Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ
ಸಿಎಂ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಕಾಂಗ್ರೆಸ್ ಹಿರಿಯ ಮುಖಂಡ
Team Udayavani, Oct 8, 2024, 11:41 PM IST
ಬೆಂಗಳೂರು: “ಸಿದ್ದರಾಮಯ್ಯ ವಿರುದ್ಧ ಕೇಳಿಬರುತ್ತಿರುವ ಮುಡಾ ನಿವೇಶನ ಹಂಚಿಕೆ ಪ್ರಕರಣವು ಹರಿಯಾಣ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಿದ್ದು, ಇನ್ನಾದರೂ ಸಿಎಂ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ವಿಧಾನ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹರಿಯಾಣ ಚುನಾವಣೆಯಲ್ಲಿ ಮೋದಿ ಕರ್ನಾಟಕದ ಬಗ್ಗೆ ಮಾತಾಡಿದ್ರು. ಪದೇ ಪದೆ ಮಾತಾಡಿದ್ದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ನಾನೇನು ಸಕ್ರಿಯ ರಾಜಕಾರಣದಲ್ಲಿಲ್ಲ. ಆದರೆ, ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಅಷ್ಟೇ’ ಎಂದು ಹೇಳಿದರು.
ಶಾಮನೂರು ಓಡಾಡಿದ್ದಾರಾ?:
ಜಾತಿ ಗಣತಿ ವರದಿ ಬಗ್ಗೆ ಪ್ರತಿಕ್ರಿಯಿಸಿ, “ಶಾಮನೂರು ಶಿವಶಂಕರಪ್ಪ ಓಡಾಡಿದ್ದಾರಾ? ಸಮೀಕ್ಷೆ ಮಾಡುವಾಗ ನಾನು ಮನೆ ಮನೆ ಓಡಾಡಿದ್ದೇನೆ. ಕಾಂತರಾಜ ವರದಿ ಕೇವಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಲ್ಲ. ಅದು ಜಾತಿ ಜನಗಣತಿ ಕೂಡ ಹೌದು. ವೈಜ್ಞಾನಿಕ, ಅವೈಜ್ಞಾನಿಕ ಎಂದರೆ ಏನು ಅಂತ ಅರ್ಥ ಆಗುತ್ತಿಲ್ಲ. ಇದರಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗುತ್ತದೆ ಎಂದು ಅನಿಸುವುದಿಲ್ಲ. ಇದರ ಜಾರಿಗೆ ವಿಳಂಬ ಮಾಡುವ ಅವಶ್ಯಕತೆ ಇಲ್ಲ’ ಎಂದು ಹೇಳಿದರು.
“ಉಪಸಮಿತಿ ಮಾಡಿ ವಿಳಂಬ ಮಾಡುವ ಅಥವಾ ಮುಂದೂಡುವ ಅವಶ್ಯಕತೆ ಇಲ್ಲ. ಕೆನೆಪದರ ಕಡ್ಡಾಯ ಎಂಬುದು ನನ್ನ ಅಭಿಪ್ರಾಯ. ಒಂದು ತಿಂಗಳು ಅವಕಾಶ ಕೊಟ್ಟು ಏನಾದರೂ ಬದಲಾವಣೆ ಇದ್ದರೆ ಮಾಡಲಿ. ಜಾತಿ ಗಣತಿ ಮಾಡುವಾಗ ನಾನೇ ವೈಯಕ್ತಿಕವಾಗಿ ಹಲವು ಕಡೆ ಹೋಗಿದ್ದೇನೆ. ಪ್ರತಿಯೊಂದು ಮನೆಗೆ ಭೇಟಿ ನೀಡಿದ್ದಾರೆ. ಜಾತಿ ಉಪಜಾತಿಯನ್ನೂ ದಾಖಲು ಮಾಡಿಕೊಂಡಿದ್ದಾರೆ. ಬಹಳ ಉತ್ತಮವಾಗಿ ಗಣತಿ ಮಾಡಿದ್ದಾರೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.