ಯೋಜನೆಗಳ ತ್ವರಿತ ಅನುಷ್ಟಾನಕ್ಕೆ ಕ್ರಮವಹಿಸದ ಅಧಿಕಾರಿಗಳ ವಿರುದ್ಧ ಕ್ರಮ :ಕಾರಜೋಳ

Team Udayavani, Aug 10, 2020, 4:07 PM IST

ಯೋಜನೆಗಳ ತ್ವರಿತ ಅನುಷ್ಟಾನಕ್ಕೆ ಕ್ರಮವಹಿಸದ ಅಧಿಕಾರಿಗಳ ವಿರುದ್ಧ ಕ್ರಮ :ಕಾರಜೋಳ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ತ್ವರಿತ ಅನುಷ್ಟಾನಕ್ಕೆ ಕ್ರಮವಹಿಸದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಖಡಕ್ ಎಚ್ಚರಿಕೆ ನೀಡಿದರು.

ವಿಡಿಯೋ ಸಂವಾದದ ಮೂಲಕ ಬೆಳಗಾವಿ ವಿಭಾಗದ ಸಮಾಜ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ನಿಗಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಇಲಾಖೆಯ ಎಲ್ಲಾ ಕಚೇರಿಗಳು ಕಾರ್ಪೋರೇಟ್ ಕಚೇರಿಗಳಂತೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಇಲಾಖೆಯ ಪ್ರತಿಷ್ಠಿತ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಮುದಾಯದ ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರಕುವಂತೆ ಕ್ರಮೈಗೊಳ್ಳಬೇಕು. ಇಲಾಖೆಯ ಆಶಯ ಸಾಕರಾಗೊಂಡತಾಗುತ್ತದೆ. ಯೋಜನೆಗಳ ತ್ವರಿತ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರಪ್ರವಾಸ ಕೈಗೊಂಡು, ಪ್ರಗತಿ ಪರಿಶೀಲನೆ ನಡೆಸಬೇಕು. ಮುಂಗಡ ಪ್ರವಾಸ ವಿವರವನ್ನು ಇಲಾಖೆಯ ಮುಖ್ಯಸ್ಥರಿಗೆ ಕಳುಹಿಸಿ, ನಂತರ ಅನುಸರಣ ವರದಿಯೊಂದಿಗೆ ದಿನಚರಿಯನ್ನು ಕಳುಹಿಸಬೇಕು ಎಂದು ಅವರು ಸೂಚಿಸಿದರು.

ಪ್ರತಿಯೊಂದು ಗ್ರಾಮಕ್ಕೂ ರುದ್ರಭೂಮಿಯನ್ನು ಒದಗಿಸಬೇಕು. ರುದ್ರಭೂಮಿಗಳಿಲ್ಲಿದ ಗ್ರಾಮಗಳ ಪ್ರಸ್ತಾವನೆಯನ್ನು ಕೂಡಲೇ ಜಿಲ್ಲಾಧಿಕಾರಿಗಳ ಮೂಲಕ ಕಳುಹಿಸಬೇಕು. ರುದ್ರಭೂಮಿಗಳು ಗ್ರಾಮಗಳಿಂದ ಬಹಳ ದೂರ ಇರುವ ಬಗ್ಗೆ ದೂರುಗಳು ಬಂದಿವೆ. ಗ್ರಾಮಗಳಿಗೆ ಸಮೀಪದಲ್ಲಿದ್ದರೆ ಅನುಕೂಲವಾಗುತ್ತದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಕೆ ನೀಡಿದರು.

