ತೆನೆಯ ಹೊರೆ ಇಳಿಸಿದ ಹಳ್ಳಿಹಕ್ಕಿ
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟ ವಿಶ್ವನಾಥ್
Team Udayavani, Jun 5, 2019, 6:00 AM IST
ಬೆಂಗಳೂರು: ಹಿರಿಯ ರಾಜಕಾರಣಿ ಎಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷ ಹಾಗೂ ಪ್ರಭುತ್ವ ಜೋಡೆತ್ತಿನಂತೆ ಕೆಲಸ ಮಾಡಬೇಕಿತ್ತು. ಅದು ಸಾಧ್ಯವಾಗದ ಕಾರಣ ನಾನು ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದರೂ ಪ್ರಯೋಜನವಾಗದು ಎಂಬ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಜತೆಗೆ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಮನ್ವಯ ಸಮಿತಿಯು ಸಿದ್ದರಾಮಯ್ಯ ಅವರ ಕೈ ಗೊಂಬೆಯಾಗಿದೆ ಎಂದು ಕಿಡಿ ಕಾರಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಮೃದು ಧೋರಣೆ ತೋರುತ್ತಲೇ ಜೆಡಿಎಸ್‌ನ ವಿದ್ಯಮಾನಗಳ ಬಗ್ಗೆ ಬೇಸರ ಹೊರಹಾಕಿದ್ದಾರೆ. ತುಮಕೂರಿನ ಖೆಡ್ಡಾಗೆ ಕೆಡವಿ ಗೌಡರನ್ನು ತಂತ್ರಗಾರಿಕೆಯಿಂದ ಸೋಲಿಸಲಾಯಿತು ಎಂದೂ ‘ಬಾಂಬ್’ ಸಿಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ರಾಜೀನಾಮೆ ಪ್ರಕಟಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಬರೆದ ಪತ್ರದ ಪ್ರತಿ ಬಿಡುಗಡೆ ಮಾಡಿದರು. ಇನ್ಮುಂದೆ ಪಕ್ಷಕ್ಕೂ ನನ್ನ ಮತದಾರರಿಗೂ ನಿಷ್ಠನಾಗಿ ಪಕ್ಷ ಒಪ್ಪಿಸಿದ ಜವಾಬ್ದಾರಿಗಳನ್ನು ಮನಸ್ಸಿಟ್ಟು ನಿರ್ವಹಿಸುತ್ತೇನೆ ಎಂದು ಅದರಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿ ನಂತರ ಅಲ್ಲಿಂದ ನೇರವಾಗಿ ಜೆಡಿಎಸ್ ಕಚೇರಿಗೆ ಹೋಗಿ ಅಲ್ಲಿನ ವ್ಯವಸ್ಥಾಪಕರಿಗೆ ರಾಜೀನಾಮೆ ಪತ್ರ ಹಾಗೂ ಪಕ್ಷದ ವತಿಯಿಂದ ನೀಡಲಾಗಿದ್ದ ಕಾರಿನ ಕೀ ನೀಡಿ ನಿರ್ಗಮಿಸಿದರು.
ವಿಶ್ವನಾಥ್ ಅವರ ಮನವೊಲಿಕೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ನಿರಂತರ ಪ್ರಯತ್ನಿಸುತ್ತಿದ್ದಾರೆ. ನನ್ನ ನಿರ್ಧಾರ ಅಚಲ ಎಂದೂ ವಿಶ್ವನಾಥ್ ಹೇಳಿದ್ದಾರೆ. ರಾಜೀನಾಮೆ ಅಂಗೀಕಾರವಾಗುತ್ತಾ ಇಲ್ಲವಾ ಎಂಬುದು ಕಾದು ನೋಡಬೇಕಾಗಿದೆ.
ಪಕ್ಷದ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸುತ್ತಿದ್ದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೂರವಾಣಿ ಕರೆ ಮಾಡಿದ್ದರು. ಆದರೆ, ಮೊದಲಿಗೆ ಕರೆ ಸ್ವೀಕರಿಸಲು ನಿರಾಕರಿಸಿದ ವಿಶ್ವನಾಥ್ ಅವರು ನಂತರ ಸ್ವೀಕರಿಸಿ, ಬೇಸರ ಮಾಡಿಕೊಳ್ಳಬೇಡಿ ಸರ್, ದಯವಿಟ್ಟು ನನ್ನ ರಾಜೀನಾಮೆ ಅಂಗೀಕರಿಸಿ ಎಂದು ಮನವಿ ಮಾಡಿದರು.
