ಕುಡಿದ ಮತ್ತಿನಲ್ಲಿದ್ದ ರೈಲ್ವೆ ಪೊಲೀಸ್ ಅಧಿಕಾರಿಯ ಪಿಸ್ತೂಲ್ ನಿಂದಲೇ ಹತ್ಯೆಗೈದ ಪತ್ನಿ!
Team Udayavani, Nov 3, 2023, 6:26 PM IST
ಗುರುಗ್ರಾಮ್: ವಾಕ್ಸಮರ ಮಿತಿಮೀರಿ ತಾಳ್ಮೆ ಕಳೆದುಕೊಂಡ ಪತ್ನಿ ಮದ್ಯಪಾನ ಸೇವಿಸಿ ಗಲಾಟೆ ಮಾಡುತ್ತಿದ್ದ ರೈಲ್ವೆ ಪೊಲೀಸ್ ಅಧಿಕಾರಿಯ ಸೊಂಟದಲ್ಲಿದ್ದ ಗನ್ ಕಸಿದುಕೊಂಡು, ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ಗುರುಗ್ರಾಮ್ ನಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:Chikkamagaluru 10 ಸಾವಿರ ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ
ಮೃತ ರೈಲ್ವೆ ಅಧಿಕಾರಿಯನ್ನು ರಾಜ್ಬೀರ್ (49ವರ್ಷ) ಎಂದು ಗುರುತಿಸಲಾಗಿದೆ. ರಾಜ್ಬೀರ್ ಅವರನ್ನು ರೇವಾರಿ ರೈಲ್ವೆ ನಿಲ್ದಾಣದ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಬೀರ್ ಪತ್ನಿ ಆರತಿ, ಪುತ್ರ ಅನು ಅಲಿಯಾಸ್ ಯಶ್ ಜೊತೆ ಗುರುಗ್ರಾಮ್ ನ ಶಿಕೋಹ್ ಪುರ್ ಗ್ರಾಮದಲ್ಲಿ ವಾಸವಾಗಿದ್ದರು.
ಗುರುವಾರ ರಾಜ್ಬೀರ್ ಮತ್ತು ಪತ್ನಿ ಆರತಿ ನಡುವೆ ಜಗಳ ನಡೆದು ತಾರಕಕ್ಕೇರಿತ್ತು. ಈ ಸಂದರ್ಭದಲ್ಲಿ ರಾಜ್ಬೀರ್ ಪತ್ನಿಗೆ ಗುಂಡು ಹಾರಿಸಿದ್ದು, ಪತ್ನಿ ಗಾಯಗೊಂಡಿದ್ದಳು. ಇದರಿಂದ ಆಕ್ರೋಶಗೊಂಡ ಪತ್ನಿ, ಪತಿಯ ಸೊಂಟದಲ್ಲಿದ್ದ ಪಿಸ್ತೂಲ್ ಅನ್ನು ಕಿತ್ತುಕೊಂಡು ಮೂರು ಬಾರಿ ರಾಜ್ಬೀರ್ ಗೆ ಗುಂಡು ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಘಟನೆಗೆ ಸಂಬಂಧಪಟ್ಟಂತೆ ಪತ್ನಿ ಮತ್ತು ಮಗನ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.