ಪೊಲೀಸರಿಗೆ, ವೈದ್ಯರಿಗೆ ಸಲವತ್ತು ಕೊಡಿ; ಸಾವಿರ ವೆಂಟಿಲೇಟರ್, 10 ಲಕ್ಷ ಮಾಸ್ಕ್ ಎಲ್ಲಿ: HDK
Team Udayavani, Mar 28, 2020, 12:07 PM IST
ಬೆಂಗಳೂರು: ಕೋವಿಡ್-19 ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶ್ನಿಸಿ ಮಾಜಿಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿದ್ದಾರೆ. ಆದರೂ ಕರ್ನಾಟಕ ಕೋವಿಡ್-19 ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಸೋಂಕು ಶರವೇಗದಲ್ಲಿ ವ್ಯಾಪಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಒಂದು ಸಾವಿರ ವೆಂಟಿಲೇಟರ್, 10 ಲಕ್ಷ ಮಾಸ್ಕ್ ಗಳು, ಐದು ಲಕ್ಷ ತ್ರೀ ಲೇಯರ್ ಮಾಸ್ಕ್ ಖರೀದಿಸುವುದಾಗಿ ಹೇಳಿ ಸರಕಾರ ಒಂದು ವಾರವಾಯ್ತು. ಕ್ಷಿಪ್ರಗತಿಯಲ್ಗಿ ವ್ಯಾಪಿಸುತ್ತಿರುವ ಸೋಂಕಿನ ವಿರುದ್ಧ ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ? ಎಂದು ಪ್ರಶ್ನಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿಯವರ ಸರಣಿ ಟ್ವೀಟ್ ಗಳು ಇಲ್ಲಿವೆ.
ಕೊರೊನಾ ವೈರಸ್ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿರುವುದರ ನಡುವೆಯೇ ಕರ್ನಾಟಕ ಕೊರೊನಾ ಸೋಂಕು ಪೀಡಿತರ ಪಟ್ಟಿಯಲ್ಲಿ ದೇಶದಲ್ಲೇ 3ನೇ ಸ್ಥಾನಕ್ಕೇರಿದೆ. ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಸರ್ಕಾರದ ‘ಕಟ್ಟುನಿಟ್ಟಿನ ಕ್ರಮ’ಗಳನ್ನು ಪ್ರಶ್ನಿಸುವಂತೆ ಮಾಡಿದೆ.
(1/6)— H D Kumaraswamy (@hd_kumaraswamy) March 28, 2020
ಪ್ರಧಾನಿ @narendramodi ಹೊರಡಿಸಿದ ಲಾಕ್ಡೌನ್ ಹೊರತುಪಡಿಸಿ,ವೈರಸ್ ತಡೆಗೆ ಸರ್ಕಾರ ಕ್ರಮಗಳನ್ನು ಕೈಗೊಂಡಿರುವುದು ನಿಜವೇ ಆಗಿದ್ದರೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸವಲತ್ತು, ರಕ್ಷಣಾ ಕವಚಗಳನ್ನು ಪೂರೈಸಿದ್ದರೆ, ಚಿಕಿತ್ಸೆಗೆ ವೈದ್ಯಕೀಯ ಸಲಕರಣೆಗಳನ್ನು ನೀಡಿದ್ದರೆ ಸೋಂಕು ಶರವೇಗದಲ್ಲಿ ವ್ಯಾಪಿಸುತ್ತಿರುವುದೇಕೆ?
(2/6)— H D Kumaraswamy (@hd_kumaraswamy) March 28, 2020
ಒಂದು ಸಾವಿರ ವೆಂಟಿಲೇಟರ್, 10 ಲಕ್ಷ #N95masks, 5ಲಕ್ಷ ಕಿಟ್, 15ಲಕ್ಷ ತ್ರೀ ಲೇಯರ್ ಮಾಸ್ಕ್ ಖರೀಸುವುದಾಗಿ ಸರ್ಕಾರ ಹೇಳಿ ವಾರವಾಯ್ತು. ಒಂದು ವಾರದಲ್ಲಿ ಸೋಂಕು ತೀವ್ರಗತಿಯಲ್ಲಿ ಏರಿದೆ. ಆದರೆ ಸರ್ಕಾರ ಹೇಳಿರುವುದೆಲ್ಲವೂ ಕಾರ್ಯಗತವಾಗಿದೆಯೇ? ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಸೋಂಕಿನ ವಿರುದ್ಧ ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ?
— H D Kumaraswamy (@hd_kumaraswamy) March 28, 2020
ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಂತೆ ನಾನು ಕೋರಿದ್ದೆ.ಆದರೆ, ರಕ್ಷಣಾ ಕವಚವನ್ನೇ ನೀಡದಿರುವ ಬಗ್ಗೆ ಮಾಹಿತಿ ಇದೆ. ಜನ ರಸ್ತೆಗಳಿಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ.ಅವರಿಗೂ ಸೂಕ್ತ ರಕ್ಷಣಾ ಕವಚಗಳಿಲ್ಲ.ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಂತೆ ಪೊಲೀಸರಿಗೂ ರಕ್ಷಣಾ ಕವಚಗಳನ್ನು ವಿತರಿಸಬೇಕು.
(4/6)— H D Kumaraswamy (@hd_kumaraswamy) March 28, 2020
ಕೊರೊನಾ ವೈರಸ್ ಕುರಿತ ಸುದ್ದಿಗಳನ್ನು ಮಾಧ್ಯಮಗಳಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳಿವೆ ಎಂದು ನಾನು ಮೊದಲೇ ಹೇಳಿದ್ದೆ. ಕೊರೊನಾ ನಿಯಂತ್ರಣದ ಜವಾಬ್ದಾರಿ ಒಬ್ಬ ಸಚಿವರ ಹೆಗಲಿಗೆ ವಹಿಸುವ ಮೂಲಕ ಆ ಮುಸುಕಿನ ಗುದ್ದಾಟ ಬಯಲಾಗಿದೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ.
(5/6)— H D Kumaraswamy (@hd_kumaraswamy) March 28, 2020
ಸರ್ಕಾರ ಮೊದಲು ಹೆಚ್ಚಿನ ಪ್ರಮಾಣದಲ್ಲಿ ವೈದ್ಯಕೀಯ ಪರಿಕರಗಳನ್ನು ಹೊಂದಿಸಿಕೊಳ್ಳಬೇಕು.ವೈದ್ಯರಿಗೆ ಸೂಕ್ತ ಸವಲತ್ತುಗಳನ್ನು ನೀಡಬೇಕು.ಘೋಷಣೆಗಳು ಹೇಳಿಕೆಗಳು ಅಷ್ಟಕ್ಕೆ ಸೀಮಿತವಾಗಬಾರದು,ಕಾರ್ಯರೂಪಕ್ಕೆ ಬರಬೇಕು ಇಲ್ಲವಾದರೆ ಜಗತ್ತನ್ನೇ ಆವರಿಸಿರುವ ಮಹಾಮಾರಿ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ “ಮರಣ ಮೃದಂಗ” ಬಾರಿಸುವ ಕಾಲ ದೂರವಿಲ್ಲ
(6/6)— H D Kumaraswamy (@hd_kumaraswamy) March 28, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.