ಸ್ವಲ್ಪ ಹೊತ್ತಲೇ ಸಚಿವ ಎಚ್.ಡಿ. ರೇವಣ್ಣ ಅವರು ದೂರವಾಣಿ ಕರೆ ಮಾಡಿ, ರಾಜೀನಾಮೆ ಕೊಡಬೇಡಿ. ವ್ಯತ್ಯಾಸ ಆಗಿದ್ದರೆ ಸರಿಪಡಿಸೋಣ, ನಿಮ್ಮ ರಾಜೀ ನಾಮೆ ಪತ್ರದಲ್ಲೂ ನಮ್ಮ ಕುಟುಂಬದ ಬಗ್ಗೆ ಒಳ್ಳೆಯ ಮಾತ ನಾಡಿದ್ದೀರಿ. ನಿಮ್ಮ ಮಾರ್ಗದರ್ಶನದಲ್ಲೇ ಪಕ್ಷ ಕಟ್ಟೋಣ ಎಂದು ಹೇಳಿದರು. ನಂತರ ಸಂಸದ ಪ್ರಜ್ವಲ್ ದೂರವಾಣಿ ಕರೆ ಮಾಡಿ, ಅಂಕಲ್ ಪ್ಲೀಸ್ ರಾಜೀನಾಮೆ ಕೊಡಬೇಡಿ ಎಂದು ಮನವಿ ಮಾಡಿದರು. ಇಬ್ಬರಿಗೂ ಬೇಸರ ಮಾಡಿಕೊಳ್ಳಬೇಡಿ ಎಂದು ವಿಶ್ವನಾಥ್ ಹೇಳಿದರು. ಇಷ್ಟೆಲ್ಲದರ ನಂತರವೂ ಜೆಡಿಎಸ್ ನಾಯಕರು ವಿಶ್ವನಾಥ್ ಅವರ ಮನವೊಲಿಸುವ ವಿಶ್ವಾಸ ಹೊಂದಿದ್ದಾರೆ. ಈ ಮಧ್ಯೆ, ವಿಧಾನಸೌಧದಲ್ಲಿ ಮಾತ ನಾಡಿದ ಎಚ್.ವಿಶ್ವನಾಥ್, ದೇವೇಗೌಡರ ಫೋಟೋ ದೇವಸ್ಥಾನದಲ್ಲಿಟ್ಟು ಪೂಜೆ ಮಾಡುತ್ತೇನೆ. ಅವರು ದೊಡ್ಡವರು ಬೇಸರ ಮಾಡಿಕೊಳ್ಳಬಾರದು. ನನ್ನ ರಾಜೀನಾಮೆ ಅಂಗೀಕರಿಸುವ ವಿಶ್ವಾಸವಿದೆ. ನಾನು ಅವರಿಗೆ ಪ್ರತಿ ಹೇಳಲು ಆಗುವುದಿಲ್ಲ ಎಂದು ಹೇಳಿದರು.
ಮಂತ್ರಿಯಾಗ್ತಾರಾ?
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್.ವಿಶ್ವನಾಥ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಕೇಳಿದಾಗ, ಮಂತ್ರಿ ಮಾಡಿದರೆ ಬೇಡ ಎನ್ನಲ್ಲ. ಆದರೆ, ಮಂತ್ರಿಗಿರಿಗಾಗಿ ಯಾರ ಮನೆ ಬಾಗಿಲಿಗೂ ಹೋಗಲ್ಲ ಎಂದು ಹೇಳಿದರು. ಬಿಜೆಪಿ ಸೇರ್ಪಡೆ ಕುರಿತು ವದಂತಿಗೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಗ್ಗಾಮುಗ್ಗಾ ಹೊಡೆಸಿಕೊಂಡಿರುವ ಬಿಜೆಪಿಗೆ ನಾನ್ಯಾಕೆ ಹೋಗಲಿ ಎಂದು ಚಟಾಕಿ ಹಾರಿಸಿದರು. ದೇಶವ್ಯಾಪಿ ಬಿಜೆಪಿ ಅಲೆ ಇದ್ದರೆ ಒಡಿಶಾದಲ್ಲಿ ಬಿಜೆಡಿ ಐದನೇ ಬಾರಿ ಅಧಿಕಾರಕ್ಕೆ ಬರುತ್ತಿತ್ತಾ? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.