ಮುಂದಿನ ವಿಧಾನಸಭೆ ಚುನಾವಣೆ ವೇಳೆ ಪಕ್ಷವನ್ನು ಬಲಿಷ್ಠಗೊಳಿಸಿಯೇ ತೀರುತ್ತೇನೆ: ದೇವೇಗೌಡ

Team Udayavani, Feb 11, 2020, 6:31 PM IST

hdd

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಕಥೆ ಮುಗಿಯಿತು, ಜೆಡಿಎಸ್‌ ಮುಗಿಸಬಹುದು ಎಂದು ಯಾರಾದರೂ ಅಂದುಕೊಂಡಿದ್ದರೆ ಅದು ಭ್ರಮೆ. ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಪಕ್ಷ ಮತ್ತೆ ಬಲಿಷ್ಠಗೊಳಿಸಿಯೇ ತೀರುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಕಾರ್ಯಕಾರಿಣಿ ಅಂಗವಾಗಿ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಮಹಾಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು, ಮುಖಂಡರು ದೆಹಲಿಯಲ್ಲಿ ಕೇಜ್ರಿàವಾಲ್‌ ನೋಡಿ ಪಕ್ಷ ಕಟ್ಟುವ ಸಂಕಲ್ಪ ತೊಡಬೇಕು ಎಂದು ಕರೆ ನೀಡಿದರು.

ದೆಹಲಿಯಲ್ಲಿ ಯಾವುದೇ ಜಾತಿ ಕೆಲಸ ಮಾಡಿಲ್ಲ. ಜನರು ಪ್ರಾದೇಶಿಕ ಪಕ್ಷಕ್ಕೆ ಮಣೆ ಹಾಕಿದ್ದಾರೆ. ಬಿಜೆಪಿ ಏನೆಲ್ಲಾ ಮಾಡಿದರೂ ದೆಹಲಿ ವಶಕ್ಕೆ ಪಡೆಯಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಜನತಾಪರಿವಾರದಲ್ಲಿದ್ದು ಬೇರೆ ಬೇರೆ ಪಕ್ಷಗಳಲ್ಲಿ ಹಂಚಿ ಹೋಗಿರುವವರು ಹಾಗೂ ತಟಸ್ಥರಾಗಿರುವವರ‌ನ್ನು ಮತ್ತೆ ಪಕ್ಷಕ್ಕೆ ಕರೆತರುತ್ತೇನೆ. ಕೇರಳದಲ್ಲಿ ಈಗಾಗಲೇ ಆ ಪ್ರಯತ್ನಕ್ಕೆ ಚಾಲನೆ ಸಿಕ್ಕಿದೆ. ಕರ್ನಾಟಕದಲ್ಲೂ ನಾನೇ ಎಲ್ಲರ ಮನೆ ಬಾಗಿಲಿಗೆ ಹೋಗಿ ಕರೆತರುತ್ತೇನೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. 2023 ಕ್ಕೆ ಚುನಾವಣೆ ಬರುತ್ತೋ ಅದಕ್ಕೆ ಮೊದಲು ಬರುತ್ತೋ ನನ್ನ ಪಕ್ಷವನ್ನು ಸಜ್ಜುಗೊಳಿಸುವುದು ನನ್ನ ಮೊದಲ ಆದ್ಯತೆ ಎಂದು ತಿಳಿಸಿದರು.

ನಾನು ಯಾರ ಮುಲಾಜಿಗೂ ಒಳಗಾಗುವುದಿಲ್ಲ. ಹಿಂದೆ ಮಾಡಿದ ತಪ್ಪು ಮತ್ತೆ ಮಾಡುವುದಿಲ್ಲ. 224 ಕ್ಷೇತ್ರಗಳಲ್ಲಿ ಪಕ್ಷಕ್ಕಾಗಿ ಶ್ರಮಿಸುವ ನೈಜ ಕಾರ್ಯಕರ್ತರು, ಮುಖಂಡರನ್ನು ಗುರುತಿಸಿ ನಾಯಕತ್ವ ನೀಡುತ್ತೇನೆ. ಅವರಿಗೆ ಅವಕಾಶ ಕೊಡುತ್ತೇನೆ ಎಂದು ಹೇಳಿದರು.

