ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ನಾನು ಸಿದ್ದ, ತಾವು ಸಿದ್ದರೇ : ಬೇಳೂರಿಗೆ ಹಾಲಪ್ಪ ಪ್ರಶ್ನೆ

Team Udayavani, Feb 2, 2022, 3:04 PM IST

ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ನಾನು ಸಿದ್ದ, ತಾವು ಸಿದ್ದರೇ : ಬೇಳೂರಿಗೆ ಹಾಲಪ್ಪ ಪ್ರಶ್ನೆ

ಸಾಗರ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡುವಂತೆ ನೀಡಿರುವ ಆಹ್ವಾನವನ್ನು ನಾನು ಸ್ವೀಕರಿಸಿದ್ದು, ಫೆ. 13ರಂದು ನಾನು ಧರ್ಮಸ್ಥಳದ ಮಂಜುನಾಥೇಶ್ವರ ಸನ್ನಿಧಾನದಲ್ಲಿ ನಾನು ಮರಳು ಸಾಗಾಣಿಕೆದಾರರಿಂದ ನಯಾಪೈಸೆ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲು ಸಿದ್ದನಿದ್ದೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಚೆಗೆ ಮಾಜಿ ಶಾಸಕರು ನಾನು ಮರಳು ಸಾಗಾಣಿಕೆದಾರರಿಂದ ಹಣ ಪಡೆದಿದ್ದೇನೆ ಎಂದು ಆರೋಪಿಸಿದ್ದರು. ಜೊತೆಗೆ ನಾನು ಹಣ ತೆಗೆದುಕೊಂಡಿಲ್ಲ ಎಂದರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಎಸೆದಿದ್ದಾರೆ. ಅವರ ಸವಾಲನ್ನು ನಾನು ಸ್ವೀಕರಿಸಿದ್ದೇನೆ. ಇದಕ್ಕಾಗಿ ಫೆ. 13ಕ್ಕೆ ದಿನಾಂಕ ನಿಗದಿ ಮಾಡಿದ್ದೇನೆ. ನನ್ನ ವಿರುದ್ಧ ಆರೋಪ ಮಾಡಿರುವ ಮಾಜಿ ಶಾಸಕರು ಧರ್ಮಸ್ಥಳಕ್ಕೆ ಬರಬೇಕು ಎಂದು ಹೇಳಿದರು.

ನಾನು ಮತ್ತು ನನ್ನ ಕುಟುಂಬಸ್ಥರು ಮರಳು ಸಾಗಾಣಿಕೆದಾರರಿಂದ ಒಂದು ಪೈಸೆ ಕಮೀಷನ್ ಪಡೆದಿಲ್ಲ. ಮರಳು ಸಾಗಾಣಿಕೆದಾರರಿಂದ, ಪೊಲೀಸರಿಂದ ಹಣ ಪಡೆಯುವಷ್ಟು ಸಣ್ಣ ರಾಜಕಾರಣಿ ನಾನಲ್ಲ. ಆದರೆ ಅವರು ಶಾಸಕರಾಗಿದ್ದ ಸಂದರ್ಭದಲ್ಲಿ ಗಣಪತಿ ಗುಡಾಜಿ ಎನ್ನುವ ಪೊಲೀಸ್ ಇನ್ಸ್‌ಪೆಕ್ಟರ್ ಮುಂದಿರಿಸಿಕೊಂಡು ಕಮೀಷನ್ ಪಡೆದು ಅಭ್ಯಾಸವಾಗಿ ಹೋಗಿದೆ. ಇದೀಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ನಾನು ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡುವ ಜೊತೆಗೆ ಮಾಜಿ ಶಾಸಕರು ತಾವು ಸಹ ತಮ್ಮ ಅವಧಿಯಲ್ಲಿ ಮರಳು ಸಾಗಾಣಿಕೆದಾರರಿಂದ ಕಮೀಷನ್ ಪಡೆದಿಲ್ಲ ಎಂದು ಪ್ರಮಾಣ ಮಾಡಬೇಕು. ನನಗೆ ಯಾರಾದರೂ ಮರಳು ಸಾಗಾಣಿಕೆದಾರರು ಕಮೀಷನ್ ಕೊಟ್ಟಿದ್ದರೆ ಅವರು ಸಹ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು.

