ಸುರೇಶ್ ಕುಮಾರ್, ಪ್ರಹ್ಲಾದ್ ಜೋಶಿ ವಿರುದ್ಧ ಕುಮಾರಸ್ವಾಮಿ ಸರಣಿ ಟ್ವೀಟ್ ದಾಳಿ
Team Udayavani, Jan 22, 2020, 2:26 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಇಂದು ಸಾಲು ಸಾಲು ಟ್ವೀಟ್ ಗಳ ಮೂಲಕ ಬಿಜಿಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಮುಖ್ಯವಾಗಿ ತಮ್ಮ ಮೇಲೆ ಟೀಕೆ ಮಾಡಿದ ಸಚಿವ ಸುರೇಶ್ ಕುಮಾರ್ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ ಎಚ್ ಡಿ ಕುಮಾರಸ್ವಾ,ಮಿ ಟ್ವಿಟ್ಟರ್ ಮೂಲಕ ಆರೋಪಗಳ ಸುರಿಮಳೆಗೈದಿದ್ದಾರೆ.
ಸಚಿವ ಸುರೇಶ್ ಕುಮಾರ್ ಅವರು, “ಕುಮಾರಸ್ವಾಮಿಯವರೇ, ನೆರೆ ಬಂದಾಗ ಸರಕಾರದ ನೆರವಿಲ್ಲದೆ ಪರಿಹಾರ ಕಾರ್ಯ ಮಾಡುವುದು, ಕೆರೆ-ಕಲ್ಯಾಣಿ ಸ್ವಚ್ಛತೆ ಮಾಡಿ ಪರಿಸರದ ಕುರಿತು ಅರಿವು ಮೂಡಿಸುವುದು, ಕುಗ್ರಾಮಗಳಲ್ಲಿ ಕನಿಷ್ಟ ಸೌಕರ್ಯ ಒದಗಿಸುವುದು. ಇವು ದೇಶಭಕ್ತಿ ಕಾರ್ಯಗಳೆಂದಾದರೆ ಚಕ್ರವರ್ತಿ ಸೂಲಿಬೆಲೆ ನಂ ೧ ದೇಶಭಕ್ತ” ಎಂಬ ಟ್ವೀಟ್ ಮಾಡಿದ್ದರು. ಇದಕ್ಕೆ ಉತ್ತರಿಸುತ್ತಾ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮಾಡಿದ್ದಾರೆ.
ಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ ಸದಾನಂದಗೌಡರಿಂದಲೇ ದೇಶದ್ರೋಹಿ ಎನಿಸಿಕೊಂಡವ ಸುರೇಶ್ ಕುಮಾರ್ ಅವರಿಗೆ ದೇಶಪ್ರೇಮಿ!
1/8 pic.twitter.com/myjlFXnPMY— H D Kumaraswamy (@hd_kumaraswamy) January 22, 2020
ದೇಶಪ್ರೇಮಕ್ಕೆ Rank ಕೊಡುತ್ತಾರೆ ಸುರೇಶ್ ಕುಮಾರ್. ತಾಯಿ ಮೇಲಿನ ಪ್ರೀತಿಗೆ Rank ನೀಡಲು ಸಾಧ್ಯವೇ? ರಾಜಕೀಯಕ್ಕೆ ದೇಶಪ್ರೇಮವನ್ನು ಬಳಸಿಕೊಂಡ ನಿಮ್ಮ ಬೌದ್ಧಿಕ ದಿವಾಳಿತನ ನಿಜಕ್ಕೂ ನನ್ನಲ್ಲಿ ಬೇಸರ ತರಿಸಿದೆ. ಸಜ್ಜನರಾದ ನಿಮ್ಮ ಮೇಲಿನ ನನ್ನ ಅಭಿಮಾನಕ್ಕೇ ಕುಂದುಂಟಾಗಿದೆ… ದೇಶಪ್ರೇಮದ ವಿಚಾರದಲ್ಲಿ Rank ಕೊಟ್ಟರೆ ‘ಆತ’ ಕೊನೇ Rank.
2/8— H D Kumaraswamy (@hd_kumaraswamy) January 22, 2020
ಸಾಲುಮರಗಳನ್ನು ಬೆಳೆಸಿದ ತಿಮ್ಮಕ್ಕ ನಿಮಗೆ ದೇಶಪ್ರೇಮಿ ಎನಿಸರು, ಕೆರೆ ಕಟ್ಟಿದ ಕಾಮೇಗೌಡ ನಿಮಗೆ ದೇಶಪ್ರೇಮಿಯಾಗರು. ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುವ, ಕೋಮು ದಳ್ಳುರಿ ಬಿತ್ತುವವರಲ್ಲಿ ದೇಶಪ್ರೇಮ ಕಂಡ ನೀವು ನಿಮ್ಮಲ್ಲಿರುವ ಮಾನಸಿಕ ಭ್ರಷ್ಟಾಚಾರಿಯನ್ನು ಸಮಾಜದೆದುರು ಅನಾವರಣ ಮಾಡಿದ್ದೀರಿ.
3/8— H D Kumaraswamy (@hd_kumaraswamy) January 22, 2020
‘ಆತ’ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹುಡುಕಿ ಬರುತ್ತಾರೆ. ಬಾಲ್ಯದಿಂದ ಈವರೆಗೆ ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ. ಅದನ್ನು ನಾನು ವರ್ಣಿಸಿಕೊಳ್ಳಬೇಕಿಲ್ಲ.ಹಾಗೇ ನಿಮ್ಮಿಂದ ದೇಶ ಭಕ್ತಿ ತಿಳಿಯಬೇಕಿಲ್ಲ.
4/8— H D Kumaraswamy (@hd_kumaraswamy) January 22, 2020
ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಭಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ(ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ.
5/8— H D Kumaraswamy (@hd_kumaraswamy) January 22, 2020
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾ,ಮಿ ಅವರ ಟ್ವೀಟ್ ಗಳು
ನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್ನೇ ಜಪಿಸುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯಾನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು. ನಾನು ಈ ಮಣ್ಣಿನವ.
6/8— H D Kumaraswamy (@hd_kumaraswamy) January 22, 2020

ಪಾಕಿಸ್ತಾನ ಎಂಬ ದೇಶ ಈ ಭೂಪಟದಲ್ಲಿ ಇರದೇ ಹೋಗಿದ್ದರೆ ನೀವಿಲ್ಲಿ ಒಂದು ವೋಟು ಪಡೆಯಲೂ ಸಾಧ್ಯವಿರುತ್ತಿರಲಿಲ್ಲ. ಅದಕ್ಕಾಗಿಯೇ ಪಾಕ್ ನಾಮಸ್ಮರಣೆ ನಿಮ್ಮ ಕಾಯಕವಾಗಿಬಿಟ್ಟಿದೆ. ನಿಮ್ಮದೂ ರಾಜಕಾರಣವೇ? ನಿಮ್ಮದೂ ದೇಶ ಪ್ರೇಮವೇ? ಎಂಥ ಯಃಕಶ್ಚಿತ್ ಬದುಕು….?
7/8— H D Kumaraswamy (@hd_kumaraswamy) January 22, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.