1989 ರಲ್ಲಿ ಪಕ್ಷದಿಂದ ನನ್ನನ್ನು ಹೊರಹಾಕಲಾಗಿತ್ತು. ನನ್ನ ಜತೆಗಿದ್ದ ಎಲ್ಲ ಸ್ನೇಹಿತರೂ ಹೊರಟುಹೋಗಿದ್ದರು. 1994 ರಲ್ಲಿ ಮತ್ತೆ ಪಕ್ಷದ ರಾಜ್ಯಾಧ್ಯಕ್ಷನಾಗಿ 115 ಸೀಟುಗಳೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತಂದೆ. ಆಗ ಯಾರೂ ಪಕ್ಷ ಕಟ್ಟಲು ನನಗೆ ನಯಾಪೈಸೆ ಕೊಡಲಿಲ್ಲ, ಸಿಂದ್ಯಾ, ಜೀವ್‌ರಾಜ್‌ ಆಳ್ವಾ, ಜಾಲಪ್ಪ ಅವರು ತಲಾ ಹತ್ತು ಲಕ್ಷ ರೂ. ನೀಡಿದ್ದರು ಅಷ್ಟೇ. ಆದರೆ ಪಕ್ಷ ಕಟ್ಟಿ ಮತ್ತೆ ಅಧಿಕಾರಕ್ಕೆ ತಂದು ಜನರ ಆಶೀರ್ವಾದದಿಂದ ಪ್ರಧಾನಿಯಾಗಿಯೂ ಕೆಲಸ ಮಾಡಿದೆ. ನನಗೆ ಸೋಲು-ಗೆಲುವು ಹೊಸದಲ್ಲ, ಪಕ್ಷ ಕಟ್ಟುವುದು ಹೊಸದಲ್ಲ ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರು ಮುಖಂಡರು ಧೃತಿಗೆಡುವ ಅಗತ್ಯವಿಲ್ಲ. ನಾನು ನಿಮ್ಮೊಂದಿಗಿದ್ದೇನೆ. ಪಕ್ಷದ ಕಾರ್ಯಕರ್ತರಿಗಾಗಿ ನಾನು ಎಲ್ಲವನ್ನೂ ತ್ಯಾಗ ಮಾಡಲು ಸಿದ್ಧ ಎಂದು ಹೇಳಿದರು.

ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್‌ ಮಾತನಾಡಿ, ಜೆಡಿಎಸ್‌ ಪಕ್ಷವು ಎಚ್‌.ಡಿ.ದೇವೇಗೌಡರ ಶ್ರಮದಿಂದ ಉಳಿದಿದೆ. 87 ನೇ ವಯಸ್ಸಿನಲ್ಲಿಯೂ ಪಕ್ಷ ಕಟ್ಟಲು ಬೀದಿಯಲ್ಲಿ ನಿಂತು ಹೋರಾಟ ಮಾಡುತ್ತಿದ್ದಾರೆ. ಅವರು ನಮ್ಮ ಪಕ್ಷದ ಶಕ್ತಿ. ಅವರ ಮಾರ್ಗದರ್ಶನದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ತರಬೇಕು ಎಂದು ತಿಳಿಸಿದರು.

ಜೆಡಿಎಸ್‌ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ. ಕೇರಳ, ಮಹಾರಾಷ್ಟ್ರ, ಗುಜರಾತ್‌, ಹರಿಯಾಣ, ಉತ್ತರಪ್ರದೇಶ ಸೇರಿ ದೇಶಾದ್ಯಂತ ಜೆಡಿಎಸ್‌ಗೆ ಶಕ್ತಿಯಿದೆ. ಹದಿನಾಲ್ಕು ತಿಂಗಳು ಕುಮಾರಸ್ವಾಮಿ ನೇತೃತ್ವದ ಸರ್ಕಾರ ನೀಡಿರುವ ಸಾಧನೆ ಕಡಿಮೆಯೇನಲ್ಲ ಎಂದು ಹೇಳಿದರು.

