ಕೋವಿಡ್-19 ಯುದ್ಧದ ನಡುವೆ ನಮ್ಮ ರೈತರ ಕೈ ಹಿಡಿಯೋಣ: ಎಚ್ ಡಿ ಕುಮಾರಸ್ವಾಮಿ
Team Udayavani, Mar 30, 2020, 3:03 PM IST
ಬೆಂಗಳೂರು: ಕೋವಿಡ್-19 ವೈರಸ್ ನಮ್ಮ ಮುಂದಿರುವ ಅಗೋಚರ ಯುದ್ಧ. ಇದರ ವಿರುದ್ಧ ಹೋರಾಡುವುದು ಇಂದಿನ ಅಗತ್ಯ. ಆದರೆ ಯುದ್ಧ ನಡೆಯುವಾಗ ನಮ್ಮವರನ್ನು ರಕ್ಷಣೆ ಮಾಡಿಕೊಳ್ಳಬೇಕಿರುವುದೂ ನಮ್ಮ ಕರ್ತವ್ಯ. ಈ ಯುದ್ಧದ ನಡುವೆಯೂ ರೈತರನ್ನು ರಕ್ಷಿಸೋಣ. ಸಾರ್ವಜನಿಕರಿಗೆ ಅಗತ್ಯಗಳನ್ನು ಪೂರೈಸೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಈ ಸಂಕಷ್ಟದ ಸಮಯದಲ್ಲಿ ರೈತರು ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಾಡಿರುವ ಸರಣಿ ಟ್ವೀಟ್ ಗಳು ಇಲ್ಲಿದೆ.
ಕೊರೊನಾ ವೈರಸ್ ನಮ್ಮ ಮುಂದಿರುವ ಅಗೋಚರ ಯುದ್ಧ. ಇದರ ವಿರುದ್ಧ ಹೋರಾಡುವುದು ಇಂದಿನ ತುರ್ತು. ಆದರೆ ಯುದ್ಧ ನಡೆಯುವಾಗ ನಮ್ಮವರನ್ನು ರಕ್ಷಣೆ ಮಾಡಿಕೊಳ್ಳಬೇಕಿರುವುದೂ ನಮ್ಮ ಕರ್ತವ್ಯ. ಈ ಯುದ್ಧದ ನಡುವೆಯೂ ರೈತರನ್ನು ರಕ್ಷಿಸೋಣ. ಸಾರ್ವಜನಿಕರಿಗೆ ಅಗತ್ಯಗಳನ್ನು ಪೂರೈಸೋಣ.
(1/6) pic.twitter.com/RpgffEkUzm— H D Kumaraswamy (@hd_kumaraswamy) March 30, 2020
ಮಂಡ್ಯದಲ್ಲಿ ಸಪೋಟವನ್ನು ರಸ್ತೆಗೆ ಸುರಿದ, ಚಿಕ್ಕಬಳ್ಳಾಪುರದಲ್ಲಿ ದ್ರಾಕ್ಷಿಯನ್ನು ತಿಪ್ಪೆಗೆ ಹಾಕಿದ, ಶಿವಮೊಗ್ಗದಲ್ಲಿ ಹೈನುಗಾರರಿಂದ ಹಾಲು ನಿಲ್ಲಿಸಿದ, ಕೋಲಾರದಲ್ಲಿ ಟೊಮೆಟೊ ನಾಶ ಮಾಡಿದ ಘಟನೆಗಳು ರೈತರು ಎದುರಿಸುತ್ತಿರುವ ದುಸ್ಥಿತಿಯನ್ನು ವಿವರಿಸುತ್ತಿದೆ.ಇನ್ನು ಕೆಲವೇ ದಿನಗಳಲ್ಲಿ ಇದು ವಿಕೋಪಗೊಳ್ಳುವ ಆತಂಕ ನನ್ನನ್ನು ಕಾಡುತ್ತಿದೆ
2/6— H D Kumaraswamy (@hd_kumaraswamy) March 30, 2020
ಕೊರೊನಾ ವೈರಸ್ ರೋಗ ತಡೆಗೆ ಗ್ರಾಮಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಸ್ವಯಂಸೇವಕರು, ಸಂಘಸಂಸ್ಥೆಗಳು, ಅಧಿಕಾರಿಗಳ ಸಮಿತಿ ರಚನೆಯಾಗಬೇಕು ಎಂಬುದು ನನ್ನ ಸಲಹೆ. ಇದೇ ರೀತಿ ಹಾಪ್ ಕಾಮ್ಸ್, ಕೆಎಂಎಫ್ ಸೇರಿದಂತೆ ಸ್ವಯಂ ಸೇವಕರ ಗುಂಪುಗಳನ್ನು ಬಳಸಿಕೊಂಡು ರೈತರಿಂದ ಉತ್ಪನ್ನಗಳನ್ನು ಸರ್ಕಾರವೇ ಮುಂದೆ ನಿಂತು ಖರೀದಿಸಲಿ. ನಂತರ ಮಾರಾಟ ಮಾಡಲಿ.
