ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕದಂತೆ ಪ್ರಧಾನಿಗೆ ಎಚ್‌ಡಿಡಿ ಪತ್ರ
Team Udayavani, Nov 2, 2019, 8:27 PM IST
ಬೆಂಗಳೂರು: ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.
ಆರ್‌ಸಿಇಪಿ ಒಪ್ಪಂದಿಂದ ದೇಶದ ರೈತಾಪಿ ಸಮುದಾಯದ ಸಂಕಷ್ಟಕ್ಕೆ ಸಿಲುಕಲಿದ್ದು ಇದರಿಂದ ದೊಡ್ಡ ಮಟ್ಟದ ಸಮಸ್ಯೆಗಳು ಉಂಟಾಗಲಿವೆ. ಯಾವುದೇ ಕಾರಣಕ್ಕೂ ಈ ಒಪ್ಪಂದಕ್ಕೆ ಸಹಿ ಹಾಕಬಾರದು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಪ್ರಸ್ತುತ ಕರ್ನಾಟಕ ಸೇರಿದಂತೆ ದೇಶದಲ್ಲಿ ಹೈನುಗಾರಿಕೆ ಮೇಲೆ ಅವಲಂಬಿತವಾಗಿರುವ ರೈತರ ಕುಟುಂಬಗಳು ಹಾಗೂ ಆರ್‌ಸಿಇಪಿ ಒಪ್ಪಂದದಿಂದ ಗ್ರಾಮೀಣ ಭಾಗದ ಆರ್ಥಿಕತೆಯ ಮೇಲೆ ಉಂಟಾಗಲಿರುವ ಪರಿಣಾಮಗಳ ಕುರಿತು ಪತ್ರದಲ್ಲಿ ವಿವರಿಸಿದ್ದಾರೆ.
ನೀತಿ ಆಯೋಗದ ಅಂದಾಜಿನ ಪ್ರಕಾರವೇ 2033 ರ ವೇಳಗೆ ದೇಶದ ಒಟ್ಟಾರೆ ಹಾಲಿನ ಉತ್ಪಾದನೆ ಪ್ರಸ್ತುತ ಇರುವ 180 ದಶಲಕ್ಷ ಟನ್‌ನಿಂದ 330 ದಶಲಕ್ಷ ಟನ್‌ಗೆ ಏರಿಕೆಯಾಗಲಿದೆ. ಬೇಡಿಕೆ 292 ದಶಲಕ್ಷ ಟನ್‌ಗಳಷ್ಟಿರಲಿದೆ.ಕರ್ನಾಟಕದಲ್ಲಿ 14 ಸಾವಿರ ಹಾಲು ಉತ್ಪಾದಕರ ಸಂಘಗಗಳಿದ್ದು 24 ಲಕ್ಷ ಹಾಲು ಉತ್ಪಾದಕರಿದ್ದಾರೆ. ನಿತ್ಯ 84 ಲಕ್ಷ ಕೆಜಿ ಹಾಲು ಉತ್ಪಾದನೆಯಾಗುತ್ತಿದೆ. 65 ಹಾಲಿನ ಉಪ ಉತ್ಪನ್ನಗಳನ್ನು ಮಾಡಲಾಗುತ್ತಿದೆ. ನಂದಿನಿ ಬ್ರ್ಯಾಂಡ್‌ನಡಿ ಕೋಟ್ಯಂತರ ಗ್ರಾಹಕರ ಮನೆ ಸೇರುತ್ತಿದೆ. ಗುಜರಾತ್‌ನಲ್ಲಿಯೂ ಹಾಲು ಉತ್ಪಾದನೆ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ರೈತರ ಕುಟುಂಬಗಳು ಜೀವನೋಪಾಯಕ್ಕೆ ಇದನ್ನೇ ಅವಲಂಬಿಸಿವೆ.
ಹೀಗಾಗಿ, ಇದೆಲ್ಲವನ್ನೂ ದೃಷ್ಟಿಯಲ್ಲಿಟ್ಟಕೊಂಡು ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.