಲೀಸರು

– ಹಾಗಾಗಿ ಭದ್ರತೆ ನೀಡುವಂತೆ ರವಿ ಅವರಿಂದ ಕೋರಿಕೆ

– ಆರೋಪಗಳು ಗಂಭೀರವಾಗಿವೆ. ಇದು ಚುನಾಯಿತ ಪ್ರತಿನಿಧಿಗೆ ವಿಷಯವಾಗಿದ್ದು ವೈಯಕ್ತಿಕವಾಗಿ ಗಮನ ಹರಿಸಿ

ಟಾಪ್ ನ್ಯೂಸ್

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Mulki: Biker seriously injured after being hit by bus

Mulki: ಬಸ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.