ಕೆಲವು ದಿನಗಳ ಹಿಂದೆ ಲಿಂಗನಮಕ್ಕಿ ಜಲಾಶಯದಿಂದ ಹೆಚ್ಚಿನ ನೀರು ಬಿಟ್ಟು ನಾನು ಕಮೀಷನ್ ಪಡೆಯುತ್ತಿದ್ದೇನೆ ಎಂದು ಮಾಜಿ ಶಾಸಕರು ಆರೋಪ ಮಾಡಿದ್ದರು. ಇದೀಗ ಮರಳು ಸಾಗಾಣಿಕೆದಾರರಿಂದ ಕಮೀಷನ್ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಒಂದರ್ಥದಲ್ಲಿ ಮಾಜಿ ಶಾಸಕರದ್ದು ಹಿಟ್ ಎಂಡ್ ರನ್ ಸಂಸ್ಕೃತಿ. ನೀರು ಹೆಚ್ಚು ಬಿಟ್ಟರೆ ನನಗೆ ಹೇಗೆ ಕಮೀಷನ್ ಬರುತ್ತದೆ? ಮಾಜಿ ಶಾಸಕರು ಯಾವುದೇ ಮಾಹಿತಿ ಇರಿಸಿಕೊಳ್ಳದೆ ವೃಥಾ ಆರೋಪ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮಾಜಿ ಶಾಸಕರ ಇಂತಹ ಆರೋಪಗಳಿಗೆ ಉತ್ತರ ನೀಡದೆ ನಿರ್ಲಕ್ಷ್ಯ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ : ಹುಣಸೂರು : ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರ ಸಾವು

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಇರುವಕ್ಕಿ ರೈತ ಪರ ಹೋರಾಟ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತಿನಲ್ಲಿ ಮೂರು ಬಡ ಬ್ರಾಹ್ಮಣ ಕುಟುಂಬವನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಸಿದ್ದರು. ಕಂದಾಯ ಇಲಾಖೆ ಅಧಿಕಾರಿಗಳು ದೀವರು, ಲಿಂಗಾಯಿತರು ಅಲ್ಲಿದ್ದರೆ ಒಕ್ಕಲೆಬ್ಬಿಸುತ್ತಿರಲಿಲ್ಲ. ಈ ಸಂದರ್ಭದಲ್ಲಿ ಲೋಕಾಭಿರಾಮವಾಗಿ ಕಾಗೋಡು ತಿಮ್ಮಪ್ಪ ಅವರಿಗೆ ವಯಸ್ಸಾಗಿದೆ, ಏನು ಗೊತ್ತಾಗುವುದಿಲ್ಲ ಬಿಡಿ ಎಂದು ಹೇಳಿದ್ದೇನೆ. ಕೆಲವರು ಅದನ್ನು ಬೇರೆ ರೀತಿ ತಿರುಚಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ನಾನು ಮರ ಕಡಿತಲೆ ಮಾಡುತ್ತಿರುವುದು ಸಿಗಂದೂರು ಆಣೆಯಾಗೂ ನನಗೆ ಬೇಸರ ತರುತ್ತಿದೆ ಎಂದು ಹೇಳಿದ್ದೇನೆಯೇ ವಿನಃ ಸಿಗಂದೂರು ಆಣೆಗೂ ಮರ ಕಡಿತಲೆ ಮಾಡಿಸುವುದಿಲ್ಲ ಎಂದು ಎಲ್ಲೂ ಹೇಳಿಲ್ಲ. ಅಭಿವೃದ್ಧಿ ಆಗಬೇಕು ಎನ್ನುವ ಹಿನ್ನೆಲೆಯಲ್ಲಿ ಮರ ಕಡಿತಲೆ ಆದಷ್ಟು ಕಡಿಮೆ ಮಾಡಲು ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಲೋಕನಾಥ್ ಬಿಳಿಸಿರಿ, ನಗರ ಅಧ್ಯಕ್ಷ ಗಣೇಶಪ್ರಸಾದ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್, ಎಪಿಎಂಸಿ ಅಧ್ಯಕ್ಷ ಚೇತನರಾಜ್ ಕಣ್ಣೂರು, ಪ್ರಮುಖರಾದ ಸಂತೋಷ್ ಶೇಟ್, ಸತೀಶ್ ಕೆ., ರವೀಂದ್ರ ಬಿ.ಟಿ. ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

Sachin Tendulkar: ಸಚಿನ್‌ ತೆಂಡುಲ್ಕರ್‌ಗೆಎಂಸಿಸಿ ಗೌರವ ಸದಸ್ಯತ್ವ

Sachin Tendulkar: ಸಚಿನ್‌ ತೆಂಡುಲ್ಕರ್‌ಗೆಎಂಸಿಸಿ ಗೌರವ ಸದಸ್ಯತ್ವ

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.