ಮಾಜಿ ಸಚಿವ ಬಸವರಾಜ ಹೊರಟ್ಟಿ ಮಾತನಾಡಿ,ಜನತಾಪರಿವಾರದಲ್ಲಿದ್ದು ರಾಜಕೀಯವಾಗಿ ತಟಸ್ಥರಾಗಿರುವವರನ್ನು ಮತ್ತೆ ಪಕ್ಷಕ್ಕೆ ಕರೆತರಬೇಕು. ಚುನಾವಣೆ ಬಂದಾಗ ಮಾತ್ರ ಪಕ್ಷ ಸಂಘಟನೆ ಮಾಡದೆ ನಿರಂತರವಾಗಿ ತಾಲೂಕು, ಜಿಲ್ಲಾ ಮತ್ತು ರಾಜ್ಯ ಘಟಕ ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್‌.ವಿ.ದತ್ತಾ ಮಾತನಾಡಿ, ದೆಹಲಿಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಸೆಡ್ಡು ಹೊಡೆದು ಆಮ್‌ ಆದ್ಮಿ ಪಾರ್ಟಿ ಮೂರನೇ ಬಾರಿಗೆ ಗೆಲುವು ಸಾಧಿಸಿರುವುದು ಜೆಡಿಎಸ್‌ಗೆ ಸ್ಪೂರ್ತಿ. ಪ್ರಾದೇಶಿಕ ಪಕ್ಷಗಳಿಗೆ ಜನ ಮನ್ನಣೆ ಇದೆ ಎಂಬುದು ಇದರಿಂದ ಸಾಬೀತಾಗಿದೆ. ರಾಜ್ಯದಲ್ಲಿಯೂ ಜೆಡಿಎಸ್‌ಗೆ ಭವಿಷ್ಯವಿದೆ ಎಂದು ಹೇಳಿದರು.

ಕೇರಳದಲ್ಲಿ ಸಚಿವರಾಗಿರುವ ಮ್ಯಾಥೂ ಥಾಮಸ್‌, ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಎಚ್‌.ಡಿ.ರೇವಣ್ಣ, ಲೀಲಾದೇವಿ ಆರ್‌.ಪ್ರಸಾದ್‌, ಎಂ.ಎಂ.ನಬಿ, ಕೋನರೆಡ್ಡಿ, ಶೀಲಾನಾಯಕ್‌, ವಿಧಾನಪರಿಷತ್‌ ಸದಸ್ಯರಾದ ಬಿ.ಎಂ.ಫ‌ರೂಕ್‌, ರಮೇಶ್‌ಗೌಡ, ಆರ್‌.ಪ್ರಕಾಶ್‌ ಉಪಸ್ಥಿತರಿದ್ದರು.

ನಿರ್ಣಯ
ಮಹಾಧಿವೇಶನದಲ್ಲಿ ಆರ್ಥಿಕ ಹಾಗೂ ರಾಜಕೀಯ ಸೇರಿ ನಾಲ್ಕು ನಿರ್ಣಗಳನ್ನು ಅಂಗೀಕರಿಸಲಾಯಿತು. ಆರ್ಥಿಕ ನಿರ್ಣಯದಲ್ಲಿ ದೇಶದ ಆರ್ಥಿಕ ವ್ಯವಸ್ಥೆ ಕುಸಿದಿದ್ದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆರ್ಥಿಕ ನೀತಿ ಇದಕ್ಕೆ ಕಾರಣ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ, ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಮಧ್ಯಮ ಹಾಗೂ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಶದ ಆರ್ಥಿಕ ಚೇತರಿಕೆಗೆ ಕೇಂದ್ರ ಸರ್ಕಾರ ನೀತಿ ರೂಪಿಸಬೇಕು. ಕಾರ್ಮಿಕ, ಕೈಗಾರಿಕಾ, ಕೃಷಿ ಕಲ್ಯಾಣ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ರಾಜಕೀಯ ನಿರ್ಣಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜನ ಹಾಗೂ ದೇಶ ವಿರೋಧಿ. ದೇಶಾದ್ಯಂತ ಸಿಎಎ ವಿರುದ್ಧ ಹೋರಾಟಗಳು ನಡೆಯುತ್ತಿವೆ. ದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಪ್ರಸಕ್ತ ಸನ್ನಿವೇಶದಲ್ಲಿ ಪ್ರಾದೇಶಿಕ ಪಕ್ಷಗಳು, ಜಾತ್ಯತೀತ ಶಕ್ತಿಗಳು ಒಂದಾಗಿ ಹೋರಾಟ ಮಾಡಬೇಕು. ಕೇಂದ್ರ ಸರ್ಕಾರವು ಜನರ ಭಾವನೆಗೆ ಬೆಲೆ ಕೊಟ್ಟು ತಕ್ಷಣ ಸಿಎಎ ಕಾಯ್ದೆ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಲಾಗಿದೆ.

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.