Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
ಆಗಸ್ಟ್, ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮಿ ಯೋಜನೆ ಮೊತ್ತ ಶೀಘ್ರದಲ್ಲೇ ಖಾತೆಗೆ ಜಮೆ
Team Udayavani, Sep 19, 2024, 4:11 AM IST
ಮಂಗಳೂರು: ಗ್ಯಾರಂಟಿ ಯೋಜನೆ ಇನ್ನಷ್ಟು ಹೆಚ್ಚು ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ತಿಳಿಸಿದ್ದಾರೆ.
ದ.ಕ. ಜಿ.ಪಂ. ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ರೇಶನ್ ಕಾರ್ಡ್‌ಗಳ ಆಧಾರದಲ್ಲಿ ಫಲಾನುಭವಿಗಳನ್ನು ಗುರುತಿಸಿ ಗುರಿ ನಿಗದಿಪಡಿಸಲಾಗಿತ್ತು. ದ.ಕ. ಜಿಲ್ಲೆಯಲ್ಲಿ ಹೀಗೆ ಗುರುತಿಸಲಾದ ಒಟ್ಟು 4,03,333 ಮಹಿಳೆಯರಲ್ಲಿ ಶೇ.92ರಷ್ಟು ಮಂದಿಗೆ (3,69,292) 2,000 ರೂ. ತಲುಪುತ್ತಿದೆ. ಶೇ.100ರಷ್ಟು ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ದ.ಕ. ಜಿಲ್ಲೆ ಸಹಿತ ಕೆಲವು ಜಿಲ್ಲೆಗಳಲ್ಲಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಗೃಹಲಕ್ಷ್ಮಿ ಯೋಜನೆ ಮೊತ್ತವನ್ನು ಶೀಘ್ರದಲ್ಲೇ ಖಾತೆಗೆ ಜಮೆ ಮಾಡಲಾಗುವುದು. ವಿವಿಧ ರೀತಿಯ ಸಾಲ ಪಡೆದು ಕೊಂಡವರು ಆದಾಯ ತೆರಿಗೆ ಪಾವತಿ ದಾರರು ಎಂದು ಆನ್‌ಲೈನ್‌ನಲ್ಲಿ ನಮೂದಾಗುತ್ತಿದೆ. ಇದರಿಂದ ಅನೇಕರು ಯೋಜನೆಯಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಸರಿಪಡಿಸಲು ಪ್ರಯತ್ನಿಸಲಾಗುವುದು. ಅನ್ನಭಾಗ್ಯ ಯೋಜನೆಯಲ್ಲಿ ಅನೇಕ ಹಿರಿಯ ನಾಗರಿಕರ ಬೆರಳಚ್ಚು ಪಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅಂಥವರ ರೆಟಿನಾ ಸ್ಕ್ಯಾನ್‌ಗೆ ವ್ಯವಸ್ಥೆ ಮಾಡಲಾಗುವುದು ಎಂದರು.
ಕೆಎಸ್‌ಆರ್‌ಟಿಸಿ ಬಸ್ ಬೇಡಿಕೆ
ದ.ಕ.ದಲ್ಲಿ ಸರಕಾರಿ ಬಸ್‌ಗಳ ಕೊರತೆ ಇರುವುದು ಗೊತ್ತಾಗಿದ್ದು, ಹೊಸದಾಗಿ 170 ರೂಟ್‌ಗಳಿಗೆ ಸರಕಾರಿ ಬಸ್ ಓಡಿಸುವ ಪ್ರಸ್ತಾವನೆಯನ್ನು ಸಾರಿಗೆ ಸಚಿವರಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.
ಗ್ಯಾರಂಟಿ ಬೇಕು
ಯೋಜನೆಗಳ ಫಲಾನುಭವಿಗಳೊಂದಿಗೆ ಪುಷ್ಪಾ ಸಂವಾದ ನಡೆಸಿದರು. ಬಂಟ್ವಾಳದ ಗಾಯತ್ರಿ ಅವರು ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ 10 ಕಂತುಗಳ ಹಣವನ್ನು ಕೂಡಿಟ್ಟು ಒಬ್ಬ ಮಗನ ಶಾಲಾ ಶುಲ್ಕವನ್ನು ಭರಿಸಿದ್ದೇನೆ ಎಂದರು. ಮೂಡುಬಿದಿರೆಯ ಲಲಿತಾ ಮಾತನಾಡಿ, ಕೂಲಿ ಕೆಲಸ ಮಾಡಿ ಮೂರು ಮಕ್ಕಳಲ್ಲಿ ಒಬ್ಟಾಕೆಗೆ ಸಾಲ ಮಾಡಿ ಮದುವೆ ಮಾಡಿದ್ದೆ. ಮಗ ಅಂಗವಿಕಲ. ಇನ್ನೊಬ್ಬ ಮಗಳು ಇತ್ತೀಚೆಗೆ ಕೆಲಸಕ್ಕೆ ಸೇರಿದ್ದಾಳೆ. ಮಗನ ಔಷಧಕ್ಕೆ ತಿಂಗಳಿಗೆ 2,000 ರೂ. ಖರ್ಚಾಗುತ್ತಿತ್ತು. ಗೃಹಲಕ್ಷ್ಮಿ ಹಣ ಅದಕ್ಕೆ ಬಳಕೆಯಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಮುಲ್ಲೆ„ ಮುಗಿಲನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಜಿ.ಪಂ. ಸಿಇಒ ಡಾ| ಆನಂದ್, ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.