ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ.. ಟ್ವೀಟ್ ನಲ್ಲಿ ಕುಮಾರಸ್ವಾಮಿ ಎಚ್ಚರಿಕೆ
Team Udayavani, Jan 25, 2020, 12:31 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ. ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರಿದ್ದಾರೆ. ನನ್ನನ್ನು ಕೊಲ್ಲಬಹುದು ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ ಎಂದು ಟ್ವೀಟ್ ಮಾಡಿದ್ದಾರೆ.
ಸರಣಿ ಟ್ವೀಟ್ ಗಳನ್ನು ಮಾಡಿರುವ ಎಚ್ ಡಿ ಕುಮಾರಸ್ವಾಮಿಯವರು ಬಿಜೆಪಿಯ ವಿರುದ್ಧ ಟೀಕೆ ಮಾಡಿದ್ದಾರೆ. ನಿಮ್ಮ ಜೀನ್ ಗಳು ಪಾಕಿಸ್ತಾನದ ಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದಿದ್ದಾರೆ.
ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ?
1/6— H D Kumaraswamy (@hd_kumaraswamy) January 25, 2020
ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ.
2/6— H D Kumaraswamy (@hd_kumaraswamy) January 25, 2020
ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ.
3/6— H D Kumaraswamy (@hd_kumaraswamy) January 25, 2020
ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ.
4/6— H D Kumaraswamy (@hd_kumaraswamy) January 25, 2020
“ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು.
5/6— H D Kumaraswamy (@hd_kumaraswamy) January 25, 2020
ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ…
ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ ಜೀನ್ ಈ ಮಣ್ಣಿನಲ್ಲಿದೆ.
ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು.
6/6— H D Kumaraswamy (@hd_kumaraswamy) January 25, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.