ವಾಯುಭಾರ ಕುಸಿತ : ಆ.29, 30ರಂದು ರಾಜ್ಯದ ಆರು ಜಿಲ್ಲೆಗಳಿಗೆ ಹೈ ಅಲರ್ಟ್
Team Udayavani, Aug 26, 2021, 7:15 PM IST
ಬೆಂಗಳೂರು: ಅರಬ್ಬಿಸಮುದ್ರದ ಆಗ್ನೇಯ ಭಾಗದ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪೂರ್ವ ಅರಬ್ಬಿಸಮುದ್ರದ ಕರ್ನಾಟಕ ಕೇರಳದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಇದರ ಪರಿಣಾಮ ಆ.29, 30ರಂದು ಆರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
30ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆ ನಿರೀಕ್ಷಿಸಿದ್ದು, ಆ.27 ಮತ್ತು 28ರಂದು ಯೆಲ್ಲೋ ಅಲರ್ಟ್ ಹಾಗೂ 29, 30ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 20 ಡಿ.ಸೆ. ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ :ಕೋವಿಡ್ ಮುಕ್ತವಾಗುವತ್ತ ಹೆಜ್ಜೆ..;ನಿಯಮ ಕಟ್ಟುನಿಟ್ಟಿನ ಪಾಲನೆ
ನೈರುತ್ಯ ಮುಂಗಾರು ಗುರುವಾರ ರಾಜ್ಯದಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಮುಖ್ಯವಾಗಿ ಬೀದರ್, ಉತ್ತರ ಕನ್ನಡದ ಭಟ್ಕಳ, ಕಲಬುರ್ಗಿಯ ಕಮಲಾಪುರದಲ್ಲಿ ತಲಾ 5 ಸೆಂ.ಮೀ., ಉತ್ತರ ಕನ್ನಡದ ಗೋಕರ್ಣದಲ್ಲಿ 3 ಸೆಂ.ಮೀ., ಬೀದರ್‌ನ ಸೈಗಾಂವ್, ಆಗುಂಬೆ, ಕೃಷ್ಣರಾಜಪೇಟೆ, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ 2 ಸೆಂ.ಮೀ. ಮಳೆಯಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.