HDK vs CM: ಸಿದ್ದರಾಮಯ್ಯನವರೇ.. ನಿಮ್ಮ ಹೆಣೆಬರಹದ ನೂರಾರು ಪುರಾಣಗಳು ನನ್ನಲ್ಲಿವೆ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ, ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ಪ್ರಯತ್ನವೇಕೆ?
Team Udayavani, Aug 22, 2024, 7:50 PM IST
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಾಜಿ ಹಾಗೂ ಹಾಲಿ ಸಿಎಂಗಳ ಪ್ರಾಸಿಕ್ಯೂಷನ್ ವಿಚಾರದಲ್ಲಿ ವಾಗ್ಯುದ್ಧ ಜೋರಾಗಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಲೋಕಾಯುಕ್ತದ ಮೂಲಕ ಅನುಮತಿ ಕೇಳಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಆಂಡ್ ಟೀಮ್ ವಿರುದ್ದ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಲವು ಗಂಭೀರ ಆರೋಪಗಳ ಮಾಡಿದ್ದಾರೆ. ಅಲ್ಲದೇ ದಾಖಲೆಗಳು ಬಿಚ್ಚಿಡುತ್ತೇನೆ ಎಂದೂ ಎಚ್ಚರಿಕೆ ನೀಡಿರುವ ವಿವರ ಈ ಕೆಳಗಿನಂತಿದೆ.
ಸಿದ್ದಕರ್ಮಿ ಸಿದ್ದರಾಮಯ್ಯನವರೇ, ನಿಮ್ಮ ವಿರುದ್ಧ ಬಂದ ಮುಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ ಉಳಿದು ಲೂಟಿ ಹೊಡೆಯಬೇಕೆನ್ನುವ ನಿಮ್ಮ ಧನದಾಹದ ಹಪಾಹಪಿಯನ್ನೂ ಅರ್ಥ ಮಾಡಿಕೊಳ್ಳಬಲ್ಲೆ. ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುವ ನಿಮ್ಮ ಪ್ರಾರಬ್ಧ ಎಂಥಾ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದನ್ನೂ ಅರ್ಥ ಮಾಡಿಕೊಂಡಿದ್ದೇನೆ. ಎಷ್ಟೇ ಆದರೂ ನೀವು ಸಕಲ ಕಲೆಗಳ ಸಿದ್ದಕರ್ಮಿ, ಇಂಥ ಗಲೀಜು ಕೆಲಸ ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ ಎಂದು ವಾಗ್ದಾಳಿ ನಡೆಸಿದ್ದಾರೆ.
1. ಸಾಯಿ ವೆಂಕಟೇಶ್ವರಕ್ಕೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಪೋರ್ಜರಿ ಆಗಿದೆ. ಪತ್ರಿಕೆಗಳ ವರದಿಗೆ ನಾನು ಉತ್ತರ ಕೊಡುತ್ತೇನೆ, ಪಲಾಯನ ನನ್ನ ಜಾಯಮಾನವಲ್ಲ. ಆದರೆ, ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ? 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ?
2. ಮುಡಾದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರಕಾರಿ ಭೂಮಿಯನ್ನು ಹೇಗೆಲ್ಲಾ ಮುಕ್ಕಿತು ಎನ್ನುವುದಕ್ಕೆ ದಂಡಿ ದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್ ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ? ಕಪ್ಪುಚುಕ್ಕೆಯನ್ನು ನಿಮ್ಮ ವೈಟ್ನರ್ ಅಳಿಸೀತಾ ಸಿದ್ದರಾಮಯ್ಯನವರೇ?
3. ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಅಂತೀರಿ. ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ! 14 ಸೈಟಿಗೆ ₹62 ಕೋಟಿ ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ.. ಇನ್ನೇನೋ.. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ… ಸತ್ತ ಜೀವದ ರುಚಿ ನೆಕ್ಕಲು..
