ಪಿಎಫ್ ಗೆ ಶೇ.8.5 ಬಡ್ಡಿ ದರ: ವಿತ್ತ ಇಲಾಖೆ ಒಪ್ಪಿಗೆ
5 ಕೋಟಿ ಚಂದಾದಾರರ ಖಾತೆಗೆ ಜಮೆಯಾಗಲಿದೆ ಹಣ
Team Udayavani, Oct 29, 2021, 10:00 PM IST
ನವದೆಹಲಿ: ಭವಿಷ್ಯ ನಿಧಿ(ಪಿಎಫ್) ಚಂದಾದಾರರಿಗೆ ಕೇಂದ್ರ ಸರ್ಕಾರವು “ಬೆಳಕಿನ ಹಬ್ಬ’ದ ಸಿಹಿ ನೀಡಿದೆ.
2020-21ರ ಹಣಕಾಸು ವರ್ಷಕ್ಕೆ ಉದ್ಯೋಗಿಗಳ ಭವಿಷ್ಯ ನಿಧಿಗೆ ಶೇ.8.5ರಷ್ಟು ಬಡ್ಡಿ ನೀಡಲು ಕೇಂದ್ರ ವಿತ್ತ ಸಚಿವಾಲಯ ಒಪ್ಪಿಗೆ ನೀಡಿದೆ.
ಇದರಿಂದಾಗಿ ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್ಒ)ಯ ಸುಮಾರು 5 ಕೋಟಿ ಚಂದಾದಾರರ ಖಾತೆಗೆ ಸದ್ಯದಲ್ಲೇ ಪಿಎಫ್ ಬಡ್ಡಿ ಮೊತ್ತ ಜಮೆ ಆಗಲಿದೆ.
ಈ ವರ್ಷದ ಮಾರ್ಚ್‌ನಲ್ಲಿ ಕೇಂದ್ರ ಕಾರ್ಮಿಕ ಸಚಿವರ ನೇತೃತ್ವದಲ್ಲಿ ನಡೆದ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್(ಸಿಬಿಟಿ) ಸಭೆ ಕಳೆದ ವಿತ್ತ ವರ್ಷದ ಪಿಎಫ್ ಠೇವಣಿ ಮೇಲಿನ ಬಡ್ಡಿ ದರವನ್ನು ಶೇ.8.5ಕ್ಕೆ ನಿಗದಿಪಡಿಸಿತ್ತು. ಅದಕ್ಕೆ ಈಗ ವಿತ್ತ ಸಚಿವಾಲಯ ಸಮ್ಮತಿ ಸೂಚಿಸಿದೆ.
ಇದನ್ನೂ ಓದಿ:ಪುನೀತ್ ಸರ್ ಅತ್ಯಂತ ಸುಲಭವಾಗಿ ತಲುಪಬಹುದಾಗಿದ್ದ ಸೂಪರ್ ಸ್ಟಾರ್: ಮಣಿಕಾಂತ್ ಕದ್ರಿ
ಕಳೆದ ವರ್ಷದ ಮಾರ್ಚ್‌ನಲ್ಲಿ, 2019-20ರ ಪಿಎಫ್ ಬಡ್ಡಿ ದರವನ್ನು 7 ವರ್ಷಗಳಲ್ಲೇ ಕನಿಷ್ಠಕ್ಕೆ ಅಂದರೆ ಶೇ.8.5ಕ್ಕೆ ಇಪಿಎಫ್ಒ ಇಳಿಸಿತ್ತು. ಅದಕ್ಕೂ ಹಿಂದಿನ ವರ್ಷ(2018-19) ಬಡ್ಡಿ ದರ ಶೇ.8.65ರಷ್ಟಿತ್ತು. 2017-18ರಲ್ಲಿ ಶೇ.8.55, 2015-16ರಲ್ಲಿ ಶೇ.8.8ರಷ್ಟು, 2013-14ರಲ್ಲಿ ಶೇ.8.75ರಷ್ಟು ಬಡ್ಡಿ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.