ವಿವಿಗಳಿಗೆ ಅತಿಥಿ ಉಪನ್ಯಾಸಕರೇ ಆಧಾರ! ಬಹಳಷ್ಟು ವಿವಿಗಳಲ್ಲಿ ಅರ್ಧದಷ್ಟು ಹುದ್ದೆ ಖಾಲಿ
Team Udayavani, Jan 27, 2020, 6:50 AM IST
ಬೆಂಗಳೂರು: ಬೆಂಗಳೂರು, ಮಂಗಳೂರು, ಮೈಸೂರು, ಧಾರವಾಡ ವಿಶ್ವ ವಿದ್ಯಾಲಯ ಸಹಿತ ರಾಜ್ಯದ ಬಹುತೇಕ ವಿವಿಗಳಲ್ಲಿ ಶೇ.50 ಪ್ರಾಧ್ಯಾಪಕರ ಹುದ್ದೆ ಖಾಲಿಯಿದ್ದು, ಅತಿಥಿ ಉಪನ್ಯಾಸಕರೇ ಆಧಾರವಾಗಿದ್ದಾರೆ.
ಬೆಂಗಳೂರು, ಬೆಂಗಳೂರು ಕೇಂದ್ರ, ಬೆಂಗ ಳೂರು ಉತ್ತರ, ಮಂಗಳೂರು, ಮೈಸೂರು, ಕುವೆಂಪು, ಧಾರ ವಾಡ, ತುಮಕೂರು, ದಾವಣಗೆರೆ ವಿಶ್ವವಿದ್ಯಾನಿಲಯ ಹೀಗೆ ರಾಜ್ಯದ ವಿವಿಗಳಲ್ಲಿ ಸರಿಸುಮಾರು ಶೇ.50ರಷ್ಟು ಪ್ರಾಧ್ಯಾಪಕರ ಹುದ್ದೆ ಖಾಲಿ ಇದೆ. ಹೀಗಾಗಿ ಎಲ್ಲ ವಿಭಾಗಗಳಲ್ಲಿಯೂ ಅತಿಥಿ ಉಪನ್ಯಾಸಕರ ಸೇವೆ ಅನಿ ವಾರ್ಯವಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಕೆಲವು ವಿವಿಗಳಲ್ಲಿ ಹತ್ತಾರು ವರ್ಷಗಳಿಂದಲೂ ಹುದ್ದೆಗಳು ಖಾಲಿಯಾಗಿಯೇ ಉಳಿದಿದೆ. ಮಂಗಳೂರು ವಿವಿಯ ಪತ್ರಿಕೋದ್ಯಮ ವಿಭಾಗದಲ್ಲಿ ಒಂದು ಹುದ್ದೆ ಹೊರತುಪಡಿಸಿ ಉಳಿದೆಲ್ಲ ಹುದ್ದೆ ಖಾಲಿಯಾಗಿದೆ. ಇಡೀ ವಿಭಾಗ ಬಹುತೇಕ ಅತಿಥಿ ಉಪನ್ಯಾಸಕರಿಂದಲೇ ನಡೆಯು ತ್ತಿದೆ. ಒಟ್ಟಾರೆಯಾಗಿ ಇಲ್ಲಿ ಸುಮಾರು 120ಕ್ಕೂ ಅಧಿಕ ಬೋಧಕ ಹುದ್ದೆಗಳು ಖಾಲಿಯಿವೆ.
ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ 300ಕ್ಕೂ ಅಧಿಕ ಹುದ್ದೆ ಖಾಲಿ ಇದೆ. ಬೆಂಗಳೂರು ಕೇಂದ್ರ ವಿವಿಯಲ್ಲಿ 40ಕ್ಕೂ ಅಧಿಕ ಹುದ್ದೆ ಖಾಲಿಯಿದೆ. ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ಸುಮಾರು 100 ಬೋಧಕ ಹುದ್ದೆ ಖಾಲಿಯಿದೆ.
ಬೋಧಕೇತರ ಸಿಬಂದಿಸಮಸ್ಯೆ
ಬೋಧಕ ಸಿಬಂದಿ ಮಾತ್ರವಲ್ಲ, ಬೋಧಕೇತರ ಸಿಬಂದಿ ಹುದ್ದೆಯೂ ಖಾಲಿಯಿದೆ. ಬೋಧಕ ಸಿಬಂದಿ ಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಈ ಹುದ್ದೆಗಳು ಖಾಲಿಯಾಗಿವೆ.
ನೇಮಕಕ್ಕೆ ಸರಕಾರದ ಚಿಂತನೆ
ವಿಶ್ವವಿದ್ಯಾನಿಲಯಗಳ ವಿವಿಧ ವಿಭಾಗದಲ್ಲಿ ಪ್ರಾಧ್ಯಾಪಕರ ಹುದ್ದೆ ಖಾಲಿ ಇರುವುದು ರಾಜ್ಯ ಸರಕಾರದ ಗಮನದಲ್ಲೂ ಇದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ನೇರ ನೇಮಕಾತಿ ನಡೆಸಲು ಸರಕಾರ ಈಗಾ ಗಲೇ ಚಿಂತನೆ ನಡೆಸುತ್ತಿದೆ. ಅಲ್ಲದೆ ಸಂದ ರ್ಶನ ಇಲ್ಲದೆ, ನೇರವಾಗಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ನಡೆಸಲು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.
