ಗುರುಮಠಕಲ್ ಪುರಸಭೆ ಜೆಡಿಎಸ್ ತೆಕ್ಕೆಗೆ! 12 ಸದಸ್ಯ ಬಲ ಹೊಂದಿದ್ದರೂ ಕೈಗೆ ಮುಖಭಂಗ
Team Udayavani, Nov 2, 2020, 4:52 PM IST
ಯಾದಗಿರಿ : ತೀವ್ರ ಕುತೂಹಲ ಕೆರಳಿಸಿದ್ದ ಜಿಲ್ಲೆಯ ಗುರುಮಠಕಲ್ ಪುರಸಭೆ ಅಧ್ಯಕ್ಷ – ಉಪಾಧ್ಯಕ್ಷ ಆಯ್ಕೆಯಲ್ಲಿ ಕೊನೆಗೂ ನಿರೀಕ್ಷೆಯಂತೆ ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾಗಿ ಗದ್ದುಗೆ ಹಿಡಿಯುವಲ್ಲಿ ಸಫಲವಾಗಿದೆ.
ಚುನಾವಣಾಧಿಕಾರಿ ಸಂಗಮೇಶ ಜಿಡಗೆ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದಂತೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ಪಾಪಣ್ಣ ಮನ್ನೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಖಾಜಾ ಮೈನೋದ್ಧೀನ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಅಭ್ಯರ್ಥಿಯಿಲ್ಲದ್ದರಿಂದ ಜೆಡಿಎಸ್ ಅಭ್ಯರ್ಥಿ ಭೀಮಮ್ಮ ದಂಡು ಉಮೇದುವಾರಿಕೆ ಸಲ್ಲಿಸಿದ್ದರು.
ಚುನಾವಣೆ ಪ್ರಕ್ರಿಯೆ ಆರಂಭಿಸಿದ ಅಧಿಕಾರಿಗಳು ಮತಕ್ಕೆ ಕರೆದರು, ಜೆಡಿಎಸ್ ಅಭ್ಯರ್ಥಿ ಪರವಾಗಿ ಪಕ್ಷದ ೮ ಸದಸ್ಯರು, ಬಿಜೆಪಿಯ ಇಬ್ಬರು, ಒಬ್ಬ ಪಕ್ಷೇತರ ಹಾಗೂ ಶಾಸಕರು ಕೈ ಎತ್ತುವ ಮೂಲಕ ಒಟ್ಟು 12 ಜನರು ಮತ ಚಲಾಯಿಸಿದರು.
ಕಾಂಗ್ರೆಸ್ ಅಭ್ಯರ್ಥಿಯ ಪರ ಪಕ್ಷದ 9 ಜನ ಸದಸ್ಯರು ಮತ ಚಲಾವಣೆ ಮಾಡಿದ್ದು, ಪಕ್ಷದ ಮೂವರು ಸದಸ್ಯರು ಗೈರಾಗಿದ್ದರು.
ಜೆಡಿಎಸ್ ಅಭ್ಯರ್ಥಿ ಪಾಪಣ್ಣ ಮನ್ನೆ ಬಹುಮತ ಹೊಂದಿದ್ದನ್ನು ಖಚಿತ ಪಡಿಸಿಕೊಂಡ ಚುನಾವಣಾಧಿಕಾರಿ ಸಂಗಮೇಶ ಜಿಡಗೆ ಅಧ್ಯಕ್ಷರಾಗಿ ಪಾಪಣ್ಣ ಮನ್ನೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಭೀಮಮ್ಮ ಮುಕುಡಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧ ಆಯ್ಕೆಯಾಗಿರುವುದಾಗಿ ಘೋಷಿಸಿದರು.
ಇದನ್ನೂ ಓದಿ:ಹೈಡ್ರಾಮಾಗಳಿಗೆ ಅಂತ್ಯ: ಗಂಗಾವತಿ ನಗರಸಭೆ ಕೊನೆಗೂ ‘ಕೈ’ ವಶಕ್ಕೆ
ಅಸ್ತಿತ್ವ ಕಳೆದುಕೊಳ್ಳುತ್ತಿದೆ ಕಾಂಗ್ರೆಸ್…
ಇಲ್ಲಿನ ಪುರಸಭೆಯ 23 ಜನ ಸದಸ್ಯರಲ್ಲಿ 12 ಸದಸ್ಯರ ಬಲವನ್ನು ಹೊಂದಿದ್ದ ಕಾಂಗ್ರೆಸ್ ಮೀಸಲಾತಿ ಪ್ರಕಟಗೊಂಡಾಗ ಅಧಾಕಾರ ತಮ್ಮಿಂದ ಎಲ್ಲೂ ಹೋಗಲ್ಲ, ಗಾದಿಗೇರುವ ಬಹುಮತವಿದೆ ಎಂದು ಬೀಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ಬಿಸಿಎ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಮಹಿಳೆ ಮೀಸಲಾತಿ ನಿಗದಿಯಾಗುತ್ತಿದ್ದಂತೆ ಕೈ ಲೆಕ್ಕಾಚಾರ ಉಲ್ಟಾ ಹೊಡಿದು ಉಪಾಧ್ಯಕ್ಷ ಮೀಸಲಾತಿಯ ಅಭ್ಯರ್ಥಿಯಿಲ್ಲದೇ ಅಧ್ಯಕ್ಷ ಸ್ಥಾನವನ್ನು ಪಡೆಯಲೆಂಬ ಉದ್ದೇಶದಿಂದ ತಮ್ಮ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು.
ಆದಾವುದನ್ನೂ ಲೆಕ್ಕಿಸದೆ ಮೂವರು ಕೈ ಸದಸ್ಯರು ಚುನಾವಣೆಗೆ ಗೈರಾಗಿದ್ದು ತೀವ್ರ ಮುಖಭಂಗ ಎದುರಿಸುವಂತಾಗಿದೆ.
ಇನ್ನೊಂದು ಕಾಂಗ್ರೆಸ್ ದುರಂತವೆಂದರೇ ಸ್ವತಾ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಗೌಡ ಹುಲಕಲ್ ಅವರಿಗೆ ತನ್ನ ಪಕ್ಷದ ಮೂವರು ಸದಸ್ಯರು ಸಂಪರ್ಕಕ್ಕೆ ಸಿಕ್ಕರೋ ಇಲ್ಲವೊ ಎನ್ನುವುದು ಐಡಿಯಾನೇ ಇಲ್ವಂತೆ…
2018 ರ ವಿಧಾನಸಭಾ ಚುನಾವಣೆಯಲ್ಲಿ ಕೈ ಭದ್ರಕೋಟೆಯನ್ನು ಜೆಡಿಎಸ್ ಛಿದ್ರಗೊಳಿಸಿ ಶಾಸಕ ನಾಗನಗೌಡ ಕಂದಕೂರ ಅವರು ಗೆಲುವು ಸಾಧಿಸಿದಾಗಿನಿಂದ ಕ್ಷೇತ್ರದಲ್ಲಿ ನಾಯಕತ್ವ ಕೊರತೆಯಿಂದ ಕಾಂಗ್ರೆಸ್ ಅವನತಿ ಆರಂಭವಾಗಿದೆ ಎಂದು ರಾಜಕೀಯವಾಗಿ ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.