Green Card ನಿಯಮ ಸಡಿಲ: ಭಾರತೀಯರಿಗೆ ಸಂತಸ
Team Udayavani, Jun 18, 2023, 7:25 AM IST
ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಳ್ಳುತ್ತಿರುವ ಸ್ವಲ್ಪ ದಿನಗಳ ಮುನ್ನ ಗ್ರೀನ್ ಕಾರ್ಡ್ ಕುರಿತ ನಿಯಮಗಳನ್ನು ಜೋ ಬೈಡೆನ್ ಸರ್ಕಾರ ಸರಳಗೊಳಿಸಿದೆ. ಗ್ರೀನ್ ಕಾರ್ಡ್‌ಗೆ ಅರ್ಹತಾ ಮಾನದಂಡಗಳ ಕುರಿತು ನೀತಿ ನಿಯಮಗಳನ್ನು ಅಮೆರಿಕ ಸರ್ಕಾರ ಬಿಡುಗಡೆಗೊಳಿಸಿದೆ. ಇದರಿಂದಾಗಿ ಅನೇಕ ವರ್ಷಗಳಿಂದ ಗ್ರೀನ್ ಕಾರ್ಡ್‌ಗಾಗಿ ಕಾಯುತ್ತಿರುವ ಸಾವಿರಾರು ಭಾರತೀಯ ಟೆಕಿಗಳಿಗೆ ಉಪಯೋಗವಾಗಲಿದೆ ಎಂದು ಹೇಳಲಾಗಿದೆ. ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ಗ್ರೀನ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ.
ಉದ್ಯೋಗ ದೃಢೀಕರಣ ದಾಖಲೆ (ಇಎಡಿ)ಗಾಗಿ ಆರಂಭಿಕ ಮತ್ತು ನವೀಕರಣ ಅರ್ಜಿಗಳ ಅರ್ಹತೆಯ ಮಾನದಂಡಗಳ ಕುರಿತು ಅಮೆರಿಕ ಪೌರತ್ವ ಮತ್ತು ನಾಗರಿಕ ಸೇವೆಗಳು(ಯುಎಸ್‌ಸಿಐಎಸ್) ನಿಯಮಗಳನ್ನು ಬಿಡುಗಡೆಗೊಳಿಸಿದೆ. ಪ್ರತಿ ವರ್ಷ ಸುಮಾರು 1,40,000 ಉದ್ಯೋಗಿಗಳಿಗೆ ಗ್ರೀನ್ ಕಾರ್ಡ್ ನೀಡಲು ಅಮೆರಿಕ ವಲಸೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ವಾರ್ಷಿಕವಾಗಿ ಒಂದು ದೇಶದ ಉದ್ಯೋಗಿಗಳಿಗೆ ಶೇ.7ರಷ್ಟು ಗ್ರೀನ್ ಕಾರ್ಡ್‌ಗಳನ್ನು ಮಾತ್ರ ವಿತರಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ಸಂದರ್ಭದಲ್ಲೇ ಈ ಘೋಷಣೆಯು ಅಲ್ಲಿ ನೆಲೆಸಿರುವ ಭಾರತೀಯರಿಗೆ ಸಂತಸವನ್ನುಂಟು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.