Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ
ಮನೆ ಬಾಗಿಲಿಗೇ ಆರೋಗ್ಯ ಸೇವೆ, ಕೋಲಾರದಲ್ಲಿ ಜಾರಿ, ಮಧುಮೇಹ, ರಕ್ತದೊತ್ತಡ ರೋಗಿಗಳಿಗೆ ಉಚಿತ ಔಷಧ ವಿತರಣೆ
Team Udayavani, Oct 24, 2024, 7:45 AM IST
ಬೆಂಗಳೂರು: ಗ್ರಾಮೀಣ ಭಾಗದವರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಹಾಗೂ ಅಸಾಂಕ್ರಾಮಿಕ ರೋಗಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಗುರುವಾರ “ಗೃಹ ಆರೋಗ್ಯ’ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡಲಿದೆ.
ಗೃಹ ಆರೋಗ್ಯ ಯೋಜನೆಯು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಗೊಂಡು, ಜನವರಿ ಅಂತ್ಯದೊಳಗೆ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಕರ್ನಾಟಕದಲ್ಲಿ ಶೇ. 26.9ರಷ್ಟು ಮಂದಿ ಅಧಿಕ ರಕ್ತದೊತ್ತಡ, ಶೇ. 15.6ರಷ್ಟು ಮಂದಿ ಮಧುಮೇಹದಿಂದ ಬಳಲುತ್ತಿದ್ದಾರೆ. ಇದರಿಂದ ಉಂಟಾಗುತ್ತಿರುವ ಮರಣ ಹಾಗೂ ಅನಾರೋಗ್ಯ ತೊಡಕುಗಳನ್ನು ತಡೆಗಟ್ಟಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುತ್ತಿದ್ದಾರೆ. ಯೋಜನೆಯ ಭಾಗವಾಗಿ ಗ್ರಾಮೀಣ ಭಾಗ ಜನರ ಮನೆ ಬಾಗಿಲಿಗೆ ಸಮುದಾಯ ಆರೋಗ್ಯ ಕೇಂದ್ರ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರ ತಂಡ ತೆರಳಿ ತಪಾ ಸಣೆ ನಡೆಸಲಿದೆ.
ಮೊದಲ ಹಂತದ ತಪಾಸಣೆ
ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಮೊದಲ ಹಂತದಲ್ಲಿ ಗ್ರಾಮೀಣ ಭಾಗದ ಪ್ರತೀ ಮನೆಗೆ ಭೇಟಿ ನೀಡಲಿದ್ದಾರೆ. ಪ್ರತೀ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ದಿನಕ್ಕೆ ತಲಾ 15 ಮನೆಗಳಂತೆ ಭೇಟಿ ನೀಡಿ ತಪಾಸಣೆ ನಡೆಸಲಿದ್ದಾರೆ. ಈ ವೇಳೆ ಅಧಿಕ ರಕ್ತದೊತ್ತಡ (ಬಿಪಿ) ಹಾಗೂ ಮಧುಮೇಹ (ಡಯಾಬಿಟೀಸ್)ದಿಂದ ಬಳಲುವವರು ಮತ್ತು ಇತರರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಜತೆಗೆ ಮಾನಸಿಕ ಆರೋಗ್ಯ, ಸ್ತನ, ಬಾಯಿ ಹಾಗೂ ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಮಾಡಲಾಗುತ್ತದೆ.
ಕನಿಷ್ಠ ಮೂರು ತಿಂಗಳು
ರಾಜ್ಯ ಗ್ರಾಮೀಣ ಭಾಗದಲ್ಲಿ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲು ಕನಿಷ್ಠ 3 ತಿಂಗಳು ಬೇಕಾಗುತ್ತದೆ. ಪ್ರಸ್ತುತ ರಾಜ್ಯದಲ್ಲಿ ಶೇ. 11.5ರಷ್ಟು ಮಂದಿ ಬಾಯಿ, ಶೇ. 26ರಷ್ಟು ಸ್ತನ ಹಾಗೂ ಶೇ. 18.3ರಷ್ಟು ಜನರು ಗರ್ಭ ಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಈ ರೋಗಗಳಿಗೂ ಪರಿಹಾರ ಒದಗಿಸಲು ಗೃಹ ಆರೋಗ್ಯ ಯೋಜನೆಯಲ್ಲಿ ರೂಪುರೇಷೆ ಸಿದ್ಧಪಡಿಸಲಾಗಿದೆ.
