Guarantee: ಮಹಾರಾಷ್ಟ್ರ ಬಿಜೆಪಿಗರ ಕರ್ನಾಟಕ ಪ್ರವಾಸಕ್ಕೆ ವಿಶೇಷ ವಿಮಾನ: ಡಿ.ಕೆ.ಶಿವಕುಮಾರ್
ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆಹ್ವಾನ: ಡಿಸಿಎಂ
Team Udayavani, Nov 11, 2024, 3:09 AM IST
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ನಾಯಕರ ರಾಜ್ಯ ಪ್ರವಾಸಕ್ಕೆ ವಿಶೇಷ ಬಸ್ ಮತ್ತು ವಿಮಾನ ಯಾನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ ಕಾಂಗ್ರೆಸ್‌ನವರು ಈ ಬಗ್ಗೆ ನಮ್ಮ ಜತೆ ಚರ್ಚೆಯನ್ನೇ ಮಾಡಿಲ್ಲ. ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ನಾಯಕರು ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಹೇಳಿಕೆ ನೀಡುತ್ತಿ ದ್ದಾರೆ. ಈ ಸುಳ್ಳು ಆರೋಪ ಮಾಡುತ್ತಿರುವ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆಹ್ವಾನ ನೀಡುತ್ತಿದ್ದು, ಅವರಿಗಾಗಿ 30 ವಿಶೇಷ ಬಸ್ ಹಾಗೂ ವಿಮಾನ ಪ್ರಯಾಣ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಹೀಗೆ ಭೇಟಿ ನೀಡಿದ ಮಹಾರಾಷ್ಟ್ರ ಬಿಜೆಪಿ ನಾಯಕರಿಗೆ ನಮ್ಮ ರಾಜ್ಯದ 30 ಜಿಲ್ಲೆಗಳಿಗೂ ಭೇಟಿ ನೀಡಲು ವ್ಯವಸ್ಥೆ ಕಲ್ಪಿಸಲಾಗುವುದು. ಈ ಸಂಬಂಧ ನಮ್ಮ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ದೂರವಾಣಿ ಸಂಖ್ಯೆ ಗಳನ್ನು ಒದಗಿಸಿ ಪತ್ರ ಬರೆಯುತ್ತಿದ್ದೇನೆ ಎಂದರು.
ನಾನು ಹಿಟ್ ಆ್ಯಂಡ್ ರನ್ ಮಾಡಲ್ಲ
ಸಚಿವರ ಮೇಲೆ ಹಲ್ಲೆಯಾಗಿದೆಯೇ ಎಂಬ ಪ್ರಶ್ನೆಗೆ, ಈ ರೀತಿ ಏನೂ ಆಗಿಲ್ಲ. ಎಲ್ಲವೂ ಸುಳ್ಳು. ಯಾರೋ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಹೇಳುತ್ತಾರೆ. ಇದಕ್ಕೆಲ್ಲ ಆಧಾರ ಇದೆಯೇ? ಇಂತಹ ಆಧಾರರಹಿತ ಹೇಳಿಕೆ ನೀಡಲು ನಾನು ತಯಾರಿಲ್ಲ. ನಾನು ಹಿಟ್ ಆ್ಯಂಡ್ ರನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.