ಕೊರೊನಾ ವೈರಸ್ ವಿರುದ್ಧ ಕ್ರಮವೆಂದರೆ ಪ್ರಚಾರ ಪಡೆಯುವ ಪ್ರಹಸನವಾಗಬಾರದು: ಕುಮಾರಸ್ವಾಮಿ
Team Udayavani, Mar 15, 2020, 1:30 PM IST
ಬೆಂಗಳೂರು: ಕೊರೊನಾ ವೈರಸ್ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಕುಮಾರಸ್ವಾಮಿ, ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಒಂದು ವೇಳೆ ಹಾಗೆ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ ಎಂದು ಸರಕಾರವನ್ನು ಎಚ್ಚರಿಸಿದ್ಧಾರೆ.
ಕೊರೊನಾ ಶಂಕಿತರಿಗೆ ಆಸ್ಪತ್ರೆಯಲ್ಲಿ ಇತರ ರೋಗಿಗಳ ನಡುವೆ ಚಿಕಿತ್ಸೆ ನೀಡುವ ಬದಲು ಖಾಲಿ ಇರುವ ಸರಕಾರಿ ಕಟ್ಟಡಗಳಲ್ಲಿ ಚಿಕಿತ್ಸೆ ನೀಡಬಹುದು. ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ ಎಂದಿದ್ಧಾರೆ.
ಎಚ್ ಡಿ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಗಳು ಇಲ್ಲಿವೆ.
ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ.ಆದರೆ ಇತರ ರೋಗಿಗಳ ಜೊತೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು.
1/4— H D Kumaraswamy (@hd_kumaraswamy) March 15, 2020
ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ Quarantine ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ Quarantine ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು.
2/4— H D Kumaraswamy (@hd_kumaraswamy) March 15, 2020
#coronavirus ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ.
3/4— H D Kumaraswamy (@hd_kumaraswamy) March 15, 2020
ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ. #CoronaPolitics
4/4— H D Kumaraswamy (@hd_kumaraswamy) March 15, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
Debt Reduction: ನಬಾರ್ಡ್ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
MUST WATCH
ಹೊಸ ಸೇರ್ಪಡೆ
Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು
BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.