(4/6)— H D Kumaraswamy (@hd_kumaraswamy) March 30, 2020
ಸರ್ಕಾರ ರೈತರ ಉತ್ಪನ್ನ ಖರೀದಿಗೆ ಶೀಘ್ರವೇ ವ್ಯವಸ್ಥೆ ಮಾಡುವ ಅನಿವಾರ್ಯತೆ ಎದುರಾಗಿದೆ. ಇಲ್ಲದೇ ಹೋದರೆ ಕೃಷಿ ವಲಯ ತೊಂದರೆಗೀಡಾಗುತ್ತದೆ. ಅದರ ಪರಿಣಾಮಗಳು ಭೀಕರ. ಇದು ಕುಟುಂಬಗಳನ್ನು ಆಪೋಷನ ತೆಗೆದುಕೊಳ್ಳುವ ಜೊತೆಗೆ, ಆರ್ಥಿಕತೆಗೆ ತೀವ್ರ ಪೆಟ್ಟು ನೀಡುತ್ತದೆ. ಅದನ್ನು ನೆನೆದು ನನಗಂತೂ ಆತಂಕವಾಗಿದೆ.
(3/6)— H D Kumaraswamy (@hd_kumaraswamy) March 30, 2020
ರೈತರಿಂದ ನೇರವಾಗಿ ಖರೀದಿಸಿದ ಉತ್ಪನ್ನಗಳನ್ನು, ನಗರ ವಾರ್ಡ್ ಮಟ್ಟದಲ್ಲಿ ವಿತರಣೆ ಮಾಡಲು ವ್ಯವಸ್ಥೆ ಮಾಡಬೇಕು. ಮಾಲ್ ಗಳನ್ನೂ ಮೀರಿ ಸಾರ್ವಜನಿಕ ಅಗತ್ಯಗಳನ್ನು ಪೂರೈಸುತ್ತಿರುವುದು ಸಣ್ಣ ಪುಟ್ಟ ಅಂಗಡಿಗಳು.ರೈತರ ಉತ್ಪನ್ನಗಳನ್ನು ನೇರವಾಗಿ ಇಂತಹ ಅಂಗಡಿಗಳಿಗೆ ತಲುಪಿಸಲು ವ್ಯವಸ್ಥೆಯೊಂದನ್ನು ಸರ್ಕಾರ ಕೂಡಲೇ ಸೃಷ್ಟಿ ಮಾಡಬೇಕು.
(5/6)— H D Kumaraswamy (@hd_kumaraswamy) March 30, 2020
ಹಲವು ರೈತರು, ಕೃಷಿ ಉತ್ಪನ್ನ ಮಾರಾಟಗಾರರು ಈಗಾಗಲೆ ತಮ್ಮ ಪರಿಧಿಯಲ್ಲೇ ಸಾಗಾಟ, ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಆದರೆ ಉತ್ಪನ್ನ ಸಾಗಿಸುವಾಗ ತಡೆಯುವ, ಅವರಿಂದ ದುಡ್ಡು ಕೇಳುತ್ತಿರುವ ಕುರಿತು ನನಗೆ ಮಾಹಿತಿ ಇದೆ. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಸರ್ಕಾರ ನಿರ್ಬಂಧ ಹೇರಬಾರದು. ಇದು ರೈತರ ಬದುಕಿನ, ಜನರ ಆಹಾರದ ಪ್ರಶ್ನೆ.
(6/6)— H D Kumaraswamy (@hd_kumaraswamy) March 30, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.