ಉಚಿತ ಔಷಧ ಕಿಟ್
ರಕ್ತದೊತ್ತಡ ಹಾಗೂ ಮಧುಮೇಹ ಸ್ಕ್ರೀನಿಂಗ್ ವೇಳೆ ಅಗತ್ಯವಿದ್ದವರಿಗೆ ವೈದ್ಯರ ಮೇಲ್ವಿಚಾರಣೆಯಲ್ಲಿ ಔಷಧವನ್ನು ಬದಲಾಯಿಸಲಾಗುತ್ತದೆ. ಅವರಿಗೆ ಒಂದು ತಿಂಗಳ ಅವಧಿಗೆ ಅಗತ್ಯವಿರುವ ಮಾತ್ರೆಗಳ ಕಿಟ್ ಪೂರೈಸಲಾಗುತ್ತದೆ. ಈ ಮಾಹಿತಿಯನ್ನು ಎನ್‌ಸಿಡಿ ಆ್ಯಪ್‌ನಲ್ಲಿ ಭರ್ತಿ ಮಾಡಲಾಗುತ್ತದೆ. ಕ್ಯಾನ್ಸರ್ ಹಾಗೂ ಇತರ ಕಾಯಿಲೆಗಳ ತಪಾಸಣೆ ವೇಳೆ ಅಪಾಯದ ಮುನ್ಸೂಚನೆ ಅಥವಾ ಲಕ್ಷಣಗಳು ವರದಿಯಾದರೆ ತತ್‌ಕ್ಷಣ ಟೆಲಿ ಕಾಲ್ ಮೂಲಕ ವೈದ್ಯರ ಅಭಿಪ್ರಾಯ ಪಡೆದು, ಹೆಚ್ಚಿನ ತಪಾಸಣೆಗಾಗಿ ಸಮೀಪದ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ (ಹಿಂದಿನ ಉಪ ಆರೋಗ್ಯ ಕೇಂದ್ರ) ಶಿಫಾರಸು ಮಾಡಲಾಗುತ್ತದೆ.
ಇಂದು ಚಾಲನೆ
ಗೃಹ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅ. 24ರಂದು ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸಂಜೆ 4ಕ್ಕೆ ಚಾಲನೆ ನೀಡಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಸಭಾಪತಿ ಬಸವರಾಜ್ ಹೊರಟ್ಟಿ, ಸ್ಪೀಕರ್ ಯು.ಟಿ. ಖಾದರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರ ಸಚಿವರು ಭಾಗವಹಿಸಲಿದ್ದಾರೆ.
“ಗ್ರಾಮೀಣ ಭಾಗದ ಜನರು ರಕ್ತದೊತ್ತಡ, ಮಧುಮೇಹ ರೋಗಗಳ ತಪಾಸಣೆ ವಿಚಾರದಲ್ಲಿ ನಿರ್ಲ ಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಈಗ ಆರೋಗ್ಯ ಇಲಾಖೆಯನ್ನು ಜನರ ಮನೆ ಬಳಿಗೆ ಕಳುಹಿಸುತ್ತಿದ್ದೇವೆ. ಪ್ರಾರಂಭಿಕ ಹಂತದಲ್ಲಿ ರಕ್ತದೊತ್ತಡ, ಮಧುಮೇಹವನ್ನು ಜನರು ನಿರ್ಲಕ್ಷಿಸಿದರೆ ದೀರ್ಘಾವಧಿಯಲ್ಲಿ ಕಿಡ್ನಿ ವೈಫಲ್ಯ, ಹೃದಯಾಘಾತಗಳಿಗೆ ಕಾರಣವಾಗುತ್ತದೆ. ಗೃಹ ಆರೋಗ್ಯದ ಮುಖಾಂತರ ನಾವು ಈಗಲೇ ತಪಾಸಣೆ ನಡೆಸಿ ಔಷಧಗಳನ್ನು ಕೊಟ್ಟರೆ ಮುಂದೆ ಆಗುವ ಪ್ರಾಣಾಪಾಯಗಳನ್ನು ತಡೆಗಟ್ಟಬಹುದಾಗಿದೆ.” -ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.