ಪರಿಶಿಷ್ಟ ಫಲಾನುಭವಿಗಳಿಗೆ ಬ್ಯಾಂಕುಗಳ ಸಾಲನೀಡದಿರುವುದರ ಬಗ್ಗೆ ದೂರುಗಳು ಬಂದಿವೆ. ಸುಲಲಿತವಾಗಿ ಸಾಲ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಇಲಾಖೆಯ ನಿಗಮಗಳ ಮೂಲಕ ಶೇ. 50 ರಷ್ಟು ನೇರಸಾಲಸೌಲಭ್ಯ ನೀಡುವ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಐರಾವತ ಯೋಜನೆಯಡಿ ಉದ್ಯೋಗ ದೊರಕುವಂತಹ, ಜೀವನೋಪಾಯಕ್ಕೆ ಅನುಕೂಲವಾಗುವಂತಹ ಗೂಡ್ಸ್ ವಾಹನ, ಪ್ರಯಾಣಿಕರನ್ನು ಸಾಗಿಸಲು ಅನುಕೂಲವಾಗುವಂತಹ ವಾಹನಗಳ ಪ್ರಸ್ತಾವನೆಗಳಿಗೆ ಮಂಜೂರಾತಿ ನೀಡಬೇಕು. ಶುಲ್ಕ ಮರುಪಾವತಿ ದೊರಕದಿರುವ ಬಗ್ಗೆಯೂ ದೂರುಗಳು ಬಂದಿವೆ. ಎಷ್ಟು ಪ್ರಮಾಣದ ಶುಲ್ಕವನ್ನು ಶಿಕ್ಷಣ ಸಂಸ್ಥೆಗಳಿಗೆ ನೀಡಬೇಕು? ಎಷ್ಟು ಪ್ರಮಾಣದ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಬೇಕು ಎನ್ನುವ ವಿವರವನ್ನು ಸಂಗ್ರಹಿಸಿ, ಕೂಡಲೇ ಶುಲ್ಕ ಮರುಪಾವತಿ ಮಾಡಬೇಕು. ಕಾಲೋನಿ ಅಭಿವೃದ್ಧಿ ಯೋಜನೆಯಡಿ ಕೆಲವೆಡೆ ಪ್ರಗತಿ ಕುಂಠಿತವಾಗಿದೆ. ಸಮರ್ಪಕವಾಗಿ ಅನುಷ್ಠಾನ ಮಾಡದ ಸಂಸ್ಥೆಯಿಂದ ಅನುದಾನ ಹಿಂಪಡೆದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಅಥವಾ ಲೋಕೋಪಯೋಗಿ ಇಲಾಖೆಗೆ ವಹಿಸಬೇಕು. ಪ್ರತಿ ಕಾಲೋನಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮಕೈಗೊಳ್ಳಬೇಕು. ವಸತಿ ನಿಲಯಗಳ ದುರಸ್ಥಿ, ಶಾಲಾ ಕೊಠಡಿಗಳ ದುರಸ್ಥಿ ಸೇರಿದಂತೆ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 500 ಕೋಟಿ ಅನುದಾನವಿದೆ. ಆದರೆ ಖರ್ಚಾಗಿಲ್ಲ. 2600 ಕ್ಕೂ ಹೆಚ್ಚು ಸಮುದಾಯ ಭವನಗಳು ಪೂರ್ಣಗೊಂಡಿವೆ. ಕೆಲವು ಪ್ರಗತಿ ಹಂತದಲ್ಲಿವೆ. ನಿವೇಶನ ಇಲ್ಲದೇ ಮಂಜೂರಾತಿ ನೀಡಿದ ಪ್ರಸ್ತಾವನೆಗಳನ್ನು ರದ್ದುಪಡಿಸಿ, ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು, ಜೀವನೋಪಾಯ ನಡೆಸುತ್ತಿರುವವರ ವಿವರವನ್ನು ಸಂಗ್ರಹಿಸಬೇಕು. ಯೋಜನೆಗಳು ಸದ್ಬಳಕೆಯಾಗುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಫಲಾನುಭವಿಗಳು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಡಿಸಿಎಂ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಜಿ. ಕುಮಾರ ನಾಯಕ್, ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಸಲಹೆಗಾರರಾದ ಶ್ರೀ ಇ. ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಶ್ರೀ ರವಿಕುಮಾರ್ ಸುರಪುರ್, ಅಪರ ನಿರ್ದೇಶಕ ಶ್ರೀ ನಾಗೇಶ್, ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕ ಶ್ರೀ ನಟರಾಜ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮುಖ್ಯ ಪ್ರಧಾನವ್ಯವಸ್ಥಾಪಕ ಶ್ರೀ ಟಿ. ಕುಮಾರ್, ಬೆಳಗಾವಿ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.