Road Mishap ಗುಂಡ್ಯ: ಬಸ್ಸು- ಟ್ಯಾಂಕರ್ ಢಿಕ್ಕಿ; ಹಲವರಿಗೆ ಗಾಯ
Team Udayavani, Sep 23, 2024, 11:18 PM IST
ಉಪ್ಪಿನಂಗಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ. 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸೋಮವಾರ ಸಂಜೆ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರು ತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ನಡುವೆ ಗುಂಡ್ಯ ಸಮೀಪ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
20ಕ್ಕೂ ಅಧಿಕ ಮಂದಿಗೆ ಗಾಯ
ಟ್ಯಾಂಕರ್ ಹಾಗೂ ಬಸ್ ಚಾಲಕ ಸಹಿತ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಳಿದಂತೆ ಸಣ್ಣಪುಟ್ಟ ಗಾಯಗೊಂಡ ಹಲವು ಪ್ರಯಾಣಿಕರು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.