Heavy Rain: ಪ್ರವಾಹ, ಭೂಕುಸಿತ ಪರಿಸ್ಥಿತಿಗಳ ಎದುರಿಸಲು ಸಜ್ಜಾಗಿ: ಸಿಎಂ ಸಿದ್ದರಾಮಯ್ಯ
ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ 24 ಗಂಟೆಯೂ ಕಾರ್ಯ ನಿರ್ವಹಿಸಲಿ, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ
Team Udayavani, Jul 30, 2024, 9:33 PM IST
ಹೊಸದಿಲ್ಲಿ: ರಾಜ್ಯದಲ್ಲೆಡೆ ಭಾರಿ ಮಳೆಯಾಗುತ್ತಿರುವುದರಿಂದ ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವ ಜೊತೆಗೆ ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು, ಈ ಕುರಿತು ಕೂಡ ಜಿಲ್ಲಾಧಿಕಾರಿಗಳು ಎಚ್ಚರವಹಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸಲು ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ:
Wayanadu Landslide: ಕರ್ನಾಟಕದಲ್ಲೂ ಕಟ್ಟೆಚ್ಚರ ಅಗತ್ಯ: ಕೇಂದ್ರ ಸಚಿವ ಕುಮಾರಸ್ವಾಮಿ
ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯ ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳ ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳ ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸಿ , ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸಿ ಎಂದು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.