ಕರ್ನಾಟಕದಲ್ಲಿ ಆಗಸ್ಟ್, ಸೆಪ್ಟೆಂಬರ್‌ಗೆ ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ ಮಾಹಿತಿ
Team Udayavani, Aug 2, 2021, 9:00 PM IST
ನವ ದೆಹಲಿ: ಮಳೆಗಾಲದ ದ್ವಿತೀಯಾರ್ಧವಾದ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ವಾಡಿಕೆಗಿಂತ ಹೆಚ್ಚೇ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
4 ತಿಂಗಳ ಮಳೆಯ ಋತುವಿನ ಪೈಕಿ 2 ತಿಂಗಳು ಈಗಾಗಲೇ ಮುಗಿದಿದ್ದು, ಇನ್ನೆರಡು ತಿಂಗಳಲ್ಲಿ ದೇಶಾದ್ಯಂತ ವಾಡಿಕೆ ಮಳೆಯಾಗಲಿದೆ ಎಂದು ಇಲಾಖೆ ಪ್ರಧಾನ ನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ತಿಳಿಸಿದ್ದಾರೆ. ಪಶ್ಚಿಮ ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರದ ಒಳನಾಡು, ಜಮ್ಮು-ಕಾಶ್ಮೀರ, ಲಡಾಕ್, ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳ ಕೆಲವು ಭಾಗಗಳಲ್ಲಿ ಆಗಸ್ಟ್ ನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಆದರೆ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರದ ರಾಯಲಸೀಮಾ ಪ್ರದೇಶ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ದಕ್ಷಿಣ ಗುಜರಾತ್, ಈಶಾನ್ಯ ರಾಜ್ಯಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬೀಳಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿ ಸೋಂಕಿನ ಸಂಖ‍್ಯೆ ಇಳಿಕೆ : ಇಂದು 1285 ಹೊಸ ಪ್ರಕರಣ ಪತ್ತೆ
ಮ.ಪ್ರದೇಶದಲ್ಲಿ 60 ಮಂದಿ ಅತಂತ್ರ
ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸೋಮವಾರ ಶಿಯೋಪುರ ಜಿಲ್ಲೆಯಲ್ಲಿ ಜಲಾವೃತವಾದ ಕಟ್ಟಡದ ಮೇಲೆ 60 ಮಂದಿ ಸಿಲುಕಿಕೊಂಡಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ನೆರೆದಿದ್ದಾಗ, ಕಟ್ಟಡದೊಳಕ್ಕೆ ನೀರು ನುಗ್ಗಿದ್ದು, ರಕ್ಷಣಾ ಕಾರ್ಯ ಆರಂಭಿಸಲಾಗಿದೆ. ಇನ್ನು, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲೂ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.