ಗುಣಮಟ್ಟದ ಹೊಡೆತ
ವಿವಿಗಳಲ್ಲಿ ಪ್ರಾಧ್ಯಾಪಕರಿಲ್ಲದೇ ಇರುವುದರಿಂದ ಸ್ನಾತಕೋತ್ತರ
ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಸಾವಿರಾರು ವಿದ್ಯಾರ್ಥಿಗಳ ಕಲಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕೆಲವೊಂದು ವಿಶ್ವವಿದ್ಯಾನಿಲಯ ಗಳಲ್ಲಿ ವಿಭಾಗದ ಮುಖ್ಯಸ್ಥರ ಹುದ್ದೆ ಕೂಡ ಖಾಲಿಯಿದೆ. ಬೇರೆ ವಿಭಾಗದ ಹಿರಿಯ ಪ್ರಾಧ್ಯಾಪಕರು ಪ್ರಭಾರಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ವ್ಯವಸ್ಥೆಯೂ ನಮ್ಮ ವಿಶ್ವವಿದ್ಯಾ ನಿಲಯಗಳಲ್ಲಿವೆ. ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಪ್ರಾಧ್ಯಾಪಕರ ಹುದ್ದೆ ಭರ್ತಿಮಾಡಿಕೊಳ್ಳುವಂತೆ ಹಲವು ವಿದ್ಯಾರ್ಥಿ ಸಂಘಟನೆಗಳು ಈಗಾಗಲೇ ಹತ್ತಾರು ಬಾರಿ ಪ್ರತಿಭಟನೆಯನ್ನು ನಡೆಸಿವೆ.
ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಗೆ ವಿರೋಧ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪ್ರಾಧ್ಯಾಪಕರ ಭರ್ತಿಗೆ ಸರಕಾರ ಚಿಂತನೆ ನಡೆಸು ತ್ತಿದೆ. ಆದರೆ ಇದನ್ನು ಕೆಲವು ವಿವಿಗಳ ಕುಲಪತಿ
ಗಳು ಪರೋಕ್ಷವಾಗಿ ವಿರೋಧಿಸುತ್ತಿದ್ದಾರೆ. ವಿಶ್ವ ವಿದ್ಯಾನಿಲಯ ಅನುದಾನ ಆಯೋಗ(ಯುಜಿಸಿ) ನಿಯಮ ಮತ್ತು ಮಾನದಂಡಗಳಿಗೆ ಅನುಗುಣ ವಾಗಿ ಪ್ರಾಧ್ಯಾಪಕರ ನೇಮಕಾತಿ ನಡೆಯಬೇಕು ಎಂದು ಹೇಳುತ್ತಿದ್ದಾರೆ. ಜತೆಗೆ ಖಾಯಂ ಪ್ರಾಧ್ಯಾಪ ಕರು ಇಲ್ಲದೆ, ಅತಿಥಿ ಉಪನ್ಯಾಸಕ ರಿಂದಲೇ ವಿವಿಯ ಎಲ್ಲ ವಿಭಾಗವನ್ನು ನಡೆಸು ವುದು ಕಷ್ಟಸಾಧ್ಯವಾಗುತ್ತದೆ ಎನ್ನುತ್ತಿದ್ದಾರೆ.
ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ಕುಲಸಚಿವರು ಈಗಾಗಲೇ ಸರ ಕಾರದ ಸಭೆಯಲ್ಲಿ ಭಾಗವಹಿಸಿದ್ದಾರೆ. ಫೆಬ್ರವರಿ, ಮಾರ್ಚ್‌ಗೆ ಭರ್ತಿಯಾಗುವ ಸಾಧ್ಯತೆಯಿದೆ.
-ಪ್ರೊ|ಪಿ.ಎಸ್.ಎಡಪಡಿತ್ತಾಯ ಮಂಗಳೂರು ವಿವಿ ಕುಲಪತಿ
ಬೋಧಕ ಹುದ್ದೆಗಳನ್ನು ಪೂರ್ತಿಯಾಗಿ ಭರ್ತಿ ಮಾಡಿದರೆ ದೊಡ್ಡ ಕ್ರಾಂತಿಯೇ ಆಗಲಿದೆ. ಬಹುತೇಕ ವಿಶ್ವವಿದ್ಯಾಲಯಗಳಲ್ಲಿ ಹಲವು ವರ್ಷಗಳಿಂದ ಸಾಕಷ್ಟು ಬೋಧಕ ಹುದ್ದೆ ಖಾಲಿಯಾಗಿಯೇ ಉಳಿದುಕೊಂಡಿದೆ.
– ಪ್ರೊ.ಕೆ.ಆರ್.ವೇಣುಗೋಪಾಲ್ ಬೆಂಗಳೂರು ವಿವಿ ಕುಲಪತಿ
– ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.