4. ಮಿಸ್ಟರ್ ಸಿದ್ದರಾಮಯ್ಯ.. ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ. 2011ರಲ್ಲಿ ಸುಪ್ರೀಂ ಕೋರ್ಟ್ ಎಸ್‌ಐಟಿಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ? ನಾನು ವಕೀಲ.. ನಾನು ವಕೀಲ.. ಎಂದು ಪದೇ ಪದೆ ಹೇಳಬೇಡಿ ಎಂದು ಹಿಂದೆಯೇ ಸಲಹೆ ಮಾಡಿದ್ದೆ. ಬುದ್ಧಿಗೇಡಿಗಳಿಗೆ ಬುದ್ಧಿವಾದ ರುಚಿಸದು.
5. ರಾಜ್ಯಪಾಲರಿಗೆ ಎಸ್‌ಐಟಿ ಬರೆದ ಪತ್ರ ಇಟ್ಟುಕೊಂಡು ಹಾರಾಟ ಮಾಡುತ್ತಿದ್ದೀರಿ ನೀವು. ಪತಂಗದ ಹಾರಾಟ ನೋಡಲಿಕ್ಕೆ ಚೆಂದ, ಕೆಳಗಿರುವ ಬೆಂಕಿಜ್ವಾಲೆ ಅದಕ್ಕೆ ಅರಿವಿರುವುದಿಲ್ಲ. ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಿಮ್ಮ ಆನಂದ ತಾತ್ಕಾಲಿಕ ಸಿದ್ದರಾಮಯ್ಯನವರೇ..
6. ಸುತ್ತಲೂ ಪಟಾಲಂ ಕಟ್ಟಿಕೊಂಡು, ಹೈಕಮಾಂಡ್ ಅನ್ನೇ ಕಾಲ ಕಸ ಮಾಡಿಕೊಂಡು, ನಂಬಿ ಕೈ ಹಿಡಿದವರ ಬೆನ್ನಿಗೆ ಚೂರಿ ಹಾಕಿ ಕುರ್ಚಿಗಾಗಿ ಪಾಲಿಟಿಕ್ಸ್ ಮಾಡುವ ನಿಮ್ಮ ದಿಕ್ಕೆಟ್ಟ ದುಸ್ಥಿತಿ ನನಗಿಲ್ಲ ಸಿದ್ದರಾಮಯ್ಯನವರೇ..ನನ್ನ ರಾಜಕಾರಣ ನಿಮ್ಮಂತೆಯೇ ಹಣ, ಅಧಿಕಾರಕ್ಕೆ ಅಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾನು ನಾನೇ… ‘ಸೋತರೆ ಸೋಲಬೇಕು ಬಾಹುಬಲಿಯಂತೆ..’ ಆ ಮಹಾನ್ ವಿರಾಗಿಯೇ ನನ್ನ ಆದರ್ಶ. 20 ತಿಂಗಳ ಅಧಿಕಾರ, 14 ತಿಂಗಳ ಸರಕಾರ ತ್ಯಜಿಸುವಾಗಲೂ ನಾನು ನಿರ್ಭಾವುಕ. ಇದು ನಿಮಗೆ ಸಾಧ್ಯವೇ?
7. ಗೌರವಾನ್ವಿತ ಪ್ರಧಾನಮಂತ್ರಿಗಳ ರಕ್ಷಣೆ ಪಡೆದುಕೊಳ್ಳುವ, ಅವರ ಗೌರವಕ್ಕೆ ಧಕ್ಕೆ ತರುವ ಕೆಲಸ ನಾನೆಂದೂ ಮಾಡಲಾರೆ. ನನ್ನನ್ನು ನಾನು ರಕ್ಷಣೆ ಮಾಡಿಕೊಳ್ಳುವುದೂ ಗೊತ್ತು. ನಿಮ್ಮ ದುಷ್ಟತನದ ಭಕ್ಷಣೆಯೂ ಗೊತ್ತು.
8. ನನ್ನ ಪುರಾಣ ಕಂತುಗಳಲ್ಲಿ ಬರುತ್ತದೆ ಎನ್ನುವ ಸಿದ್ದರಾಮಯ್ಯನವರೇ.. ನಿಮ್ಮ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು. ಬೇಲೆಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ನಿಮ್ಮ ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್ ಟೇಬಲ್ ಗಳು ಸಾಲುಗಟ್ಟಬೇಕಾಗುತ್ತದೆ. ಹುಷಾರ್ ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.